Homeಕರ್ನಾಟಕಅವಹೇಳನಕಾರಿ ಪೋಸ್ಟ್‌: ವಿಶ್ವೇಶ್ವರ ಭಟ್‌ ಮೇಲೆ ಪ್ರಕರಣ ದಾಖಲು

ಅವಹೇಳನಕಾರಿ ಪೋಸ್ಟ್‌: ವಿಶ್ವೇಶ್ವರ ಭಟ್‌ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ ಮತ್ತು ಮಮತಾ ಬ್ಯಾನರ್ಜಿ ಕುರಿತು ಅವಹೇಳನಕಾರಿ ಫೇಸ್ಬುಕ್‌ ಪೋಸ್ಟ್‌ ಹಾಕಿದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮೇಲೆ  ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಮೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವೇಶ್ವರ ಭಟ್‌ ಮೇಲೆ  ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾನೂನು ವಿಭಾಗದ ಉಪಾಧ್ಯಕ್ಷರಾದ ವಕೀಲ ಮಂಜುನಾಥ ನಾಯಕ್ ದೂರು ದಾಖಲಿಸಿದ್ದಾರೆ.

ವಿಶ್ವೇಶ್ವರ ಭಟ್‌ ಅಗಸ್ಟ್‌ 20 ರಂದು ಮಾಡಿದ್ದ ಫೇಸ್ಬುಕ್‌ ಪೋಸ್ಟ್‌ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಮೋಟಮ್ಮ, ಮಮತಾ ಬ್ಯಾನರ್ಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಅಸಹ್ಯಕಾರಿ ಪೋಸ್ಟ್‌ ಮಾಡಿರುವ ಹಿನ್ನೆಲೆಯಲ್ಲಿ ಈ ಕೇಸ್‌ ದಾಖಲಾಗಿದೆ.

ವಿಶ್ವೇಶ್ವರ ಭಟ್‌ ಮಾಡಿದ ಫೋಸ್ಟ್‌ನಲ್ಲಿ ಏನಿದೆ?

ಖ್ಯಾತ ಹಾಲಿವುಡ್ ನಟಿ ಮರ್ಲಿನ್ ಮನ್ರೋ ಹೇಳಿದ ಒಂದು ಮಾತು ನೆನಪಾಗುತ್ತಿದೆ- Your clothes should be tight enough to show you are a teenage girl but loose enough to show you are a lady. ಹೆಣ್ಣು ಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ. ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ. ಆಗೊಮ್ಮೆ ಈಗೊಮ್ಮೆ ಧರಿಸಿದಾಗ ಮನೆಯಲ್ಲಿ ಸದನ ಸದೃಶ ವಾತಾವರಣ ನಿರ್ಮಿಸಬಾರದು, ಕೆಲ ದಿನಗಳ ಬಳಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ. ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ ? ಒಮ್ಮೆ ಯೋಚಿಸಿ ಎಂದು ಪೋಸ್ಟ್ ಮಾಡಲಾಗಿದೆ.

ವಿಶ್ವೇಶ್ವರ ಭಟ್ ತನ್ನ ಬರಹದಲ್ಲಿ ಮಹಿಳೆಯರ ಬಗ್ಗೆ, ಮಹಿಳೆಯರ ದೇಹದ ಬಗ್ಗೆ, ಉಡುಗೆಯ ಹಾಗೂ ಅವರ ಘನತೆಗೆ ಕುಂದಾಗುವಂತೆ ಅವಹೇಳನಕಾರಿಯಾಗಿ ಬರೆದಿದ್ದು ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹರಡಿದೆ. ಆದ್ದರಿಂದ ವಿಶ್ವೇಶ್ವರ ಭಟ್ ಮೇಲೆ ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮನಗರ: ಮೈಮೇಲೆ ಮಲ ಸುರಿದುಕೊಂಡು  ಪೌರಕಾರ್ಮಿಕರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...