Homeಕರ್ನಾಟಕಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ...

ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬೆಂಗಳೂರಿನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ತೆರಳಿ ಮಾಲ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ  ಸೇರಿದಂತೆ ಐವರ  ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಡಿ. 23ರಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಹಿನ್ನಲೆಯಲ್ಲಿ  ಕ್ರಿಸ್ ಮಸ್ ಟ್ರೀ  ಪ್ರದರ್ಶನ ಹಾಗೂ ಅದಕ್ಕೆ 200 ರೂ. ಟಿಕೆಟ್ ನಿಗದಿಪಡಿಸಲಾಗಿತ್ತು. ಇದಕ್ಕೆ ವಿರೋಧಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ಮಾಲ್‌ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ. ಇದಲ್ಲದೆ ಡಿ.25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ ಜೀವ ಬೆದರಿಕೆ ಹಾಕಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಪುನೀತ್ ಹಾಗೂ ಇತರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಹಾಗೂ ಇತರರು ಅಕ್ರಮವಾಗಿ ಗುಂಪು ಕಟ್ಟಿಕೊಂಡು ಬಂದು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್ ಪ್ರವೇಶಿಸುತ್ತಿದ್ದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬವೆಂಬ ಕಾರಣಕ್ಕೆ ಅಲಂಕಾರ ಮಾಡಲಾಗಿದೆ. ಹಿಂದೂ ಹಬ್ಬವಿದ್ದಾಗಲೂ ಇದೇ ರೀತಿಯಲ್ಲಿ ಅಲಂಕಾರವಿರಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದ್ದು, ಅಂದು ಮಾಲ್‌ಗೆ ವಿಶೇಷ ಅಲಂಕಾರ ಮಾಡಬೇಕು. ಇಲ್ಲದಿದ್ದರೆ, ಸುಮ್ಮನೇ ಬಿಡುವುದಿಲ್ಲ ಎಂದು ಪುನೀತ್ ಕೆರೆಹಳ್ಳಿ ಹಾಗೂ ಇತರರು ಜೀವ ಬೆದರಿಕೆಯೊಡ್ಡಿದ್ದಾರೆ. ಮಾಲ್‌ ಪ್ರವೇಶ ದ್ವಾರದ ಎದುರು ನಿಂತು ಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಸಾರ್ವಜನಿಕರನ್ನು ಧಾರ್ಮಿಕವಾಗಿ ಪ್ರಚೋದಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿಲಾಗಿದೆ.

ಇದ್ರೀಷ್‌ ಪಾಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ  ಪುನೀತ್ ಕೆರೆಹಳ್ಳಿ ಗೋ ರಕ್ಷಣೆಯ ಹೆಸರನ್ನು ಹೇಳಿಕೊಂಡು ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಈತನ ವಿರುದ್ಧ ಕೊಲೆ,  ಜಾತಿನಿಂದನೆ, ಗೂಂಡಾಗಿರಿ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿದ ಸರಕಾರ, ಪುನೀತ್‌ನನ್ನು ಬಂಧನಮುಕ್ತಗೊಳಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿತ್ತು.

ಇದನ್ನು ಓದಿ: ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...