Homeಮುಖಪುಟರಾವಣ ಮಾನವೀಯ ಗುಣವುಳ್ಳವನು ಎಂದಿದ್ದ ನಟ ಸೈಫ್ ಅಲಿ ಖಾನ್ ವಿರುದ್ಧ ದೂರು

ರಾವಣ ಮಾನವೀಯ ಗುಣವುಳ್ಳವನು ಎಂದಿದ್ದ ನಟ ಸೈಫ್ ಅಲಿ ಖಾನ್ ವಿರುದ್ಧ ದೂರು

ರಾವಣ, ಸೀತೆಯನ್ನು ಅಪಹರಿಸಿದ್ದು ಮತ್ತು ರಾಮನೊಂದಿಗೆ ಯುದ್ದ ಮಾಡಿದ್ದು, ತನ್ನ ತಂಗಿ ಶೂರ್ಪನಖಿಯ ಮೂಗನ್ನು ಲಕ್ಷ್ಮಣ ಕತ್ತರಿಸಿದ ಎಂಬ ಕೋಪಕ್ಕೆ ಎಂದು ನಟ ಸೈಫ್ ಹೇಳಿದ್ದರು.

- Advertisement -
- Advertisement -

ಬಾಲಿವುಡ್ ನಟ ಸೈಫ್ ಅಲಿ ಖಾನ್, ತಮ್ಮ ಮುಂದಿನ ಪೌರಾಣಿಕ ಚಿತ್ರ ಆದಿಪುರುಷ್ ಸಿನಿಮಾಕ್ಕೆ ಸಂಬಂಧಿಸಿದ ಸಂದರ್ಶನವೊಂದರಲ್ಲಿ ರಾವಣ ಮಾನವೀಯ ಗುಣವುಳ್ಳವನು ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ್ದ ಸೈಫ್  ವಿರುದ್ಧ ಉತ್ತರ ಪ್ರದೇಶದಲ್ಲಿ ದೂರು‌ ದಾಖಲಾಗಿದೆ.

ಸೈಫ್ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇವರ ಹೇಳಿಕೆ ರಾವಣ ಸೀತೆಯನ್ನು ಅಪಹರಿಸಿದ್ದನ್ನು ಸಮರ್ಥಿಸುತ್ತದೆ ಎಂದು ಹಲವರು ಟೀಕಿಸಿದ್ದರು. ಎಕ್ಷಣ ಎಚ್ಚೆತ್ತುಕೊಂಡ ನಟ ಧಾಮಿಕ ಭಾವನೆಗಳಿಗೆ ದಕ್ಕೆ ತಂದಿದ್ದಕ್ಕಾಗಿ ಕ್ಷಮೆ ಕೇಳುತ್ತಿದ್ದೇನೆ ಎಂದಿದ್ದರು.

ಈಗ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯ ವಕೀಲರೊಬ್ಬರು ನಟ ಸೈಫ್ ಅಲಿ ಖಾನ್ ಮತ್ತು ನಿರ್ದೇಶಕ ಓಂ ರಾವತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಅರ್ಜಿಯನ್ನು ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ನ್ಯಾಯಾಲಯದಲ್ಲಿ ಡಿಸೆಂಬರ್ 23 ರಂದು ವಿಚಾರಣೆ ನಡೆಸಲು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ದೂರು ಸಲ್ಲಿಸಿರುವ ಸಿವಿಲ್ ನ್ಯಾಯಾಲಯದ ವಕೀಲ ಹಿಮಾಂಶು ಶ್ರೀವಾಸ್ತವ, ತಮ್ಮ ಅರ್ಜಿಯಲ್ಲಿ ’ತಾನು ಸನಾತನ ಧರ್ಮದಲ್ಲಿ ನಂಬಿಕೆಯುಳ್ಳವರು’ ಎಂದು ಹೇಳಿದ್ದಾರೆ. ಸಾಂಪ್ರದಾಯಿಕವಾಗಿ, ಭಗವಾನ್ ರಾಮನನ್ನು ಒಳ್ಳೆಯದರ ಸಂಕೇತವೆಂದು ಪರಿಗಣಿಸಿದರೆ, ರಾವಣನನ್ನು ದುಷ್ಟ ಎಂದು ಪರಿಗಣಿಸಲಾಗುತ್ತದೆ. ಸಂದರ್ಶನವು ಸನಾತನ ಧರ್ಮದ ಮೇಲಿನ ನಂಬಿಕೆಯ ನಕಾರಾತ್ಮಕ ಚಿತ್ರಣವಾಗಿದೆ ಎಂದು ವಕೀಲ ಹಿಮಾಂಶು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಸೈಫ್ ಅಲಿ ಖಾನ್ ತಮ್ಮ ಸಂದರ್ಶನದಲ್ಲಿ, ’ರಾಕ್ಷಸ ರಾಜನಾಗಿ ನಟಿಸುವುದು ಆಸಕ್ತಿದಾಯಕವಾಗಿದೆ. ನಮ್ಮ ಚಿತ್ರದಲ್ಲಿ ರಾವಣನನ್ನು ಮಾನವೀಯ ಗುಣವುಳ್ಳವನಾಗಿ ಚಿತ್ರಿಸಿದ್ದೇವೆ. ರಾವಣ, ಸೀತೆಯನ್ನು ಅಪಹರಿಸಿದ್ದು ಮತ್ತು ರಾಮನೊಂದಿಗೆ ಯುದ್ದ ಮಾಡಿದ್ದು, ತನ್ನ ತಂಗಿ ಶೂರ್ಪನಖಿಯ ಮೂಗನ್ನು ಲಕ್ಷ್ಮಣ ಕತ್ತರಿಸಿದ ಎಂಬ ಕೋಪಕ್ಕೆ ಎಂದು ಮಾತನಾಡಿದ್ದರು.

ಓಂ ರಾವತ್‌ ನಿರ್ದೇಶನದ ಪೌರಾಣಿಕ ಚಿತ್ರ ಆದಿಪುರುಷ್‌ನಲ್ಲಿ ಸೈಫ್ ಲಂಕಾದೊರೆ ಲಂಕೇಶ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣವನ್ನು ಆಧರಿಸಿದ ಈ ಸಿನಿಮಾದಲ್ಲಿ ನಟ ಪ್ರಭಾಸ್ ರಾಮನ ಪಾತ್ರ ನಿರ್ವಹಿಸಲಿದ್ದಾರೆ.


ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...