Homeಮುಖಪುಟಹಜಾರಿಬಾಗ್‌ನಲ್ಲಿ ಹಿಂಸಾಚಾರ: 271 ಮಂದಿ ವಿರುದ್ಧ ಪ್ರಕರಣ ದಾಖಲು

ಹಜಾರಿಬಾಗ್‌ನಲ್ಲಿ ಹಿಂಸಾಚಾರ: 271 ಮಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ  271 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ರಾಂಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಜರಂಗದಳದ ಕಾರ್ಯಕರ್ತರು ಬಸ್‌ನಲ್ಲಿ ಹಿಂತಿರುಗುತ್ತಿದ್ದಾಗ ಪೆಲಾವಲ್ ಪ್ರದೇಶದಲ್ಲಿ ಹಿಂಸಾಚಾರ ನಡೆದಿದೆ.

ರಾಂಚಿಯಲ್ಲಿ ನಡೆದ ‘ಶೌರ್ಯ ಜಾಗರಣ ಯಾತ್ರೆ’ ಮುಗಿಸಿ ವಾಪಾಸ್ಸಾಗುತ್ತಿದ್ದ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಿದ್ದರು ಮತ್ತು ಮಸೀದಿಯ ಬಳಿ ಬಸ್ ನಿಂತಾಗ ಕೆಲವು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹಜಾರಿಬಾಗ್‌ನ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ಹೇಳಿದ್ದಾರೆ.

ಇದರ ಬೆನ್ನಲ್ಲೇ ಗುಂಪೊಂದು ಬಸ್ ಮೇಲೆ ಕಲ್ಲು ತೂರಾಟ ನಡೆಸಿದೆ. ಹಿಂಸಾಚಾರದಲ್ಲಿ ಕನಿಷ್ಠ 10 ಬಜರಂಗದಳ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ 271 ಜನರ ವಿರುದ್ಧ ಪೆಲಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ 71 ಜನರನ್ನು ಹೆಸರಿಸಲಾಗಿದ್ದು, ಉಳಿದ ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ. ಸ್ಥಳದಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿದ್ದು, ಅಶಾಂತಿ ತಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಗೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನ್ಯಾನ್ಸಿ ಸಹಾಯ್ ಹೇಳಿದ್ದಾರೆ. ಸಕಾಲಕ್ಕೆ ಪೊಲೀಸರು ಆಗಮಿಸಿದ್ದರಿಂದ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ ಬಜರಂಗದಳವು ಭಾನುವಾರ ರಾಂಚಿಯಲ್ಲಿ ‘ಶೌರ್ಯ ಜಾಗರಣ ಯಾತ್ರೆ’ಗಳನ್ನು ಹಮ್ಮಿಕೊಂಡಿತ್ತು. ಯಾತ್ರೆಯಿಂದ ವಾಪಾಸ್ಸು ಬರುವಾಗ ಬಸ್‌ನಲ್ಲಿದ್ದವರು ಹಜಾರಿಬಾಗ್‌ನ ಮಸೀದಿಯೊಂದರ ಬಳಿ ಆಕ್ಷೇಪಾರ್ಹವಾಗಿ ಘೋಷಣೆ ಕೂಗಿದ್ದರು. ಇದರಿಂದ ಅಶಾಂತಿ ಉಂಟಾಗಿತ್ತು.

ಇದನ್ನು ಓದಿ: ಮಣಿಪುರ: ಬುಡಕಟ್ಟು ಯುವಕನ ಸಜೀವ ದಹನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...