Homeಮುಖಪುಟಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ ಸೈಬರ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ದಂಗೆಗೆ ಪ್ರಚೋದನೆ ನೀಡುವುದು, ಸಾರ್ವಜನಿಕರಲ್ಲಿ ಭಯ ಅಥವಾ ಆತಂಕವನ್ನು ಸೃಷ್ಟಿಸಿ ಶಾಂತಿಗೆ ಭಂಗ ತರುವಂತ ಹೇಳಿಕೆಗಳನ್ನು ನೀಡುವುದು ಸೇರಿದಂತೆ ವಿವಿಧ ಅಪರಾಧಗಳ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 192 ಮತ್ತು 353(1)(b), ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯ ಸೆಕ್ಷನ್ 66 ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120(o) ಅಡಿಯಲ್ಲಿ FIR ದಾಖಲಿಸಲಾಗಿದೆ.

ಜಂತರ್ ಮಂತರ್ ಪ್ರತಿಭಟನಾಕಾರರ ಕುರಿತು ಟಿ.ಜಿ. ಮೋಹನ್‌ದಾಸ್ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ಆರ್‌ಎಸ್‌ಎಸ್ (RSS) ಅಂತರ ಕಾಯ್ದುಕೊಂಡಿದೆ.

ಬಿಜೆಪಿಯ ಬೌದ್ಧಿಕ ಪ್ರಕೋಷ್ಟದ (Intellectual Cell) ಮಾಜಿ ಮುಖ್ಯಸ್ಥರಾಗಿರುವ ಮೋಹನ್‌ದಾಸ್, 30 ನಿಮಿಷಗಳ ವಿಡಿಯೋದಲ್ಲಿ ನೀಟ್ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ಇತರ ಪ್ರಮುಖ ವಿರೋಧ ಪಕ್ಷದ ಸಂಘಟನೆಗಳು ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯನ್ನು ತಾವು ಹೇಗೆ ಹತೋಟಿಗೆ ತರುತ್ತಿದ್ದರು ಎಂಬುದರ ಬಗ್ಗೆ ವಿಸ್ತಾರವಾಗಿ ಮಾತನಾಡಿದ್ದಾರೆ.

ಯೂಟ್ಯೂಬ್ ವೀಡಿಯೊದಲ್ಲಿ ಮೋಹನ್‌ದಾಸ್, ದೆಹಲಿಯ ವಿದ್ಯಾರ್ಥಿ ಪ್ರತಿಭಟನೆಯು “ಸಾಮೂಹಿಕ ಅತ್ಯಾಚಾರದಂತಹ ಘಟನೆಗಳಿಗೆ ಕಾರಣವಾಗಬಹುದು” ಎಂದು ಹೇಳಿದ್ದಲ್ಲದೆ, “ಈ ಪ್ರತಿಭಟನೆಯಲ್ಲಿ ಭಾಗವಹಿಸುವವರು ಅತ್ಯಾಚಾರವನ್ನು ಇಷ್ಟಪಡುತ್ತಾರೆ ಮತ್ತು ಅತ್ಯಾಚಾರಕ್ಕೊಳಗಾಗುವುದನ್ನು ಆನಂದಿಸುವ ಹೆಣ್ಣುಮಕ್ಕಳು ಅಲ್ಲಿದ್ದಾರೆ, ಆದ್ದರಿಂದ ಯಾವುದೇ ದೂರುಗಳು ಬರುವುದಿಲ್ಲ” ಎಂಬ ಅತ್ಯಂತ ಹೀನಾಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಷ್ಟೇ ಅಲ್ಲದೆ, “ನಾನೇನಾದರೂ ಆಡಳಿತದ ಉಸ್ತುವಾರಿ ಹೊಂದಿದ್ದರೆ, ಕರ್ಫ್ಯೂ ವಿಧಿಸಿ ಪ್ರತಿಭಟನಾಕಾರರನ್ನು ಚದುರಲು ಆದೇಶಿಸುತ್ತಿದ್ದೆ. ಅವರು ನಿರಾಕರಿಸಿದರೆ ‘ಗುಂಡಿನ ದಾಳಿ’ (Open Fire) ನಡೆಸುತ್ತಿದ್ದೆ. ಇದರಿಂದ ಕೆಲವು ಜನರು ಸಾಯಬಹುದು ಅಥವಾ ಶಾಶ್ವತವಾಗಿ ಗಾಯಗೊಳ್ಳಬಹುದು, ಆದರೆ ಕೆಲವೇ ಗಂಟೆಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಮತ್ತು ಶವಗಳನ್ನು ಆಸ್ಪತ್ರೆಗೆ ರವಾನಿಸಬಹುದು” ಎಂದು ಅವರು ಹೇಳಿರುವುದು ವೀಡಿಯೊದಲ್ಲಿದೆ ಎನ್ನಲಾಗಿದೆ.

ಈ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಭಾರತೀಯ ವಿದ್ಯಾರ್ಥಿ ಫೆಡರೇಶನ್ (SFI) ಮತ್ತು ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ (AISF) ನಾಯಕರು ಅವರ ವಿರುದ್ಧ ದೂರುಗಳನ್ನು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...