Homeಮುಖಪುಟಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

- Advertisement -
- Advertisement -

ಪುಣೆ: ಮಾಜಿ ಸಚಿವ ವಿಶ್ವಜೀತ್ ಕದಮ್ ಅವರ ಪತ್ರವನ್ನು ನಕಲಿ ಮಾಡುವುದರಿಂದ ಹಿಡಿದು ವಂಚನೆ, ಮಾನನಷ್ಟ, ಅವರು ವಾಸಿಸುವ ಔಂಧ್‌ನಲ್ಲಿರುವ ಸುಪ್ರಿಯಾ ಟವರ್ಸ್ ಸಹಕಾರಿ ವಸತಿ ಸಂಘದ ಬ್ಯಾಂಕ್‌ಗೆ ವಂಚನೆಯ ಮಾಹಿತಿ ನೀಡುವುದು, ನಿವಾಸಿ ವಸತಿ ಸಂಘದ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಯ ನಿರ್ದೇಶಕ ಯೋಗೇಶ್ ಜಾಮ್ದಾರ್ (44) ವಿರುದ್ಧ ಚತುರ್ಶೃಂಗಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸೊಸೈಟಿ ಅಧ್ಯಕ್ಷ ದತ್ತಾತ್ರೇಯ ಜನಾರ್ಧನ್ ಸಾಲುಂಖೆ ಅವರು ಜಾಮ್ದಾರ್ ವಿರುದ್ಧ 2017ರಿಂದ ಸೊಸೈಟಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಜಾಮ್ದಾರ್ ಅವರ ನಿರಂತರ ಕಿರುಕುಳ ಮತ್ತು ಬೆದರಿಕೆಗಳಿಂದಾಗಿ ಸೊಸೈಟಿಯ ಮಾಜಿ ಕಾರ್ಯದರ್ಶಿಯೊಬ್ಬರು ತಮ್ಮ ಫ್ಲಾಟ್ ಅನ್ನು ಮಾರಾಟ ಮಾಡಿ ಜಾಗ ಖಾಲಿ ಮಾಡಿದ್ದಾರೆ ಎಂದು ಅವರು ಸಾಲುಂಖೆ ಹೇಳಿದ್ದಾರೆ.

ದೂರಿನ ಪ್ರಕಾರ, ಯೋಗೇಶ್ ಜಾಮ್ದಾರ್ ಅವರು ಜಾಮ್ದಾರ್ ನಿವಾಸಿ ಸಂಘದ ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಮತ್ತು ನಿಂದನೀಯ ಭಾಷೆಯನ್ನು ಬಳಸಿದ್ದಾರೆ ಮತ್ತು ಅವರಿಗೆ ಬೆದರಿಕೆ ಹಾಕಿದ್ದಾನೆ. ಮಹಿಳೆಯರ ಒಪ್ಪಿಗೆಯಿಲ್ಲದೆ, ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾನೆ. ದೀಪಾವಳಿಯ ಸಮಯದಲ್ಲಿ ಅವರ ಗಂಡಂದಿರನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಅವರ ಮೇಲೆ ಅಶ್ಲೀಲ ಸನ್ನೆಗಳನ್ನು ಮಾಡಿದ್ದಾನೆ. ಮಾಜಿ ಸಚಿವ ಕದಮ್ ಅವರ ಅಧಿಕೃತ ಲೆಟರ್‌ಹೆಡ್ ಅನ್ನು ಪಡೆದುಕೊಂಡು, ಅದರ ಮೇಲೆ ತಿಲಕ್ ರಸ್ತೆಯಲ್ಲಿರುವ ಡಿಡಿಆರ್ ಕಚೇರಿಗೆ ದೂರು ಬರೆದಿದ್ದಾನೆ. ಕದಮ್ ಅವರ ಸಹಿಯನ್ನು ನಕಲಿ ಮಾಡಿದ್ದಾನೆ. ಮತ್ತು ಅದನ್ನೇ ಸಲ್ಲಿಸಿದ್ದಾನೆ. ಜಾಮ್ದಾರ್ ಪತ್ರವೊಂದನ್ನು ನಕಲಿ ಮಾಡಿ ಸೊಸೈಟಿ ದೇವಾಲಯವನ್ನು ಕೆಡವಬೇಕೆಂದು ಒತ್ತಾಯಿಸುವ ಮೂಲಕ ಸೊಸೈಟಿ ನಿವಾಸಿಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾನೆ. ಈತ ಸೊಸೈಟಿ ಬ್ಯಾಂಕ್ ಖಾತೆಯನ್ನು ಸಹ ಸ್ಥಗಿತಗೊಳಿಸಿದ್ದಕ್ಕಾಗಿ ನಿವಾಸಿಗಳು ತೀವ್ರ ತೊಂದರೆ ಅನುಭವಿಸಬೇಕಾಯಿತು. ಜಾಮ್ದಾರ್ ಆಗಾಗ್ಗೆ ಸೊಸೈಟಿ ನಿವಾಸಿಗಳಿಗೆ ತನ್ನ ಬಳಿ ಬಂದೂಕು ಇದೆ ಎಂದು ಬೆದರಿಕೆ ಹಾಕಿದ್ದಾನೆ. ಸೊಸೈಟಿ ಸಭೆಗಳಲ್ಲಿ, ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ತನ್ನ ವಿರುದ್ಧ ಮಾತನಾಡಿದರೆ ನ್ಯಾಯಾಲಯದಲ್ಲಿ ನಿವಾಸಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸಿದ್ದಾನೆ ಎಂದು  ಸಾಲುಂಖೆ ದೂರಿನಲ್ಲಿ ಹೇಳಿದ್ದಾರೆ.

ಈತನ ನಿರಂತರ ಕಿರುಕುಳದಿಂದಾಗಿ, ಸೊಸೈಟಿಯ ನಿವಾಸಿಯೂ ಆಗಿರುವ ರಿಯಲ್ ಎಸ್ಟೇಟ್ ಡೆವಲಪರ್ ಜಯಂತ್ ಕುಲಕರ್ಣಿ 2024ರ ನವೆಂಬರ್ 24ರಂದು ನಡೆದ ಎಜಿಎಂ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು. ಜಾಮ್ದಾರ್ ಸೊಸೈಟಿ ಕಚೇರಿ ಸಿಬ್ಬಂದಿಗೆ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳ ನೀಡುತ್ತಿದ್ದಾನೆ ಮತ್ತು ಸೊಸೈಟಿ ಆಸ್ತಿಯನ್ನು ಹಾಳುಗೆಡುವುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

2016, ಜನವರಿ 1 ಮತ್ತು 2024, ಡಿ.31ರ ನಡುವೆ ಜಾಮ್ದಾರ್ ಮಾಡಿರುವ ಆರೋಪದ ಅಪರಾಧಗಳಿಗಾಗಿ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294, 268, 420, 464, 463, 465, 468, 469, 471, 503, 504, 506, 499, 500, 354 ಡಿ ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...