Homeಕರ್ನಾಟಕರೈತರು, ವಿದ್ಯಾರ್ಥಿಗಳು, ಸಾಮಾನ್ಯರ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ : ಸಚಿವ ಪರಮೇಶ್ವರ್

ರೈತರು, ವಿದ್ಯಾರ್ಥಿಗಳು, ಸಾಮಾನ್ಯರ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ : ಸಚಿವ ಪರಮೇಶ್ವರ್

- Advertisement -
- Advertisement -

ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಮಾತ್ರ ಹಿಂಪಡೆದಿಲ್ಲ. ರೈತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಇಂದು (ಅ.14) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾನೂನಿನ ಚೌಕಟ್ಟಿನಲ್ಲಿ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆ ಮಾಡಿದ್ದೇವೆ. ನ್ಯಾಯಾಲಯ ಒಪ್ಪಿದರೆ ಪ್ರಕರಣ ರದ್ದಾಗಲಿದೆ. ಇಲ್ಲವಾದರೆ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ನಮ್ಮ ಮುಂದೆ 56 ಪ್ರಕರಣಗಳು ಬಂದಿದ್ದವು. ಆ ಪೈಕಿ 43 ಅನ್ನು ವಾಪಸ್ ಪಡೆದಿದ್ದೇವೆ. ಇವುಗಳಲ್ಲಿ ಬರೀ ಅಲ್ಪಸಂಖ್ಯಾತರದ್ದೇ ಇವೆಯಾ? ರೈತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರ ಪ್ರಕರಣಗಳಿವೆ. ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿದ್ದರೆ, 43 ಪ್ರಕರಣಗಳೂ ಅಲ್ಪಸಂಖ್ಯಾತರಿಗೆ ಸೇರಿದ್ದಾಗಿದ್ದರೆ ಬಿಜೆಪಿಯವರ ಆರೋಪವನ್ನು ಒಪ್ಪಿಕೊಳ್ಳಬಹುದಿತ್ತು” ಎಂದಿದ್ದಾರೆ.

“ಯಾವುದೇ ಪ್ರಕರಣವನ್ನು ವಾಪಸ್ ಪಡೆಯಬೇಕಾದರೆ, ಅದಕ್ಕೊಂದು ಪ್ರಕ್ರಿಯೆ ಇದೆ. ಸುಳ್ಳು ಕೇಸ್ ಹಾಕಿದ್ದಾರೆ, ಪೂರಕವಾದ ಸೆಕ್ಷನ್ ಹಾಕಿಲ್ಲ, ನಡೆದಿರುವ ಘಟನೆಯೇ ಬೇರೆ ದಾಖಲಿಸಿರುವ ಕೇಸ್ ಬೇರೆ ಎಂದು ಆರೋಪಿಸಿ ಮನವಿ ಕೊಟ್ಟಿರುತ್ತಾರೆ. ಅದನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸುತ್ತದೆ. ಸಾಮಾನ್ಯವಾಗಿ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ಮಾಡಿರುತ್ತಾರೆ. ನಮಗೆ ಬರುವ ಮನವಿಗಳನ್ನು ಇಲಾಖೆಗೆ ಕಳುಹಿಸುತ್ತೇವೆ. ಅವರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಸಾಕ್ಷ್ಯ ಸಂಗ್ರಹಣೆಯಲ್ಲಿ ಆದ ಲೋಪದೋಷಗಳನ್ನು ಪರಿಶೀಲಿಸಿ ಸಂಪುಟ ಉಪ ಸಮಿತಿ ಮುಂದೆ ತರುತ್ತಾರೆ” ಎಂದು ತಿಳಿಸಿದ್ದಾರೆ.

“ಸಂಪುಟ ಉಪ ಸಮಿತಿ ಪ್ರಕರಣಗಳ ಬಗ್ಗೆ ಚರ್ಚಿಸುತ್ತದೆ. ಹುಬ್ಬಳ್ಳಿ ಪ್ರಕರಣದಲ್ಲೂ ಮನವಿ ಕೊಟ್ಟಿದ್ದರು. ಅಷ್ಟೊಂದು ಜನರ ಮೇಲೆ ಪ್ರಕರಣ ದಾಖಲಿಸುವ ಅಗತ್ಯವಿಲ್ಲ ಎಂಬುವುದು ಚರ್ಚೆಯಾಗಿ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದಿದ್ದಾರೆ.

“ನಮ್ಮ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಾಲಯ ಒಪ್ಪಿದರೆ ಮಾತ್ರ ಪ್ರಕರಣ ವಾಪಸ್ ಪಡೆಯಲು ಸಾಧ್ಯ, ಇಲ್ಲವಾದರೆ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ಸರ್ಕಾರ ಇರುವಾಗಲೂ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ. ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಇದನ್ನು ಮಾಡಲಾಗುತ್ತದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆದ ಬಳಿಕ, ಅವರ ವಿರುದ್ದದ ಪ್ರಕರಣವನ್ನು ಅವರೇ ವಾಪಸ್ ಪಡೆದಿದ್ದರು. ಬಿಜೆಪಿಯವರ ಯಾರ ಮೇಲೆ ಆಪಾದನೆ ಹೊರಿಸುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...