Homeಕರ್ನಾಟಕಜಾತಿ ದೌರ್ಜನ್ಯ ಪ್ರಕರಣ: 120 ದಿನ ಕಳೆದರೂ ಆರೋಪ ಪಟ್ಟಿ ಏಕೆ ದಾಖಲಿಸಿಲ್ಲ?; ಅಧಿಕಾರಿಗಳಿಗೆ ಸಿಎಂ...

ಜಾತಿ ದೌರ್ಜನ್ಯ ಪ್ರಕರಣ: 120 ದಿನ ಕಳೆದರೂ ಆರೋಪ ಪಟ್ಟಿ ಏಕೆ ದಾಖಲಿಸಿಲ್ಲ?; ಅಧಿಕಾರಿಗಳಿಗೆ ಸಿಎಂ ತರಾಟೆ

- Advertisement -
- Advertisement -

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ಕಳೆದ ಐದು ವರ್ಷಗಳಲ್ಲಿ ದಾಖಲಾದ 10,893 ಪ್ರಕರಣಗಳಲ್ಲಿ 1,100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಅಪರಾಧ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್‌ ಶೀಟ್‌ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ 60 ದಿನಗಳೊಳಗೆ ಆರೋಪ ಪಟ್ಟಿ ದಾಖಲಾಗದಿದ್ದರೆ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತದೆ. ಹೀಗೆ ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತದಾ ಎಂದು ಖಾರವಾಗಿ ಪ್ರಶ್ನಿಸಿದರು.

ಕರ್ನಾಟಕ ಪೊಲೀಸ್‌ ದೇಶದಲ್ಲಿ ನಂಬರ್ ಒನ್ ಎನ್ನುವ ಅಭಿಪ್ರಾಯ ಇದೆ. ಆದರೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಕೇವಲ 3.44 ಇದೆ. ಅಂದರೆ ಪೊಲೀಸ್‌ ಇಲಾಖೆ ಕಳೆದ ಐದು ವರ್ಷಗಳಲ್ಲಿ ಎಸ್‌.ಸಿ/ಎಸ್‌.ಟಿ. ದೌರ್ಜನ್ಯ ಪ್ರಕರಣಗಳ ವಿಚಾರದಲ್ಲಿ ನಿರ್ಲಕ್ಷ ವಹಿಸಿತ್ತಾ? ಎಂದು ಪ್ರಶ್ನಿಸಿದ್ದಾರೆ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಇದಕ್ಕೆ ಎಸ್.ಪಿ. ಹಾಗೂ ಡಿಸಿಪಿಗಳನ್ನು ನೇರವಾಗಿ ಹೊಗೆ ಮಾಡಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿ ಪ್ರಕರಣಗಳ ಶನಿಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಜಿಗೆ ಸೂಚಿಸಿದರು.

ಇದನ್ನೂ ಓದಿ: ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿ, ಅವರಿಗೆ ಮಾನವೀಯತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...