Homeಮುಖಪುಟಯುಪಿ ಸರ್ಕಾರದಲ್ಲಿ ಜಾತಿ ಪಕ್ಷಪಾತ | ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿದ್ದ ಪತ್ರಕರ್ತೆಯ ವಿರುದ್ಧ ಕ್ರಮ...

ಯುಪಿ ಸರ್ಕಾರದಲ್ಲಿ ಜಾತಿ ಪಕ್ಷಪಾತ | ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿದ್ದ ಪತ್ರಕರ್ತೆಯ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್‌ ಆದೇಶ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರದಲ್ಲಿ ಇರುವ ಜಾತಿ ಪಕ್ಷಪಾತದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ ನಾಲ್ಕು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. ಯುಪಿ ಸರ್ಕಾರದಲ್ಲಿ ಜಾತಿ ಪಕ್ಷಪಾತ

ಇದೇ ವೇಳೆ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಪಿ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ನೇತೃತ್ವದ ಪೀಠವು ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತೆ ಮಮತಾ ತ್ರಿಪಾಠಿ ಅವರು ಸಲ್ಲಿಸಿದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಫ್‌ಐಆರ್‌ಗಳು ರಾಜಕೀಯ ಪ್ರೇರಿತವಾಗಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕ್ಷುಲ್ಲಕ ಪ್ರಯತ್ನದೊಂದಿಗೆ ದಾಖಲಿಸಲಾಗಿದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ. ತನ್ನ ಕೆಲವು ಟ್ವೀಟ್‌ಗಳಿಗೆ ಸಂಬಂಧಿಸಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಯುಪಿ ಸರ್ಕಾರದಲ್ಲಿ ಜಾತಿ ಪಕ್ಷಪಾತ

ಅವರ ಮನವಿಯನ್ನು ಆಲಿಸಿದ ಪೀಠವು, “ಪ್ರಕರಣದಲ್ಲಿ ಲೇಖನಗಳಿಗೆ ಸಂಬಂಧಿಸಿದಂತೆ ಅರ್ಜಿದಾರರ (ತ್ರಿಪಾಠಿ) ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಂತೆ ನಿರ್ದೇಶಿಸಲಾಗಿದೆ” ಎಂದು ಹೇಳಿದೆ. ನಾಲ್ಕು ವಾರಗಳ ನಂತರ ಪ್ರಕರಣದ ವಿಚಾರಣೆ ನಡೆಯಲಿದೆ.

ಪತ್ರಕರ್ತೆ ತ್ರಿಪಾಠಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ದವೆ, “ರಾಜ್ಯದ ಸಾಮಾನ್ಯ ಆಡಳಿತದ ಜಾತಿ ಚಲನಶೀಲತೆ” ಕುರಿತ ಸುದ್ದಿ ವರದಿಗಾಗಿ ತಮ್ಮ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಪತ್ರಕರ್ತರಾದ ಅಭಿಷೇಕ್ ಉಪಾಧ್ಯಾಯ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಉಪಾಧ್ಯಾಯ ಅವರ ಮನವಿಯ ಮೇಲಿನ ಸುಪ್ರಿಂಕೋರ್ಟ್‌ ಆದೇಶವನ್ನು ಉಲ್ಲೇಖಿಸಿದ ದವೆ, ತ್ರಿಪಾಠಿ ವಿರುದ್ಧ ದಾಖಲಾಗಿರುವ ಈ ಎಫ್‌ಐಆರ್‌ಗಳಲ್ಲಿ ಒಂದರಲ್ಲಿ ತಾನು ಸಹ-ಆರೋಪಿಯಾಗಿದ್ದೇನೆ ಮತ್ತು ಅವರ ಅರ್ಜಿಯ ಮೇರೆಗೆ, ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಯಾವುದೇ ಕ್ರಮಗಳಿಂದ ಅವರನ್ನು ರಕ್ಷಿಸಿತ್ತು ಎಂದು ಹೇಳಿದ್ದಾರೆ.

“ಪತ್ರಕರ್ತರ ಬರಹಗಳನ್ನು ಸರ್ಕಾರದ ಟೀಕೆ ಎಂದು ಭಾವಿಸುವುದ ಲೇಖಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಉಪಾಧ್ಯಾಯ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಇದು ಶುದ್ಧ ಕಿರುಕುಳವಾಗಿದ್ದು, ಕೇವಲ X ನಲ್ಲಿನ ಪೋಸ್ಟ್‌ಗಳಿಗಾಗಿ ಪತ್ರಕರ್ತೆಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ” ಎಂದು ದವೆ ಹೇಳಿದ್ದಾರೆ.

ವಕೀಲ ಅಮರ್ಜಿತ್ ಸಿಂಗ್ ಬೇಡಿ ಅವರ ಮೂಲಕ ಸಲ್ಲಿಸಲಾಗಿರುವ ಮನವಿಯಲ್ಲಿ, ಪತ್ರಕರ್ತೆ ತ್ರಿಪಾಠಿ ವಿರುದ್ಧ ನಾಲ್ಕು ಎಫ್‌ಐಆರ್‌ಗಳನ್ನು ಕ್ರಮವಾಗಿ ಅಯೋಧ್ಯೆ, ಅಮೇಥಿ, ಬಾರಾಬಂಕಿ ಮತ್ತು ಲಕ್ನೋದಲ್ಲಿ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. “ಎಫ್‌ಐಆರ್‌ಗಳು ರಾಜಕೀಯ ಪ್ರೇರಿತವಾಗಿದ್ದು, ಅರ್ಜಿದಾರರ ವಿರುದ್ಧ ಕ್ಷುಲ್ಲಕ ಎಫ್‌ಐಆರ್‌ಗಳನ್ನು ದಾಖಲಿಸುವ ಮೂಲಕ ಅವರ ಪತ್ರಿಕಾ ಸ್ವಾತಂತ್ರ್ಯವನ್ನು ಹಾಳುಮಾಡಲು ಪ್ರಯತ್ನಿಸಲಾಗುತ್ತಿದೆ” ಎಂದು ಮನವಿಯಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ: ಮುಡಾ ಪ್ರಕರಣ | ರಾಜ್ಯಪಾಲರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣ | ರಾಜ್ಯಪಾಲರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...