Homeಮುಖಪುಟವ್ಯವಸ್ಥೆಯಿಂದ ಹೊರಗುಳಿದಿರುವ ಶೇ.90ರಷ್ಟು ಜನರಿಗಾಗಿ ಜಾತಿ ಗಣತಿಯ ಅಗತ್ಯವಿದೆ : ರಾಹುಲ್ ಗಾಂಧಿ

ವ್ಯವಸ್ಥೆಯಿಂದ ಹೊರಗುಳಿದಿರುವ ಶೇ.90ರಷ್ಟು ಜನರಿಗಾಗಿ ಜಾತಿ ಗಣತಿಯ ಅಗತ್ಯವಿದೆ : ರಾಹುಲ್ ಗಾಂಧಿ

- Advertisement -
- Advertisement -

ದೇಶವ್ಯಾಪಿ ಜಾತಿ ಗಣತಿಗೆ ಮತ್ತೊಮ್ಮೆ ಒತ್ತಾಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ವ್ಯವಸ್ಥೆಯಿಂದ ಹೊರಗುಳಿದಿರುವ ಶೇಖಡ 90ರಷ್ಟು ಜನರಿಗಾಗಿ ಜಾತಿ ಗಣತಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಆಯೋಜಿಸಲಾಗಿದ್ದ ‘ಸಂವಿಧಾನ್ ಸಮ್ಮಾನ್ ಸಮ್ಮೇಳನ’ ದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಶೇ. 90ರಷ್ಟು ಮಂದಿ ವ್ಯವಸ್ಥೆಯಿಂದ ಹೊರಗಿದ್ದಾರೆ. ಅವರ ಬಳಿ ಕೌಶಲ ಹಾಗೂ ಜ್ಞಾನವಿದ್ದರೂ, ವ್ಯವಸ್ಥೆಯೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ. ಇದೇ ಕಾರಣಕ್ಕಾಗಿ ನಾವು ಜಾತಿ ಗಣತಿಗೆ ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ.

ಸಮಾಜದ ವಿವಿಧ ವರ್ಗಗಳ ಪಾಲುದಾರಿಕೆಯನ್ನು ಖಾತರಿಪಡಿಸುವುದಕ್ಕೂ ಮುನ್ನ, ಅವುಗಳ ಸಂಖ್ಯೆಯನ್ನು ಗಣತಿ ಮಾಡಬೇಕಾದ ಅಗತ್ಯವಿದೆ. ಕಾಂಗ್ರೆಸ್ ಪಾಲಿಗೆ ಜಾತಿ ಗಣತಿಯು ನೀತಿ ನಿರೂಪಣೆಯ ಬುನಾದಿಯಾಗಿದೆ. ಜಾತಿ ಗಣತಿ ಇಲ್ಲದೆ ನಾವು ನೈಜ ಭಾರತದಲ್ಲಿ ನೀತಿ ನಿರೂಪಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಮಗೆ ದತ್ತಾಂಶ ಬೇಕಿದೆ. ಎಷ್ಟು ಮಂದಿ ದಲಿತರು, ಇತರೆ ಹಿಂದುಳಿದ ವರ್ಗಗಳು, ಆದಿವಾಸಿಗಳು, ಮಹಿಳೆಯರು, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ಜಾತಿಯ ಜನರಿದ್ದಾರೆ ಎಂಬುವುದು ಬೇಕಿದೆ. ನಾವು ಈ ಜಾತಿ ಗಣತಿಯ ಆಗ್ರಹದ ಮೂಲಕ ಸಂವಿಧಾನವನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ. ಸಂವಿಧಾನವು ಕೇವಲ ಶೇ. 10ರಷ್ಟು ಜನರಿಗೆ ಮಾತ್ರವಲ್ಲ, ಬದಲಿಗೆ ದೇಶದ ಎಲ್ಲಾ ನಾಗರಿಕರಿಗೂ ಸೇರಿದ್ದು ಎಂದಿದ್ದಾರೆ.

ಇದನ್ನೂ ಓದಿ : ಮೇಲಾಧಿಕಾರಿಗಳು, ಪತ್ರಕರ್ತನಿಂದ ಕಿರುಕುಳ ಆರೋಪ : ದಲಿತ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...