Homeಮುಖಪುಟಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

ಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

- Advertisement -
- Advertisement -

ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಮತ್ತು ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂಧು ಅಧಿಕಾರಿ ಮತ್ತು ಅವರ ಸಹೋದರನ ವಿರುದ್ಧ ಪರಿಹಾರ ಸಾಮಾಗ್ರಿಗಳನ್ನು ಕಳವು ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಜೂನ್ 1 ರಂದು ಕಾಂಥಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.  ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಿಂದ 150 ಕಿಲೋ ಮೀಟರ್‌ ದೂರದ ಮಿಡ್ನಾಪುರ್‌ ಜಿಲ್ಲೆಯ ಪುರಸಭೆಯಿಂದ ಸುವೇಂಧು ಮತ್ತವರ ಸಹೋದರ ಸುಮೇಂಧು ಲಕ್ಷಾಂತರ ರೂಪಾಯಿ ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಕಾಂಥಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನದೀಪ್‌ ಮನ್ನ ಎಂಬುವವರು ಸುವೇಂಧು ಸಹೋದರರ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

29 ಮೇ 2021 ರ ಮಧ್ಯಾಹ್ನ 12:30 ಗಂಟೆಯ ಹೊತ್ತಿಗೆ ಸುವೇಂಧು ಅಧಿಕಾರಿ ಮತ್ತು ಪುರಸಭೆಯ ಮಾಜಿ ಅಧ್ಯಕ್ಷ ಸುಮೇಂಧು ಅವರ ಮಾರ್ಗದರ್ಶನದಲ್ಲಿ ಕೆಲವರು ಮುನ್ಸಿಪಾಲ್ಟಿಯ ಗೋಡೌನ್‌ನಲ್ಲಿ ಇರಿಸಲಾಗಿದ್ದ ಲಕ್ಷಾಂತರ ಮೌಲ್ಯದ ಸರಕಾರ ಪರಿಹಾರ ಸಾಮಾಗ್ರಿಗಳನ್ನು ಬಲವಂತದಿಂದ ಕೊಂಡೊಯ್ದಿದ್ದಾರೆ. ಈ ಸಂದರ್ಭದಲ್ಲಿ ಅಕ್ರಮವಾಗಿ ಗೋಡೌನ್‌ ಬೀಗವನ್ನು ಸಹ ಒಡೆಯಲಾಗಿದೆ ಎಂದು ದೂರಿನಲ್ಲಿ ರತ್ನದೀಪ್‌ ಮನ್ನ ಆರೋಪಿಸಿದ್ದಾರೆ.

ಬಿಜೆಪಿಯು ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರದ ಪರಿಹಾರ ಸಾಮಾಗ್ರಿಗಳನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತ ಬಂದಿತ್ತು. ಈಗ ತಮ್ಮ ಪಕ್ಷದ ನಾಯಕರ ಮೇಲೆ ಪ್ರಕರಣ ದಾಖಾಲಾಗಿರುವ ಕುರಿತು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲು ಅದು ಮುಂದಾಗಿಲ್ಲ.

ಹಾಗೇ ಪ್ರಕರಣದಲ್ಲಿ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಮತ್ತು ಅವರ ಸಹೋದರ ತಮ್ಮ ರಕ್ಷಣೆಗೆ ಕೇಂದ್ರ ಸಶಸ್ತ್ರ ಪಡೆಯ ಸಿಬ್ಬಂದಿಯನ್ನು ಸಹ ಬಳಸಿಕೊಂಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಸುವೇಂಧು ಅಧಿಕಾರಿಯವರು ಇದುವರೆಗೆ ಈ ಸಂಬಂಧ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ.


ಇದನ್ನೂ ಓದಿ; ಪಶ್ಚಿಮ ಬಂಗಾಳ: ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...