Homeಮುಖಪುಟಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

- Advertisement -
- Advertisement -

ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 2023 ರಿಂದ ಜೈಲಿನಲ್ಲಿರುವ ತಮಿಳುನಾಡಿನ ಮಾಜಿ ವಿದ್ಯುತ್ ಸಚಿವ ವಿ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅವರ ಆರೋಗ್ಯವನ್ನು ಉಲ್ಲೇಖಿಸಿ ಜಾಮೀನು ಅರ್ಜಿಯ ವಾದ ಆಲಿಸಲು ನಿರಾಕರಿಸಿತು. ಅವರ ವಾದಗಳಿಂದ ನಾವು ತೃಪ್ತಿ ಹೊಂದಿಲ್ಲ, ಅವರ ಸ್ಥಿತಿಯನ್ನು ಔಷಧಿಗಳಿಂದ ಗುಣಪಡಿಸಬಹುದು ಎಂದು ಹೇಳಿತ್ತು.

ಬಾಲಾಜಿ ಅವರು 2011-2016 ರ ಹಿಂದಿನ ಜಯಲಲಿತಾ ಅವರ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ಮನಿ-ಲಾಂಡರಿಂಗ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರು ಡಿಸೆಂಬರ್ 2018 ರಲ್ಲಿ ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ಸಮ್ಮುಖದಲ್ಲಿ ಪ್ರಸ್ತುತ ಆಡಳಿತ ಪಕ್ಷವಾದ ಡಿಎಂಕೆಗೆ ಸೇರಿ ಸಚಿವರಾಗಿದ್ದರು.

ಬಾಲಾಜಿ ಅವರ ಜಾಮೀನು ಅರ್ಜಿಗಳನ್ನು ಫೆಬ್ರವರಿಯಲ್ಲಿ ಮದ್ರಾಸ್ ಹೈಕೋರ್ಟ್ ಎರಡು ಬಾರಿ ವಜಾಗೊಳಿಸಿತು. ಮೂರು ಬಾರಿ ವಿಚಾರಣಾ ನ್ಯಾಯಾಲಯವು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಸರ್ವೋಚ್ಚ ನ್ಯಾಯಾಲಯವು ಪರಿಹಾರ ನೀಡಿದ ನಂತರ ಮಾತನಾಡಿದ ಅವರ ವಕೀಲ ಎನ್‌ಆರ್ ಇಳಂಗೊ, “ಪೂರ್ವಭಾವಿ ಅಪರಾಧ ಮತ್ತು ಪಿಎಂಎಲ್‌ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ಪ್ರಕರಣದಲ್ಲಿ ವಿಚಾರಣೆಯನ್ನು ನಡೆಸುವಲ್ಲಿ ದೀರ್ಘ ವಿಳಂಬ ಇರಬಹುದು” ಎಂದರು.

“ಕೆಲವು ಷರತ್ತುಗಳ ಮೇಲೆ ಜಾಮೀನು ನೀಡಲಾಗಿದೆ, ಅವರು ವಾರಕ್ಕೆ ಎರಡು ಬಾರಿ ಅಧಿಕಾರಿಗಳ ಮುಂದೆ ಹಾಜರಾಗಬೇಕು, ಸಾಕ್ಷ್ಯ ಅಥವಾ ಸಾಕ್ಷಿಗಳನ್ನು ಹಾಳು ಮಾಡಬಾರದು ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು” ಎಂದು ವಕೀಲರು ಮಾಹಿತಿ ನೀಡಿದ್ದಾರೆ.

ಬಾಲಾಜಿ ಅವರ ಬಿಡುಗಡೆಯನ್ನು ಅವರ ಬೆಂಬಲಿಗರು ಮತ್ತು ಡಿಎಂಕೆ ಪಕ್ಷದ ಕಾರ್ಯಕರ್ತರು ಪಟಾಕಿ ಸಂಭ್ರಮಿಸಿದ್ದಾರೆ. ಪಕ್ಷದ ಧ್ವಜಗಳನ್ನು ಬೀಸಿ, ಅವರ ಹೆಸರಿನಲ್ಲಿ ಘೋಷಣೆಗಳನ್ನು ಕೂಗಿದರು.

ಈಗ ಅವರನ್ನು ತಮಿಳುನಾಡು ಸಚಿವ ಸಂಪುಟಕ್ಕೆ ಮರುಸೇರ್ಪಡೆ ಮಾಡಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಬೆಂಬಲದ ಸೂಚಕವಾಗಿ ಸ್ಟಾಲಿನ್ ಅವರು ಬಾಲಾಜಿ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡಿದ್ದರು. ಆದರೆ, ಅದು ರಾಜ್ಯಪಾಲ ಆರ್‌ಎನ್ ರವಿ ಅವರೊಂದಿಗೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ರಾಜಕೀಯ ಒತ್ತಾಯಗಳು ಸಾರ್ವಜನಿಕ ನೈತಿಕತೆಯನ್ನು ಮೀರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ ನಂತರ ಅವರು ಫೆಬ್ರವರಿಯಲ್ಲಿ ರಾಜೀನಾಮೆ ನೀಡಿದರು.

ಕಳೆದ ವರ್ಷ, ಗಂಟೆಗಳ ವಿಚಾರಣೆಯ ನಂತರ ಅವರನ್ನು ಅವರನ್ನು ಬಂಧಿಸಲಾಯಿತು; ಜಾರಿ ನಿರ್ದೇಶನಾಲಯವು ಅವರನ್ನು ವಶಕ್ಕೆ ತೆಗೆದುಕೊಂಡಿತ್ತು. ಕೆಲವೇ ಗಂಟೆಗಳ ಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಚೆನ್ನೈ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್‌ ಚಿಕಿತ್ಸೆಗೆ ಒಳಗಾಗಿದ್ದರು.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಾಜಿ ತಮ್ಮ ಅಳಲು ತೋಡಿಕೊಂಡರು. ಆಂಬ್ಯುಲೆನ್ಸ್‌ನಲ್ಲಿ ಮತ್ತು ನಂತರ ಆಸ್ಪತ್ರೆಯಲ್ಲಿ ಅವರು ಅಳುತ್ತಿರುವ ದೃಶ್ಯಗಳು ವ್ಯಾಪಕವಾಗಿ ವೈರಲ್ ಆಗಿತ್ತು. ಅವರ ಹಲವಾರು ಡಿಎಂಕೆ ಸಹೋದ್ಯೋಗಿಗಳು ಬೆಂಬಲವಾಗಿ ಮಾತನಾಡಿದರು, ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಫೆಡರಲ್ ಏಜೆನ್ಸಿಯನ್ನು ದೂಷಿಸಿದರು.

ಇದನ್ನೂ ಓದಿ; ಇಸ್ರೇಲ್ ವಾಯುದಾಳಿ: ಲೆಬನಾನ್‌ ಪ್ರಯಾಣ ತಪ್ಪಿಸುವಂತೆ ಭಾರತೀಯ ರಾಯಭಾರ ಕಚೇರಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...