ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಡೆದ ನಗದು ಪತ್ತೆ ಪ್ರಕರಣದ ತನಿಖೆಗಾಗಿ ಸುಪ್ರೀಂಕೋರ್ಟ್ ನೇಮಿಸಿದ್ದ ಮೂವರು ನ್ಯಾಯಮೂರ್ತಿಗಳ ತನಿಖಾ ಸಮಿತಿಯು ಮಾರ್ಚ್ 14 ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ ಎಂದು THIE ವರದಿ ಹೇಳಿದೆ. ಕೋರ್ಟ್ ಸಮಿತಿಯನ್ನು ರಚಿಸಿದ 40 ದಿನಗಳ ನಂತರ, ನಗದು ಪತ್ತೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿದ ನಂತರ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ ಎಂದು ಅದು ಹೇಳಿದೆ. ನ್ಯಾಯಮೂರ್ತಿ ನಿವಾಸದಲ್ಲಿ
ಸುಪ್ರೀಂಕೋರ್ಟ್ ಮಾರ್ಚ್ 25 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿತ್ತು.
ಪ್ರಸ್ತುತ ಅಲಹಾಬಾದ್ ಹೈಕೋರ್ಟ್‌ನಲ್ಲಿ ಹಾಲಿ ನ್ಯಾಯಮೂರ್ತಿಯಾಗಿರುವ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸಮಿತಿಗೆ ನಿರ್ದೇಶನ ನೀಡಿತ್ತು. ತನಿಖೆಯ ಸಮಯದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯು ದೆಹಲಿಯ 30 ತುಘಲಕ್ ಕ್ರೆಸೆಂಟ್‌ನಲ್ಲಿರುವ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ತನಿಖೆ ನಡೆಸಿತು ಎಂದು ವರದಿಯಾಗಿದೆ.
ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಮೂರ್ತಿ ವರ್ಮಾ ಅವರು ತೀವ್ರವಾಗಿ ನಿರಾಕರಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಕೊಠಡಿ ಮತ್ತು ನಗದು ಪತ್ತೆಯಾಗಿದೆ ಎಂದು ಹೇಳಲಾದ ಕೊಠಡಿ ಒಂದು ಔಟ್‌ಹೌಸ್ ಆಗಿದ್ದು, ನ್ಯಾಯಮೂರ್ತಿ ಮತ್ತು ಅವರ ಕುಟುಂಬ ವಾಸಿಸುವ ಮುಖ್ಯ ಕಟ್ಟಡವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
“ನಾನು ಅಥವಾ ನನ್ನ ಕುಟುಂಬದ ಯಾವುದೇ ಸದಸ್ಯರು ಆ ಸ್ಟೋರ್‌ರೂಮ್‌ನಲ್ಲಿ ಯಾವುದೇ ಹಣವನ್ನು ಇರಿಸಿಲ್ಲ ಎಂದು ನಾನು ನಿಸ್ಸಂದಿಗ್ಧವಾಗಿ ಹೇಳುತ್ತೇನೆ. ಆಪಾದಿತ ನಗದು ನಮಗೆ ಸೇರಿದೆ ಎಂಬ ಅರೋಪವನ್ನು ಬಲವಾಗಿ ಖಂಡಿಸುತ್ತೇನೆ. ಈ ಹಣವನ್ನು ನಾವು ಇಟ್ಟುಕೊಂಡಿದ್ದೇವೆ ಅಥವಾ ಸಂಗ್ರಹಿಸಿದ್ದೇವೆ ಎಂಬ ಕಲ್ಪನೆ ಅಥವಾ ಆರೋಪ ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.
“ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಅಥವಾ ಔಟ್‌ಹೌಸ್‌ನಲ್ಲಿ ತೆರೆದ, ಮುಕ್ತವಾಗಿ ಪ್ರವೇಶಿಸಬಹುದಾದ ಮತ್ತು ಸಾಮಾನ್ಯವಾಗಿ ಬಳಸುವ ಸ್ಟೋರ್‌ರೂಮ್‌ನಲ್ಲಿ ಹಣವನ್ನು ಸಂಗ್ರಹಿಸಬೇಕು ಎಂಬ ಆರೋಪವು ನಂಬಲಾಗದ ಸಂಗತಿಯಾಗಿದೆ,” ಎಂದು ನ್ಯಾಯಮೂರ್ತಿ ವರ್ಮಾ ತಮ್ಮ ಉತ್ತರದಲ್ಲಿ ಹೇಳಿದ್ದಾರೆ.
ಇದಕ್ಕೂ ಮೊದಲು, ಮಾರ್ಚ್ 20 ಮತ್ತು 24, 2025 ರಂದು ನಡೆದ ಸಭೆಗಳಲ್ಲಿ, ಸುಪ್ರೀಂಕೋರ್ಟ್ ಕೊಲಿಜಿಯಂ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್‌ನಲ್ಲಿರುವ ಹೈಕೋರ್ಟ್ ಆಫ್ ಜ್ಯುಡಿಕೇಚರ್‌ಗೆ ವಾಪಸ್ ಕಳುಹಿಸಲು ಶಿಫಾರಸು ಮಾಡಿತ್ತು. ಈ ವಿಷಯದಲ್ಲಿ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ವರದಿಯನ್ನು ಸ್ವೀಕರಿಸಿದ ನಂತರ ಸಿಜೆಐ ತನಿಖಾ ಸಮಿತಿಯನ್ನು ರಚಿಸಿದ್ದರು.
ನಗದು ಪತ್ತೆಯ ಮಾಹಿತಿ ಪಡೆದ ನಂತರ, ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರ ವಿರುದ್ಧ ಆಂತರಿಕ ತನಿಖಾ ಪ್ರಕ್ರಿಯೆಯನ್ನು ಪ್ರಾರಂಭಿಸಿದರು ಎಂದು ಸುಪ್ರೀಂಕೋರ್ಟ್ ಹೇಳಿತ್ತು.
ಮಾರ್ಚ್ 14 ರಂದು ನ್ಯಾಯಮೂರ್ತಿಯ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಗ್ನಿಶಾಮಕ ದಳದವರು ಅದನ್ನು ನಂದಿಸಲು ಆಗಮಿಸಿದ್ದರು. ಈ ವೇಳೆ ಅವರ ನಿವಾಸದಲ್ಲಿ ನಗರದು ಪತ್ತೆಯಾಗಿತ್ತು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಾರ್ಚ್ 14 ರಂದು ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದವರಿಗೆ ಈ ನಗದು ಕಂಡು ಬಂದಿತ್ತು ಎಂದು ಅದು ಹೇಳಿದೆ. ಬೆಂಕಿ ಅವಘಡ ಸಂಭವಿಸಿದಾಗ ನ್ಯಾಯಮೂರ್ತಿ ಅವರ ನಿವಾಸದಲ್ಲಿ ಇರಲಿಲ್ಲ ಎಂದು ವರದಿಯಾಗಿದೆ. ನ್ಯಾಯಮೂರ್ತಿ ನಿವಾಸದಲ್ಲಿ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್
ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

