Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...