Homeಕರ್ನಾಟಕಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪ: ತೇಜಸ್ವಿ ಸೂರ್ಯ ವಿರುದ್ದ ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪ: ತೇಜಸ್ವಿ ಸೂರ್ಯ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ನಿನ್ನೆ (ಏ.25) ಪ್ರಕರಣ ದಾಖಲಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಆಯೋಗ, “ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತ ವಿಡಿಯೋವೊಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಆರೋಪದ ಮೇಲೆ ಏ.25ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 123(3) ರ ಅಡಿ ತೇಜಸ್ವಿ ಸೂರ್ಯ ವಿರುದ್ದ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ “ತೇಜಸ್ವಿ ಸೂರ್ಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆ ಅವರನ್ನು ಅನರ್ಹಗೊಳಿಸಬೇಕು” ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿದ್ದಾರೆ. ಇವರ ವಿರುದ್ದ ಕಾಂಗ್ರೆಸ್‌ನಿಂದ ಸೌಮ್ಯರೆಡ್ಡಿ ಕಣಕ್ಕಿಳಿದಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಹಾಗೂ ಮಾಜಿ ಶಾಸಕಿಯಾಗಿರುವ ಸೌಮ್ಯರೆಡ್ಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್‌ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...