Homeಮುಖಪುಟತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

- Advertisement -
- Advertisement -

ತಮಿಳುನಾಡಿನಲ್ಲಿ 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿದೆ. ಮುಂದಿನ 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಒಂದಾಗಲು ಹೊರಟಿದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ, ಅಣ್ಣಾಮಲೈಗೆ ಬಿಜೆಪಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎಂದು indianexpress.com ವರದಿ ಮಾಡಿದೆ.

ಮುಂದಿನ ಚುನಾವಣೆಗೆ ಎಐಎಡಿಎಂಕೆ ಮತ್ತು ಬಿಜೆಪಿ ಜಾತಿ ಲೆಕ್ಕಾಚಾರ ಹಾಕಿದೆಯಂತೆ. ಅದರಂತೆ, ಎಐಎಡಿಎಂಕೆ ಮತ್ತು ಬಿಜೆಪಿ ಎರಡೂ ಪಕ್ಷಗಳ ಮುಖ (ಫೇಸ್‌) ಆಗಿ ‘ಗೌಂಡರ್’ ಸಮುದಾಯದವರು  ಮುಂದುವರೆಯುವುದು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿಲ್ಲ. ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಂತೆಯೇ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಕೂಡ ಪ್ರಬಲ ಹಿಂದುಳಿದ ಸಮುದಾಯಕ್ಕೆ ಸೇರಿದವರು ಮತ್ತು ಪಶ್ಚಿಮ ಕೊಂಗು ಪ್ರದೇಶವರು (ಇಲ್ಲಿ ಗೌಂಡರ್‌ಗಳು ಪ್ರಬಲರು).

ಮೈತ್ರಿ ಮಾತುಕತೆಯ ಮೊದಲ ಹೆಜ್ಜೆಯಾಗಿ ಎಐಎಡಿಎಂಕೆಯ ಪಳನಿಸ್ವಾಮಿಯವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ಈ ಬೆನ್ನಲ್ಲೇ ಅಣ್ಣಾಮಲೈ ಕೂಡ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅಣ್ಣಾಮಲೈ ಅವರೇ ಎರಡೂ ಪಕ್ಷಗಳ ನಾಯಕರು ಒಂದೇ ಸಮುದಾಯವರು ಆಗಿರುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹಾಗಾಗಿ, ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ಸಮುದಾಯದ ಒಬ್ಬರನ್ನು ನೇಮಿಸುವ ಯೋಚನೆಯಲ್ಲಿದೆ. ಅಣ್ಣಾಮಲೈಗೆ ರಾಷ್ಟ್ರೀಯ ಬಿಜೆಪಿಯಲ್ಲಿ ಹೈಕಮಾಂಡ್ ಸ್ಥಾನ ಕೊಡುವ ಸಾಧ್ಯತೆ ಇದೆ.

ಒಂದು ವೇಳೆ ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆ, ಆ ಸ್ಥಾನಕ್ಕೆ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ನೇಮಕಗೊಳ್ಳುವ ಸಾಧ್ಯತೆ ಇದೆ. ಜಯಲಲಿತಾ ಅವರ ನಾಯಕತ್ವದಡಿಯಲ್ಲಿ ಎಐಎಡಿಎಂಕೆಯಲ್ಲಿದ್ದ ಪ್ರಭಾವಿ ತೇವರ್ ಸಮುದಾಯಕ್ಕೆ ಸೇರಿದ ತಿರುನಲ್ವೇಲಿಯ ಜನಪ್ರಿಯ ನಾಯಕರಾಗಿದ್ದಾರೆ ಈ ನಾಗೇಂದ್ರನ್‌. ಈ ಹಿಂದೆ ಜಯಲಲಿತಾ ಅವರ ಆಪ್ತೆ ವಿ. ಕೆ ಶಶಿಕಲಾ ಮೂಲಕ ಎಐಎಡಿಎಂಕೆ ತೇವರ್ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಂಡಿತ್ತು.

“ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಅವರಿಗೆ ಕೊಡುವ ಶಿಕ್ಷೆಯಲ್ಲ ಅಥವಾ ಹಿಂಬಡ್ತಿಯೂ ಅಲ್ಲ. ಬಿಜೆಪಿ ಪಶ್ಚಿಮ ತಮಿಳುನಾಡಿನ ಆಚೆಗೂ ತನ್ನ ಹಿಡಿತವನ್ನು ಬಲಪಡಿಸಲು ಬಯಸುತ್ತಿದೆ. ನಾಗೇಂದ್ರನ್ ಅವರಂತಹ ತೇವರ್ ಸಮುದಾಯದ ನಾಯಕನಿಗೆ ಪಕ್ಷದ ಚುಕ್ಕಾಣಿ ಕೊಡುವುದರಿಂದ ದಕ್ಷಿಣ ಜಿಲ್ಲೆಗಳು ಮತ್ತು ಅದರಾಚೆಗೆ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸಲು ಸಹಾಯವಾಗುತ್ತದೆ. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ಡಿಎಂಕೆಯ ಭದ್ರಕೋಟೆಯನ್ನು ಬೇಧಿಸಬೇಕಿದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿರುವುದಾಗಿ indianexpress.com ವರದಿ ತಿಳಿಸಿದೆ.

ಭಾನುವಾರ ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಣ್ಣಾಮಲೈ, ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟದ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದು, “ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಒಂದು ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನೀವು ಅದನ್ನೇ ಪಕ್ಷದ ಅಂತಿಮ ಅಭಿಪ್ರಾಯವಾಗಿ ತೆಗೆದುಕೊಳ್ಳಬಹುದು” ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್‌ಗೆ ತಮಿಳುನಾಡಿನ ವಿವರವಾದ ರಾಜಕೀಯ ಅಧ್ಯಯನ ನೀಡುವಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಣ್ಣಾಮಲೈ “ಒಬ್ಬ ಕೇಡರ್ ಮತ್ತು ನಾಯಕನಾಗಿ, ನಾನು ಸೂಕ್ಷ್ಮ ವಿಶ್ಲೇಷಣೆಯನ್ನು ಮಾಡಿದ್ದೇನೆ ಮತ್ತು ರಾಜ್ಯ ಘಟಕದ ಪ್ರಸ್ತುತ ಸ್ಥಿತಿ ಮತ್ತು ಅದು ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಪುರಾವೆಗಳೊಂದಿಗೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ವಿವರಿಸಿದ್ದೇನೆ” ಎಂದಿದ್ದಾರೆ.

ತಮಿಳುನಾಡಿನ ಚುನಾವಣಾ ವ್ಯವಸ್ಥೆಯನ್ನು ಐದು ವಲಯಗಳ ಮೂಲಕ ವಿವರಿಸಿದ ಅಣ್ಣಾಮಲೈ, ಬಿಜೆಪಿ ಪಶ್ಚಿಮ ಪ್ರದೇಶದಲ್ಲಿ (54 ಸ್ಥಾನಗಳು) ಮತ್ತು ದಕ್ಷಿಣ ಜಿಲ್ಲೆಗಳಲ್ಲಿ (60 ಸ್ಥಾನಗಳು) ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. 150 ಸ್ಥಾನಗಳನ್ನು ಗೆಲ್ಲಲು, ಒಂದು ಪಕ್ಷವು ಮೂರು ವಲಯಗಳನ್ನು ಗೆದ್ದುಕೊಳ್ಳಬೇಕು; 180-190 ಸ್ಥಾನಗಳನ್ನು ಪಡೆಯಲು, ಅದು ನಾಲ್ಕು ವಲಯಗಳಲ್ಲಿ ಪ್ರಾಬಲ್ಯ ಸಾಧಿಸಬೇಕು ಎಂದು ತಿಳಿಸಿದ್ದಾರೆ.

ದಕ್ಷಿಣ ತಮಿಳುನಾಡಿದಾದ್ಯಂತ ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೇಲೆ ಮೇಲುಗೈ ಸಾಧಿಸಿದೆ. ಪಶ್ಚಿಮ ತಮಿಳುನಾಡಿನ ನಿರ್ಣಾಯಕ ಪ್ರದೇಶಗಳಲ್ಲಿಯೂ ಎಐಎಡಿಎಂಕೆ ಬಿಜೆಪಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...