Homeಕರ್ನಾಟಕಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದೇಶದ್ರೋಹದ ಕೇಸ್

ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದೇಶದ್ರೋಹದ ಕೇಸ್

- Advertisement -
- Advertisement -

ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಹತ್ತಿರವಿರುವಾಗಲೇ ಕಾಂಗ್ರೆಸ್, ಜೆಡಿಎಸ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹ, ಅಪರಾಧಿಕ ಪಿತೂರಿ, ಭಾರತ ಸರ್ಕಾರದ ವಿರುದ್ದ ಸಮರಕ್ಕೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯೂಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಖಾಸಗಿ ದೂರು ನೀಡಿದ ಆಧಾರದ ಮೇಲೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಾ.ರ. ಮಹೇಶ್, ಡಿ.ಸಿ.ತಮ್ಮಣ್ಣ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಬೆಂಗಳೂರು ಪೊಲೀಸ್ ಮಾಜಿ ಆಯುಕ್ತ ಸುನೀಲ್‌ ಕುಮಾರ್ ಮತ್ತು ಇತರರ ವಿರುದ್ದ ಭಾರತೀಯ ದಂಡ ಸಂಹಿತೆಯಡಿ 20 ಸೆಕ್ಷನ್ ಗಳನ್ನು ಹಾಕಿ ಎಫ್ಐಆರ್ ದಾಖಲಿಸಿದ್ದಾರೆ.

ಮಾರ್ಚ್ 27 ರಂದು ಆದಾಯ ತೆರಿಗೆ ಇಲಾಖೆ ವಿರುದ್ಧ ಹೇಳಿಕೆ ನೀಡಿರುವುದು ಮತ್ತು ಐಟಿ ದಾಳಿ ನಡೆಸಿರುವುದರ ವಿರುದ್ದ ಮಾರ್ಚ್ 28ರಂದು ಬೆಂಗಳೂರಿನ ಐಟಿ ಕಚೇರಿ ಎದುರು ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: 81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ ಬಯಲಿಗೆ..

ಲೋಕಸಭಾ ಚುನಾವಣೆಗಳು ಹತ್ತಿರವಿದ್ದವು. ಈ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೇ ಪ್ರತಿಭಟನೆ ನಡೆಸಲಾಗಿತ್ತು. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ ನಿವಾಸಿ, ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಆಲೇಗೌಡ ಎಂಬುವರು ಖಾಸಗಿ ದೂರನ್ನು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಹೂಡಿದ್ದರು. ಮಾರ್ಚ್ 27ರಂದು ಎಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಐಟಿ ಅಧಿಕಾರಿಗಳು ಜೆಡಿಎಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸುವ ಮಾಹಿತಿ ದೊರೆತಿದೆ ಎಂದು ಹೇಳಿದ್ದರು.

ಅದಾದ ಮರು ದಿನ ಅಂದರೆ ಮಾರ್ಚ್ 28ರಂದು ಬೆಂಗಳೂರಿನ ಕ್ವೀನ್ಸ್ ಸರ್ಕಲ್ ನಲ್ಲಿರುವ ಐಟಿ ಕಚೇರಿಯ ಮುಂದೆ ಪ್ರತಿಭಟನೆ  ನಡೆಸಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದರು ಎಂದು ಮಲ್ಲಿಕಾರ್ಜುನ ಆಲೇಗೌಡ ಆರೋಪಿಸಿದ್ದಾರೆ.

ಪ್ರತಿಭಟನೆಯ ವೇಳೆ ಐಟಿ ಇಲಾಖೆ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿತ್ತು. ನೂರಾರು ಮಂದಿ ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳದಲ್ಲಿ ಪೊಲೀಸರು ಇದ್ದರೂ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಆಪಾದಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಕೇಸು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...