Homeರಾಷ್ಟ್ರೀಯದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿರುವುದರಿಂದ ಅವರು ಜೈಲಿನಲ್ಲೇ ಉಳಿಯಲಿದ್ದಾರೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌ಗೆ ಶುಕ್ರವಾರ(ಇಂದು) ಮತ್ತೊಂದು ಪ್ರಕರಣದಲ್ಲಿ ಜಾಮೀನು ದೊರೆತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಇನ್ನೂ ಎರಡು ಪ್ರಕರಣಗಳು ಬಾಕಿ ಉಳಿದಿರುವುದರಿಂದ ಅವರು ಜೈಲಿನಲ್ಲೇ ಉಳಿಯಲಿದ್ದಾರೆ. ಜೂನ್ 27ರಂದು ಅವರನ್ನು ಬಂಧಿಸಿದ ನಂತರ ಅವರ ವಿರುದ್ಧ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದವು.

2018 ರಲ್ಲಿ ಮಾಡಿದ್ದ ಟ್ವೀಟ್ ವಿರುದ್ಧ ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಇಂದು ಜುಬೇರ್‌ಗೆ ಜಾಮೀನು ನೀಡಲಾಗಿದೆ. ಈ ಪ್ರಕರಣದಲ್ಲಿ ಅವರನ್ನು ಜೂನ್ 27 ರಂದು ಬಂಧಿಸಲಾಗಿತ್ತು. ಅದಾಗಿಯೂ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ಕಾರಣಕ್ಕೆ ಅವರು ಜೈಲಿನಲ್ಲೇ ಇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ಜುಬೇರ್ ಅವರು ತಮ್ಮ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಆರು ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅಲ್ಲದೆ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡವನ್ನು ರದ್ದುಗೊಳಿಸುವಂತೆಯೂ ಅವರು ಕೋರಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಅವರ ವಿರುದ್ಧ ದಾಖಲಾದ ಆರು ಪ್ರಕರಣಗಳ ಪೈಕಿ ಮೂರು ಪ್ರಕರಣಗಳು ಲಖಿಂಪುರ ಖೇರಿ, ಹತ್ರಾಸ್ ಮತ್ತು ಸೀತಾಪುರ್‌ನಲ್ಲಿ ದಾಖಲಾಗಿತ್ತು. ಈ ಪ್ರಕರಣವು ಬಿಜೆಪಿ ಬೆಂಬಲಿತ ಬಲಪಂಥೀಯ ನಾಯಕರನ್ನು “ದ್ವೇಷದ ದೊರೆಗಳು” ಎಂದು ಕರೆದ ಟ್ವೀಟ್‌ನ ವಿರುದ್ಧ ದಾಖಲಿಸಲಾಗಿದೆ.

ಮಂಗಳವಾರದಂದು ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಜುಬೇರ್‌‌ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದರೆ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಅವರ ವಿರುದ್ಧ ದಾಖಲಾಗಿರುವ ಇತರ ಪ್ರಕರಣಗಳಲ್ಲಿ ಅವರಿಗೆ ಜಾಮೀನು ನೀಡಲಾಗಿಲ್ಲ. ಹೀಗಾಗಿ ಅವರು ಇನ್ನೂ ಜೈಲಿನಲ್ಲಿದ್ದಾರೆ. ಈ ನಡುವೆ ಜುಬೇರ್‌ ಅವರು ತನಗೆ ಜೀವ ಬೆದರಿಕೆ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಇದನ್ನೂ ಓದಿ: 6 ಪ್ರಕರಣಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ ಮೊಹಮ್ಮದ್ ಜುಬೇರ್‌

ಅದೇ ದಿನ, ಉತ್ತರ ಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಅವರ ವಿರುದ್ಧದ ಅನೇಕ ಪ್ರಕರಣಗಳನ್ನು ತನಿಖೆ ಮಾಡಿದ್ದಾರೆ. ಶೀಘ್ರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ವೀಡಿಯೊವನ್ನು ಜುಬೇರ್‌ ವೈರಲ್ ಮಾಡಿದ ನಂತರ ವಿಶ್ವದಾದ್ಯಂತ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದು ಆಡಳಿತರೂಢ ಬಿಜೆಪಿಗೆ ತೀವ್ರ ಮುಗರಕ್ಕೀಡು ಮಾಡಿತ್ತು. ಇದಾಗಿ ಕೆಲವೇ ದಿನಗಳ ನಂತರ ಜುಬೇರ್‌ ಬಂಧನ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...