Homeಮುಖಪುಟನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆ 'ಅಸ್ವಾಭಾವಿಕ' ಎಂದ ತನಿಖಾ ಸಮಿತಿ

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆ ‘ಅಸ್ವಾಭಾವಿಕ’ ಎಂದ ತನಿಖಾ ಸಮಿತಿ

- Advertisement -
- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ನಿವಾಸಕ್ಕೆ ಬೆಂಕಿ ಬಿದ್ದ ಬಗ್ಗೆ ಪೊಲೀಸ್ ದೂರು ದಾಖಲಿಸದಿರುವುದು ಮತ್ತು ಅಲಹಾಬಾದ್ ಹೈಕೋರ್ಟ್‌ಗೆ ಅವರ ವರ್ಗಾವಣೆಯನ್ನು ಯಾವುದೇ ವಿರೋಧವಿಲ್ಲದೇ ಸ್ವೀಕರಿಸಿರುವುದನ್ನು, ಅವರ ನಿವಾಸದಲ್ಲಿ ನಗದು ಪತ್ತೆಯಾದ ಆರೋಪಗಳನ್ನು ತನಿಖೆ ಮಾಡಲು ರಚಿಸಲಾದ ಸಮಿತಿಯು ಅಸ್ವಾಭಾವಿಕ ಎಂದು ಪರಿಗಣಿಸಿದೆ.

ಈ ಸಂಶೋಧನೆಗಳ ಆಧಾರದ ಮೇಲೆ, ಸುಪ್ರೀಂ ಕೋರ್ಟ್ ರಚಿಸಿದ್ದ ಮೂವರು ಸದಸ್ಯರ ಸಮಿತಿಯು ನ್ಯಾಯಮೂರ್ತಿ ವರ್ಮಾ ಅವರನ್ನು ವಜಾಗೊಳಿಸಲು ಶಿಫಾರಸು ಮಾಡಿದೆ.

ಮಾರ್ಚ್ 14 ರಂದು ದೆಹಲಿಯಲ್ಲಿರುವ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ನಗದು ಸಂಗ್ರಹ ಪತ್ತೆಯಾಗಿತ್ತು. ಆಗ ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಇರಲಿಲ್ಲ. ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿಗೆ ವರದಿ ಮಾಡಿದ ನಂತರ, ಸುಪ್ರೀಂ ಕೋರ್ಟ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಿತು.

ನ್ಯಾಯಮೂರ್ತಿ ವರ್ಮಾ ಅವರ ಮೇಲೆ ದೋಷಾರೋಪಣೆ ಮಾಡಲು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ವಿಚಾರಣೆಗೆ ಒಳಗಾದ ನ್ಯಾಯಮೂರ್ತಿ ವರ್ಮಾ ಅವರ ಹಲವಾರು ಸಿಬ್ಬಂದಿ ಮಾರ್ಚ್ 14-15ರ ಮಧ್ಯದ ರಾತ್ರಿ ವಾಟ್ಸಾಪ್ ಮೂಲಕ ಮಾತ್ರ ಅವರೊಂದಿಗೆ ಸಂವಹನ ನಡೆಸಿದ್ದೇವೆ ಎಂದು ಹೇಳಿದರು. ಈ ವಾಟ್ಸಾಪ್ ಸಂವಹನದ ವಿವರಗಳನ್ನು ಹಿಂಪಡೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ಇದು ಎನ್‌ಕ್ರಿಪ್ಟ್ ಮಾಡಲಾದ ವೇದಿಕೆಯಾಗಿದೆ ಎಂದು ತನಿಖಾ ತಂಡ ಹೇಳಿಕೊಂಡಿದೆ.

ನ್ಯಾಯಮೂರ್ತಿ ವರ್ಮಾ ಮತ್ತು ಅವರ ಪತ್ನಿ ದೆಹಲಿಗೆ ಹಿಂದಿರುಗಿದ ನಂತರ ಒಮ್ಮೆಯೂ ಬೆಂಕಿಬಿದ್ದ ಕೋಣೆಗೆ ಭೇಟಿ ನೀಡಿಲ್ಲ ಎಂದು ಸಮಿತಿಯು ಕಂಡುಹಿಡಿದಿದೆ. ನ್ಯಾಯಮೂರ್ತಿ ವರ್ಮಾ ತಮ್ಮ ಕುಟುಂಬ ಸದಸ್ಯರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುವುದಾಗಿ ಹೇಳುವ ಮೂಲಕ ಇದನ್ನು ಸಮರ್ಥಿಸಲು ಪ್ರಯತ್ನಿಸಿದ್ದೆರು ಎಂದು ಹೇಳಿದೆ.

ಸಮಿತಿಯು ಅವರ ಈ ನಡೆಯನ್ನು ವಿಚಿತ್ರವೆಂದು ಕಂಡುಕೊಂಡಿದೆ. ಏಕೆಂದರೆ, ಅಂತಹ ಸಂದರ್ಭಗಳಲ್ಲಿ ಯಾರಾದರೂ ಒಮ್ಮೆಯಾದರೂ ಸ್ಥಳಕ್ಕೆ ಭೇಟಿ ನೀಡಿ ಹಾನಿಯನ್ನು ಪರೀಕ್ಷಿಸುತ್ತಾರೆ ಎಂದು ಹೇಳಿದೆ.

ನ್ಯಾಯಮೂರ್ತಿ ವರ್ಮಾ ಅವರ ವಿರುದ್ಧ ಪಿತೂರಿ ನಡೆದಿದೆ ಎಂದು ಆರೋಪಿಸಿದ್ದರೂ ಅವರು ಪೊಲೀಸರಿಗೆ ಎಂದಿಗೂ ದೂರು ನೀಡಲಿಲ್ಲ. ನಿಜವಾಗಿಯೂ ಯಾವುದೇ ಪಿತೂರಿ ಇದ್ದರೆ, ನ್ಯಾಯಾಧೀಶರು ದೂರು ದಾಖಲಿಸಬೇಕಿತ್ತು ಅಥವಾ ಅದನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತರಬೇಕಿತ್ತು ಎಂದು ವರದಿ ಹೇಳಿದೆ.

ನ್ಯಾಯಮೂರ್ತಿ ವರ್ಮಾ ಅವರು ಅಲಹಾಬಾದ್ ಹೈಕೋರ್ಟ್‌ಗೆ ತಮ್ಮ ವರ್ಗಾವಣೆಯನ್ನು ಪ್ರಸ್ತಾಪಿಸಿದ ದಿನವೇ ಯಾವುದೇ ಪ್ರಶ್ನೆಗಳಿಲ್ಲದೆ ಸದ್ದಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ತನಿಖಾ ಸಮಿತಿಯು ಕಂಡುಹಿಡಿದಿದೆ.

ವರ್ಗಾವಣೆ ಆದೇಶವನ್ನು ಪ್ರಸ್ತಾಪಿಸಿದ ಕೆಲವೇ ಗಂಟೆಗಳಲ್ಲಿ, ಮರುದಿನ ಬೆಳಿಗ್ಗೆಯವರೆಗೆ ತಮ್ಮ ನಿರ್ಧಾರವನ್ನು ತಿಳಿಸಲು ಅವರಿಗೆ ಸಮಯವಿದ್ದರೂ ಸಹ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಒಪ್ಪಿಕೊಂಡಿದ್ದಾರೆ. ವರ್ಗಾವಣೆಯ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಅವರು ಪ್ರಯತ್ನಿಸಲಿಲ್ಲ ಎಂದು ವರದಿ ಹೇಳಿದೆ.

ನ್ಯಾಯಮೂರ್ತಿ ವರ್ಮಾ ವಿರುದ್ಧ ಇನ್ನೂ ಹಲವಾರು ಅಂಶಗಳು ಕೆಲಸ ಮಾಡಿದ್ದವು. ಸ್ಟೋರ್ ರೂಮ್ ಮೇಲ್ವಿಚಾರಣೆ ಮಾಡುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಿಸಿಟಿವಿಯನ್ನು ಭದ್ರತಾ ಸಿಬ್ಬಂದಿ ನಿಯಂತ್ರಿಸುತ್ತಿದ್ದು, ಅದು ಏಕೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ತಮಗೆ ತಿಳಿದಿಲ್ಲ ಎಂದು ನ್ಯಾಯಮೂರ್ತಿ ವರ್ಮಾ ಹೇಳಿದ್ದಾರೆ.

ಇದಲ್ಲದೆ, ಮಾರ್ಚ್ 15 ರ ಮಧ್ಯರಾತ್ರಿ ಪಿಸಿಆರ್ ಇನ್-ಚಾರ್ಜ್ ಸುನಿಲ್ ಕುಮಾರ್ ಮಾಡಿದ 11 ಸೆಕೆಂಡುಗಳ ವೀಡಿಯೊದಲ್ಲಿ ಬಾಗಿಲಿನ ಮುಂದೆ ಮತ್ತು ಸ್ಟೋರ್ ರೂಮ್‌ನ ಹಿಂಭಾಗದಲ್ಲಿ ಹಣದ ರಾಶಿಗಳು ಇರುವುದನ್ನು ತೋರಿಸಲಾಗಿದೆ. ಒಬ್ಬ ವ್ಯಕ್ತಿ “ಕೋಣೆಯು ನೋಟುಗಳಿಂದ ತುಂಬಿದೆ, ಅದನ್ನು ಕಾಣಬಹುದು” ಎಂದು ಹೇಳುವುದು ಕೇಳಿಬರುತ್ತಿದೆ.

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...