Homeಕರ್ನಾಟಕಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

- Advertisement -
- Advertisement -

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಉಪೇಂದ್ರ ವಿರುದ್ಧ ಹಲಸೂರು ಗೇಟ್ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.

ಎರಡನೇ ಎಫ್ಐಆರ್ ರದ್ದು ಕೋರಿ ನಟ, ನಿರ್ದೇಶಕ ಉಪೇಂದ್ರ ಅಲಿಯಾಸ್ ಬಿ. ಎಂ. ಉಪೇಂದ್ರ ಕುಮಾರ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಾಸಿಕ್ಯೂಷನ್ ಪರವಾಗಿ ಎಸ್‌ಪಿಪಿ – 1 ಬೆಳ್ಳಿಯಪ್ಪ, ಉಪೇಂದ್ರ ಪರ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡನೆ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2ನೇ ಎಫ್‌ಐಆರ್‌ಗೂ ಸಹ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.

ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ವಿಡಿಯೊ ನೇರ ಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದರು. ಉಪೇಂದ್ರ ಅವರ ಹೇಳಿಕೆಗೆ ರಾಜ್ಯಾದ್ಯಂತ ಹಲವು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ನಟನ ಬಂಧನಕ್ಕೆ ಆಗ್ರಹಿಸಿ ಗೃಹ ಸಚಿವರ ನಿವಾಸಕ್ಕೆ ಬುಧವಾರ ಮುತ್ತಿಗೆ ಯತ್ನವವೂ ನಡೆದಿತ್ತು.

ಉಪೇಂದ್ರ ವಿರುದ್ಧ ಬೆಂಗಳೂರಿನ ಚನ್ನಮ್ಮನಕೆರ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್‌ ಠಾಣೆ ಎಫ್‌ಐಆರ್ ದಾಖಲಾಗಿತ್ತು. ಕೋರ್ಟ್‌ ಆದೇಶದಿಂದಾಗಿ ಬೆಂಗಳೂರು ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಎಫ್‌ಐಆರ್‌ಗಳಲ್ಲೂ ನಟ ಉಪೇಂದ್ರಗೆ ಮಧ್ಯಂತರ ತಡೆ ಸಿಕ್ಕಿದೆ.

ಇದನ್ನೂ ಓದಿ: ಜಾತಿ ನಿಂದನೆ  ಪ್ರಕರಣ: 2ನೇ ಎಫ್ ಐ ಆರ್ ರದ್ದು ಕೋರಿ ಉಪೇಂದ್ರ ಹೈಕೋರ್ಟ್ ಮೊರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...