Homeಕರ್ನಾಟಕಮಂಗಳೂರು: ಶಾಲೆ ಮುಂದೆ ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದ ಆರೋಪ; ಬಿಜೆಪಿ ಶಾಸಕರು ಸೇರಿ ಹಲವರ...

ಮಂಗಳೂರು: ಶಾಲೆ ಮುಂದೆ ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದ ಆರೋಪ; ಬಿಜೆಪಿ ಶಾಸಕರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಬಳಿ ಪ್ರತಿಭಟನೆ ನಡೆಸಿದ ಸಂದರ್ಭ ‘ಜೈ ಶ್ರೀರಾಮ್’ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ ಹಾಗೂ ಜಿಲ್ಲೆಯ ಶಾಂತಿ, ಸುವ್ಯಸ್ಥೆಗೆ ಧಕ್ಕೆ ತರಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಬಿಜೆಪಿ ಶಾಸಕರು, ಕಾರ್ಪೋರೇಟರ್‌ಗಳು ಸೇರಿದಂತೆ 5 ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯವಾಹ ಶರಣ್‌ ಪಂಪ್‌ವೆಲ್‌, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಸಂದೀಪ್‌ ಗರೋಡಿ ಮತ್ತು ಭರತ್‌ ಕುಮಾರ್‌ ವಿರುದ್ಧ ನಗರದ ದಕ್ಷಿಣ ಠಾಣೆಯಲ್ಲಿ ಬುಧವಾರ ಎಫ್‌ಐಆರ್‌ ದಾಖಲಾಗಿದೆ.

ಅನಿಲ್‌ ಜೆರಾಲ್ಡ್‌ ಲೋಬೊ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

“ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರು ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ದೇವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿತ್ತು. ಪ್ರಭಾ ಅವರು ಯಾವುದೇ ಧರ್ಮಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿಲ್ಲ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಯ ಜೊತೆ ಯಾವುದೇ ಚರ್ಚೆ ಮಾಡದೆ, ಫೆ. 12 ರಂದು ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್‌ವೆಲ್, ಸಂದೀಪ್ ಗರೋಡಿ ಹಾಗೂ ಭರತ್ ಕುಮಾರ್ ಅವರು ಸೇರಿ ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ಶಾಲೆಯ ಗೇಟ್ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಮಾತನಾಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ಮತ್ತು ಕ್ರೈಸ್ತ ಧರ್ಮದ ನಡುವೆ ಕಲಹ ಉಂಟಾಗುವಂತೆ ಪ್ರಚೋದಿಸಿ ಮಾತನಾಡಿದ್ದಾರೆ ಎಂದು ಅನಿಲ್‌ ಲೋಬೊ ಅವರು ದೂರಿನಲ್ಲಿ ಆರೋಪಿಸಿರುವುದಾಗಿ ತಿಳಿದು ಬಂದಿದೆ.

ಏನಿದು ಘಟನೆ:

ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ. ಮಕ್ಕಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಫೆ.10ರಂದು ಕೆಲ ವಿದ್ಯಾರ್ಥಿಗಳ ಫೋಷಕರು ಶಾಲೆಯ ಬಳಿ ಜಮಾಯಿಸಿ ಆಡಳಿತ ಮಂಡಳಿ ಮತ್ತು ಶಿಕ್ಷಕರೊಂದಿಗೆ ವಾಗ್ವಾದ ನಡೆಸಿದ್ದರು. ಶಿಕ್ಷಕಿ ಪ್ರಭಾ ಅವರನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು.

ಇದಾಗಿ ಎರಡು ದಿನಗಳ ಬಳಿಕ, ಫೆ. 12ರಂದು ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ಶಾಲೆಯ ಬಳಿ ಜಮಾಯಿಸಿದ ಪೋಷಕರು, ವಿದ್ಯಾರ್ಥಿಗಳು ಮತ್ತು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಸ್ಟೀವನ್ ಎಂಬ ಮತ್ತೊಬ್ಬ ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.

ಪೋಷಕರು ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಶಿಕ್ಷಕ ಸ್ಟೀವನ್ ಅವರನ್ನು ವಜಾ ಮಾಡಿರುವುದಾಗಿ ಶಾಲೆಯ ಆಡಳಿತ ಮಂಡಳಿ ಘೋಷಿಸಿತ್ತು. ಈ ವೇಳೆ ಶಾಸಕ ವೇದವ್ಯಾಸ ಕಾಮತ್ ಶಾಲೆಯ ಮುಂದೆ ಮಕ್ಕಳಿಂದ ಜೈ ಶ್ರೀರಾಮ್ ಘೋಷಣೆ ಕೂಗಿಸಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...