Homeಮುಖಪುಟಸದನದಲ್ಲಿ ಪ್ರಶ್ನೆ ಕೇಳಲು ಲಂಚ : ಲೋಕಪಾಲ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂಸದೆ ಮಹುವಾ

ಸದನದಲ್ಲಿ ಪ್ರಶ್ನೆ ಕೇಳಲು ಲಂಚ : ಲೋಕಪಾಲ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂಸದೆ ಮಹುವಾ

- Advertisement -
- Advertisement -

ಸದನದಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಿದ ಲೋಕಪಾಲ್‌ ಆದೇಶ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ಅನಿಲ್ ಕ್ಷೇತ್ರರ್ಪಾಲ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು, ಮೊದಲು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿರುವ ಅನುಮತಿ ಆದೇಶವನ್ನು ಸಂಪೂರ್ಣವಾಗಿ ಓದುವುದಾಗಿ ಹೇಳಿದ್ದು, ವಿಚಾರಣೆಯನ್ನು ನವೆಂಬರ್ 21ಕ್ಕೆ ಪಟ್ಟಿ ಮಾಡಿದೆ.

ಲೋಕಪಾಲ್ ಕಾಯ್ದೆಯ ಸೆಕ್ಷನ್ 20(7)(ಎ) ಮತ್ತು ಸೆಕ್ಷನ್ 23(1) ರ ಅಡಿಯಲ್ಲಿ ತನ್ನ ಅಧಿಕಾರ ಚಲಾಯಿಸಿದ್ದ ಲೋಕಪಾಲ್‌, ನವೆಂಬರ್ 12 ರಂದು ಸಿಬಿಐಗೆ ನಾಲ್ಕು ವಾರಗಳಲ್ಲಿ ಆರೋಪಪಟ್ಟಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಜೊತೆಗೆ ಆರೋಪಪಟ್ಟಿಯ ಪ್ರತಿಯನ್ನು ತನಗೆ ಸಲ್ಲಿಸುವಂತೆ ಆದೇಶಿಸಿತ್ತು.

ಲೋಕಪಾಲ್ ಕಾಯ್ದೆಯ ನಿಬಂಧನೆಗಳನ್ನು ಕಡೆಗಣಿಸಿ ಲೋಕಪಾಲ್ ಆದೇಶ ನೀಡಿದೆ ಮತ್ತು ಸ್ವಾಭಾವಿಕ ನ್ಯಾಯದ ತತ್ವಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಮಹುವಾ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ವಿವರವಾದ ಲಿಖಿತ ಮತ್ತು ಮೌಖಿಕ ವಾದ ಪರಿಗಣಿಸದೆಯೇ ಅನುಮತಿ ನೀಡಿರುವುದರಿಂದ ಲೋಕಪಾಲ್ ನೀಡಿರುವ ಆದೇಶ ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ- 2013ಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಪರವಾಗಿ ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಮಹುವಾ ಅವರು ನಗದು ಹಾಗೂ ಉಡುಗೊರೆಗಳನ್ನು ಪಡೆದಿರುವುದಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು.

ಈ ಬಗ್ಗೆ ಸೆಕ್ಷನ್ 20(3)(ಎ) ಅಡಿಯಲ್ಲಿ ಎಲ್ಲಾ ಅಂಶಗಳನ್ನು ತನಿಖೆ ಮಾಡಿ 6 ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ಈ ಹಿಂದೆ ಸಿಬಿಐಗೆ ನಿರ್ದೇಶಿಸಿತ್ತು.

ಲೋಕಪಾಲ್ ಅನುಮತಿ ಆದೇಶದ ಜಾರಿಯನ್ನು ತಕ್ಷಣವೇ ತಡೆಹಿಡಿಯದಿದ್ದರೆ ಸಿಬಿಐ ಆರೋಪಪಟ್ಟಿ ಸಲ್ಲಿಸಲು ಮುಂದಾಗುತ್ತದೆ. ಇದರಿಂದ ತನಗೆ ಸರಿಪಡಿಸಲಾಗದಷ್ಟು ಹಾನಿ ಮತ್ತು ತನ್ನಬಗೆಗೆ ಪೂರ್ವಾಗ್ರಹ ಮೂಡುತ್ತದೆ. ಇದರಿಂದ ತಾನು ಸಲ್ಲಿಸುತ್ತಿರುವ ರಿಟ್‌ ಅರ್ಜಿ ಬಹುತೇಕ ಅರ್ಹತೆ ಕಳೆದುಕೊಳ್ಳುತ್ತದೆ. ಆದ್ದರಿಂದ ನ್ಯಾಯಾಲಯ ತುರ್ತಾಗಿ ಅರ್ಜಿ ವಿಚಾರಣೆ ನಡೆಸುವಂತೆ ಮಹುವಾ ಮೊಯಿತ್ರಾ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...