ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಆರೋಪಗಳ ಕುರಿತು ತನಿಖೆ ನಡೆಸಿದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಸಮಿತಿಯ ವರದಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಗದು ಪತ್ತೆ ಪ್ರಕರಣ
ಸಮಿತಿಯ ವರದಿಯ ಜೊತೆಗೆ, ಸಿಜೆಐ ಅವರು ನ್ಯಾಯಮೂರ್ತಿ ವರ್ಮಾ ಅವರ ಪ್ರತಿಕ್ರಿಯೆಯನ್ನು ಸಹ ಹಂಚಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ನಗದು ಪತ್ತೆ ಪ್ರಕರಣ
“ಭಾರತದ ಮುಖ್ಯ ನ್ಯಾಯಮೂರ್ತಿ, ಆಂತರಿಕ ಕಾರ್ಯವಿಧಾನದ ಪ್ರಕಾರ, ಮೇ 3 ರಂದು ತ್ರಿಸದಸ್ಯ ಸಮಿತಿ ವರದಿಯ ಪ್ರತಿಯನ್ನು ಮತ್ತು ಮೇ 6 ರಂದು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಂದ ಬಂದ ಪತ್ರ/ಪ್ರತಿಕ್ರಿಯೆಯನ್ನು ಭಾರತದ ರಾಷ್ಟ್ರಪತಿ ಮತ್ತು ಭಾರತದ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಹೇಳಿಕೆಯಲ್ಲಿ ತಿಳಿಸಿದೆ.
ಸಿಜೆಐ ಖನ್ನಾ ಅವರು ಈ ಹಿಂದೆ ಸಮಿತಿಯ ವರದಿಯನ್ನು ನ್ಯಾಯಮೂರ್ತಿ ವರ್ಮಾ ಅವರಿಗೆ ಕಳುಹಿಸಿದ್ದರು ಮತ್ತು ನೈಸರ್ಗಿಕ ನ್ಯಾಯದ ತತ್ವವನ್ನು ಅನುಸರಿಸಿ ಅವರ ಪ್ರತಿಕ್ರಿಯೆಯನ್ನು ಕೋರಿದ್ದರು ಎಂದು ತಿಳಿದುಬಂದಿದೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯು ಸಿಜೆಐಗೆ ತನ್ನ ವರದಿಯನ್ನು ಸಲ್ಲಿಸಿತ್ತು.
ಮಾರ್ಚ್ 14 ರಂದು ರಾತ್ರಿ 11.35 ರ ಸುಮಾರಿಗೆ ನ್ಯಾಯಮೂರ್ತಿ ವರ್ಮಾ ಅವರ ಲುಟಿಯೆನ್ಸ್ ದೆಹಲಿ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಮೊದಲು ಪ್ರತಿಕ್ರಿಯಿಸಿದವರಲ್ಲಿ ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯಸ್ಥರು ಸೇರಿದಂತೆ 50 ಕ್ಕೂ ಹೆಚ್ಚು ಜನರ ಸಾಕ್ಷ್ಯಗಳನ್ನು ಸಮಿತಿಯು ವಿಶ್ಲೇಷಿಸಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.
ನಗರದು ಪತ್ತೆಯಾಗುವ ಸಮಯದಲ್ಲಿ ನ್ಯಾಯಮೂರ್ತಿ ವರ್ಮಾ ಅವರು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು. ಪ್ರಕರಣದ ನಂತರ ಅವರನ್ನು ಅವರ ಮಾತೃ ಕೋರ್ಟ್ ಅದ ಅಲಹಾಬಾದ್ ಹೈಕೋರ್ಟ್‌ಗೆ ಅವರನ್ನು ವರ್ಗಾಯಿಸಲಾಗಿತ್ತು. ಅದಾಗ್ಯೂ, ಅವರಿಗೆ ಯಾವುದೆ ಕೆಲಸವನ್ನು ನೀಡಿರಲಿಲ್ಲ. ಅವರ ವರ್ಗಾವಣೆ ವಿರೋಧಿಸಿ ಈ ವೇಳೆ ಅಲಹಾಬಾದ್ ಹೈಕೋರ್ಟ್‌ನ ವಕೀಲರು ಪ್ರತಿಭಟನೆ ನಡೆಸಿದ್ದರು.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

