Homeಮುಖಪುಟನಗದು ಪತ್ತೆ ಪ್ರಕರಣ | ಸುಪ್ರಿಂಕೋರ್ಟ್‌ನ ತನಿಖಾ ವರದಿ ರಾಷ್ಟ್ರಪತಿ, ಪ್ರಧಾನಿಗೆ ರವಾನೆ

ನಗದು ಪತ್ತೆ ಪ್ರಕರಣ | ಸುಪ್ರಿಂಕೋರ್ಟ್‌ನ ತನಿಖಾ ವರದಿ ರಾಷ್ಟ್ರಪತಿ, ಪ್ರಧಾನಿಗೆ ರವಾನೆ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಆರೋಪಗಳ ಕುರಿತು ತನಿಖೆ ನಡೆಸಿದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಸಮಿತಿಯ ವರದಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಗದು ಪತ್ತೆ ಪ್ರಕರಣ

ಸಮಿತಿಯ ವರದಿಯ ಜೊತೆಗೆ, ಸಿಜೆಐ ಅವರು ನ್ಯಾಯಮೂರ್ತಿ ವರ್ಮಾ ಅವರ ಪ್ರತಿಕ್ರಿಯೆಯನ್ನು ಸಹ ಹಂಚಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ನಗದು ಪತ್ತೆ ಪ್ರಕರಣ

“ಭಾರತದ ಮುಖ್ಯ ನ್ಯಾಯಮೂರ್ತಿ, ಆಂತರಿಕ ಕಾರ್ಯವಿಧಾನದ ಪ್ರಕಾರ, ಮೇ 3 ರಂದು ತ್ರಿಸದಸ್ಯ ಸಮಿತಿ ವರದಿಯ ಪ್ರತಿಯನ್ನು ಮತ್ತು ಮೇ 6 ರಂದು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಂದ ಬಂದ ಪತ್ರ/ಪ್ರತಿಕ್ರಿಯೆಯನ್ನು ಭಾರತದ ರಾಷ್ಟ್ರಪತಿ ಮತ್ತು ಭಾರತದ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಹೇಳಿಕೆಯಲ್ಲಿ ತಿಳಿಸಿದೆ.

ಸಿಜೆಐ ಖನ್ನಾ ಅವರು ಈ ಹಿಂದೆ ಸಮಿತಿಯ ವರದಿಯನ್ನು ನ್ಯಾಯಮೂರ್ತಿ ವರ್ಮಾ ಅವರಿಗೆ ಕಳುಹಿಸಿದ್ದರು ಮತ್ತು ನೈಸರ್ಗಿಕ ನ್ಯಾಯದ ತತ್ವವನ್ನು ಅನುಸರಿಸಿ ಅವರ ಪ್ರತಿಕ್ರಿಯೆಯನ್ನು ಕೋರಿದ್ದರು ಎಂದು ತಿಳಿದುಬಂದಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯು ಸಿಜೆಐಗೆ ತನ್ನ ವರದಿಯನ್ನು ಸಲ್ಲಿಸಿತ್ತು.

ಮಾರ್ಚ್ 14 ರಂದು ರಾತ್ರಿ 11.35 ರ ಸುಮಾರಿಗೆ ನ್ಯಾಯಮೂರ್ತಿ ವರ್ಮಾ ಅವರ ಲುಟಿಯೆನ್ಸ್ ದೆಹಲಿ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಮೊದಲು ಪ್ರತಿಕ್ರಿಯಿಸಿದವರಲ್ಲಿ ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯಸ್ಥರು ಸೇರಿದಂತೆ 50 ಕ್ಕೂ ಹೆಚ್ಚು ಜನರ ಸಾಕ್ಷ್ಯಗಳನ್ನು ಸಮಿತಿಯು ವಿಶ್ಲೇಷಿಸಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.

ನಗರದು ಪತ್ತೆಯಾಗುವ ಸಮಯದಲ್ಲಿ ನ್ಯಾಯಮೂರ್ತಿ ವರ್ಮಾ ಅವರು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು. ಪ್ರಕರಣದ ನಂತರ ಅವರನ್ನು ಅವರ ಮಾತೃ ಕೋರ್ಟ್‌ ಅದ ಅಲಹಾಬಾದ್ ಹೈಕೋರ್ಟ್‌ಗೆ ಅವರನ್ನು ವರ್ಗಾಯಿಸಲಾಗಿತ್ತು. ಅದಾಗ್ಯೂ, ಅವರಿಗೆ ಯಾವುದೆ ಕೆಲಸವನ್ನು ನೀಡಿರಲಿಲ್ಲ. ಅವರ ವರ್ಗಾವಣೆ ವಿರೋಧಿಸಿ ಈ ವೇಳೆ ಅಲಹಾಬಾದ್ ಹೈಕೋರ್ಟ್‌ನ ವಕೀಲರು ಪ್ರತಿಭಟನೆ ನಡೆಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...