Homeಕರ್ನಾಟಕಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ

ಜಾತಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ ಸಾಧ್ಯತೆ

- Advertisement -
- Advertisement -

ಹಿಂದುತ್ವ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕನ್ನಡ ಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ಅವರು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಂಧನದ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

”ನಾನು ದಲಿತನಾಗಿರುವ ಕಾರಣ ಪುನೀತ್ ಕೆರೆಹಳ್ಳಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ” ಎಂದು ಭೈರಪ್ಪ ಹರೀಶ್ ಕುಮಾರ್ ಅವರು ದೂರಿನಲ್ಲಿ ಹೇಳಿದ್ದಾರೆ.

”ನಾನೊಬ್ಬ ಕನ್ನಡಪರ ಹೋರಾಟಗಾರನಾಗಿದ್ದು ಇತ್ತೀಚೆಗೆ ಇದೀಸ್ ಪಾಷಾ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆಯಿಂದ ಬಿಡುಗಡೆಗೊಂಡ ಬಳಿಕವೂ ಸಮಾಜದ ಸ್ವಾಸ್ಥ್ಯ ಕದಡಲು ಯತ್ನಿಸುತ್ತಿದ್ದ ಪುನೀತ್ ಕೆರೆಹಳ್ಳಿಯ ಬಗ್ಗೆ ಜಾಗೃತರಾಗಿರುವಂತೆ ಸಾಮಾಜಿಕ ಕಳಕಳಿಯಿಂದ ಮಾಧ್ಯಮ ವರದಿಯನ್ನು ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ದಿನಾಂಕ 17-10-2023 ರಂದು ಪುನೀತ್ ಕೆರೆಹಳ್ಳಿ, ನನ್ನ ಮತ್ತು ನನ್ನ ಪತ್ನಿ ಮಕ್ಕಳ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ. ನನ್ನ ಪತ್ನಿ ,ಮಕ್ಕಳು ತಲೆ ಎತ್ತಿ ನಡೆಯಂದಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

”ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದನು. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಈ ಪೋಸ್‌ಗೆ ಕೆಟ್ಟದ್ದಾಗಿ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದರು.

ಇದಕ್ಕೂ ಮುನ್ನ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆಗಿತ್ತು.

”ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ. ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು” ಎಂದು ದೂರು ದಾಖಲಾಗಿತ್ತು.

ಇದನ್ನೂ ಓದಿ: ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...