Homeಕರ್ನಾಟಕಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರಿನ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದು ಪಂಚಾಯಿತಿ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಗ್ರಾಮದ ಮುಖಂಡರು ಬಹಿಷ್ಕರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮಸ್ಥಳ ಸಿದ್ದರಾಮನಹುಂಡಿ ಗ್ರಾಮಕ್ಕೆ ಸಮೀಪದ ಶ್ರೀನಿವಾಸಪುರ ಈಗ ದಲಿತ ದೌರ್ಜನ್ಯದ ವಿವಾದದ ಕೇಂದ್ರವಾಗಿದೆ.

ಗ್ರಾಮದ ಮುಖಂಡರಾದ ಚಿಕ್ಕಂದಯ್ಯ, ಬಸವಯ್ಯ, ಮೋಟ ಮಹದೇವಯ್ಯ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಹದೇವಯ್ಯ ಅವರು ತಮ್ಮ ಕುಟುಂಬಕ್ಕೆ ಬಹಿಷ್ಕಾರ ಹಾಕುವಂತೆ ಆದೇಶ ಹೊರಡಿಸಿದ್ದಾರೆ ಎಂದು ದಲಿತ ಕುಟುಂಬ ಆರೋಪಿಸಿದೆ.

ಕುಟುಂಬದವರ ಪ್ರಕಾರ, ಪಂಚಾಯತಿ ವಿಧಿಸಿದ ₹15,000 ದಂಡವನ್ನು ಪಾವತಿಸಲು ನಿರಾಕರಿಸಿದ ನಂತರ ಸುರೇಶ್ ಅವರ ಕುಟುಂಬಕ್ಕೆ ಬಹಿಷ್ಕಾರವನ್ನು ಜಾರಿಗೊಳಿಸಲಾಗಿದೆ. ಪ್ರಮೋದ್ ಮತ್ತು ಸುರೇಶ್ ಜಗಳವಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದು, ಈ ಬಗ್ಗೆ ಹಿರಿಯರು ಸಭೆ ನಡೆಸಿದ್ದರು.

ವಿವಾದದ ವೇಳೆ ಪ್ರಮೋದ್ ಸಹಚರರು ಸುರೇಶ್ ಮನೆಗೆ ನುಗ್ಗಿ ಅಪಾರ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯನ್ನು ಪರಿಹರಿಸಲು ಗ್ರಾಮದ ಮುಖಂಡರು ಮತ್ತೊಂದು ಸಭೆ ನಡೆಸಿ, ಎರಡೂ ಕಡೆಯವರಿಗೆ ದಂಡ ವಿಧಿಸಿದರು. ಪ್ರಮೋದ್ ₹25 ಸಾವಿರ ದಂಡ, ಸುರೇಶ್ ₹15 ಸಾವಿರ ದಂಡ ವಿಧಿಸಿದ್ದಾರೆ. ಆದರೆ, ಈ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುರೇಶ್, ದಂಡ ಪಾವತಿಸಲು ನಿರಾಕರಿಸಿದರು.

ತಮ್ಮ ಮನೆಗೆ ಮೇಲೆ ದಾಳಿ ಮಾಡಿ, ಹಲವಾರು ವಸ್ತುಗಳನ್ನು ಧ್ವಂಸ ಮಾಡಿದ್ದ ಪ್ರಮೋದ್‌ಗೆ ಹೆಚ್ಚಿನ ದಂಡ ವಿಧಿಸದೆ, ತಮಗೂ ದಂಡ ವಿಧಿಸಿದ್ದ ಗ್ರಾಮದ ಮುಖಂಡರ ನಡೆಯನ್ನು ಸುರೇಶ್‌ ಖಂಡಿಸಿದ್ದರು. ತಮಗೆ ಅನ್ಯಾಯವಾಗಿದೆ. ನಾವು ದಂಡ ಪಾವತಿಸುವುದಿಲ್ಲ ಎಂದು ಸುರೇಶ್‌ ಹೇಳಿದ್ದರು.

ದಲಿತ ಸಮುದಾಯದ ಸುರೇಶ್ ಅವರು ನ್ಯಾಯ ಕೇಳಿದ್ದನ್ನು ಗ್ರಾಮದ ಪ್ರಬಲ ಜಾತಿಯ ಮುಖಂಡರಿಗೆ ಸಹಿಸಲಾಗಿಲ್ಲ. ಸುರೇಶ್‌ ಅವರ ವಾದದಿಂದ ಮುಜುಗರಕ್ಕೀಡಾಗಿ, ಕೆರಳಿದ ಮುಖಂಡರು, ಸುರೇಶ್‌ ತಪ್ಪು ಕಾಣಿಕೆ ಕಟ್ಟುವರೆಗೆ ಅವರ ಕುಟುಂಬವನ್ನು ಯಾರೂ ಒಳಗೊಳ್ಳುವಂತಿಲ್ಲ ಎಂದು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಅವರ ಪ್ರತಿರೋಧದಿಂದ ಕುಪಿತಗೊಂಡ ಗ್ರಾಮದ ಮುಖಂಡರು, ಅವರು ತಮ್ಮನ್ನು ಅವಮಾನಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ದಂಡವನ್ನು ಪಾವತಿಸುವವರೆಗೆ ಗ್ರಾಮದ ಯಾವುದೇ ಕುಟುಂಬವು ಸುರೇಶ್ ಅವರ ಕುಟುಂಬದೊಂದಿಗೆ ಸಂವಹನ ನಡೆಸಬಾರದು ಎಂದು ಆದೇಶ ನೀಡಿದರು.

ಇದರಿಂದ ಸುರೇಶ್ ಮತ್ತು ಆತನ ತಾಯಿ ಮಹದೇವಮ್ಮ ಅವರನ್ನು ಪ್ರತ್ಯೇಕಗೊಳಿಸಲಾಗಿದ್ದು, ಗ್ರಾಮಸ್ಥರು ಅವರ ಸಂಪರ್ಕವನ್ನು ತಪ್ಪಿಸಿದ್ದಾರೆ. ಅವರನ್ನು ಹಳ್ಳಿಯಲ್ಲಿ ಹಬ್ಬಗಳು, ಆಚರಣೆಗಳು ಮತ್ತು ಅಂತ್ಯಕ್ರಿಯೆಗಳಿಂದ ಹೊರಗಿಡಲಾಗುತ್ತದೆ. ಈ ಆದೇಶವನ್ನು ಉಲ್ಲಂಘಿಸಿ ಬಹಿಷ್ಕರಿಸಿದ ಕುಟುಂಬದೊಂದಿಗೆ ಸಂವಹನ ನಡೆಸಿದರೆ ₹5,000 ದಂಡ ವಿಧಿಸಲಾಗುವುದು ಎಂದು ಗ್ರಾಮದ ಮುಖಂಡರು ಎಚ್ಚರಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಸುರೇಶ್ ಹಾಗೂ ಮಹದೇವಮ್ಮ ದೂರು ಸಲ್ಲಿಸಿದ್ದಾರೆ. ಆದರೆ, ಅವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ.

ಇದನ್ನೂ ಓದಿ; ಹರಿಯಾಣ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ ಭಿವಾನಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...