Homeಕರ್ನಾಟಕಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ ಬಜರಂಗದಳದ ಕಾರ್ಯಕರ್ತರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11ರಂದು ತನ್ನ ಸ್ನೇಹಿತರೊಂದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ. ರಾತ್ರಿ ಸುಮಾರು 8.30ರ ಸುಮಾರಿಗೆ ಸ್ನೇಹಿತರು ಜಾಯಿಂಟ್ ವ್ಹೀಲ್ ಹತ್ತಿದಾಗ, ಬಾಲಕ ಅವರ ಮೊಬೈಲ್ ಹಿಡಿದು ನಿಂತಿದ್ದ ಎನ್ನಲಾಗಿದೆ. ಈ ವೇಳೆ ಆತನ ಬಳಿಗೆ ಬಂದ ಕೆಲವರ “ನೀನು ಮುಸ್ಲಿಮನಾ?” ಎಂದು ಪ್ರಶ್ನಿಸಿದ್ದಾರೆ. ಬಾಲಕ ಹೌದು ಎಂದಾಗ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಬಾಲಕನನ್ನು ರಕ್ಷಿಸಲು ಮುಂದಾದ ಸ್ನೇಹಿತರ ಮೇಲೂ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಂತರ, ಬಾಲಕನನ್ನು ಬೈಕ್‌ನಲ್ಲಿ ಅಪಹರಿಸಿ ಸುಮಾರು ಐದು ಕಿಲೋಮೀಟರ್ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಹತ್ತಕ್ಕೂ ಹೆಚ್ಚು ಮಂದಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ “ನೀವು ಟೆರರಿಸ್ಟ್‌ಗಳು” ಎಂದು ಅವಹೇಳನಕಾರಿ ಮಾತುಗಳನ್ನಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.

ಹಲ್ಲೆ ವೇಳೆ ಆರೋಪಿಗಳು ಬಾಲಕನಿಗೆ ಬೆದರಿಕೆ ಹಾಕಿ ವಿಡಿಯೋ ರೆಕಾರ್‌ಡ್ ಮಾಡಿಕೊಂಡಿದ್ದಾರೆ. ನಂತರ ತಡರಾತ್ರಿ ಉಜಿರೆಯ ಸಾಯಿರಾಂ ಕಟ್ಟಡದ ಬಳಿ ಆತನನ್ನು ಕರೆತಂದು ಬಿಟ್ಟು, ಹಲ್ಲೆಯ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಘಟನೆಯ ಬಳಿಕ ಮನಗೆ ಬಂದ ಬಾಲಕ ಖಿನ್ನತೆಗೆ ಒಳಗಾಗಿದ್ದ. ಆದರೆ, ಆತ ನಡೆದ ವಿಷಯವನ್ನು ಮನೆಯವರಿಗೆ ತಿಳಿಸಿರಲಿಲ್ಲ. ಆರೋಪಿಗಳು ಪ್ರತಿದಿನ ಬಾಲಕನಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ಕರೆ ಸ್ವೀಕರಿಸದಿದ್ದಾಗ “ನಿನ್ನ ಮನೆಗೆ ಬರುತ್ತೇವೆ” ಎಂಬ ಸಂದೇಶ ಕಳುಹಿಸಿರುವುದಾಗಿ ತಿಳಿದುಬಂದಿದೆ. ಈ ಒತ್ತಡದಿಂದ ಮಾನಸಿಕವಾಗಿ ಕುಗ್ಗಿದ ಬಾಲಕ ಆತ್ಮಹತ್ಯೆ ಯತ್ನಿಸುವ ನಿರ್ಧಾರಕ್ಕೆ ಬಂದು ಡೆತ್ ನೋಟ್ ಬರೆದಿಟ್ಟಿದ್ದ ಎನ್ನಲಾಗಿದೆ.

ಈ ಡೆತ್ ನೋಟ್ ಮನೆಯವರ ಗಮನಕ್ಕೆ ಆಕಸ್ಮಿಕವಾಗಿ ಬಂದಿದ್ದು, ಬಳಿಕ ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಇದರ ಆಧಾರದ ಮೇಲೆ ಬಾಲಕನ ತಂದೆ ಮಾರ್ಚ್ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿಗಳ ವಿರುದ್ದ ಪೊಲೀಸರು ಹಲ್ಲೆ, ಅಪಹರಣ, ಗುಂಪು ದಾಳಿ, ಜೀವ ಬೆದರಿಕೆ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಆರೋಪಗಳ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 137(2), 115(2), 351(2), 352, 353(2) ಮತ್ತು 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಈದಿನ.ಕಾಂ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...