Homeಮುಖಪುಟಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌; ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌; ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕೇರಳದ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಮಾಜಿಕ ದ್ವೇಷವನ್ನು ಹರಡಿದ ಆರೋಪದಡಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೇಲೆ ಆರೋಪ ಹೊರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಂದ್ರಶೇಖರ್ ಭಾನುವಾರ ಕೇರಳದಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟ ನಡೆದ ಬೆನ್ನಲ್ಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜೀವ್ ಚಂದ್ರಶೇಖರ್ ಪೋಸ್ಟ್‌ನಲ್ಲಿ ಏನಿದೆ?

ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌  ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಚಂದ್ರಶೇಖರ್‌ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌, ಸಚಿವರ ಹೇಳಿಕೆ ಕೋಮುವಾದದಿಂದ ಕೂಡಿದೆ. ವಿಷವುಳ್ಳವರು ವಿಷವನ್ನು ಉಗುಳುತ್ತಲೇ ಇರುತ್ತಾರೆ. ಜವಾಬ್ದಾರಿಯುತ ಸಚಿವರಾಗಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನು ತೋರಿಸಬೇಕಾಗಿತ್ತು. ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ತನಿಖೆಯ ಆರಂಭಿಕ ದಿನಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದರು.

ಕೇರಳದ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದಲ್ಲಿ ಮೂವರು ಮೃತಪಟ್ಟು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವಿಡಿಯೋ ಹಂಚಿಕೊಂಡು ಬಳಿಕ ಪೊಲೀಸರಿಗೆ ಶರಣಾಗಿದ್ದ.

ಇದನ್ನು ಓದಿ: ಉತ್ತರಪ್ರದೇಶ: ಬಿಜೆಪಿ ಮಾಜಿ ಸಂಸದರ ಪುತ್ರ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...