Homeಮುಖಪುಟಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ: ಹೆಚ್. ಕಾಂತರಾಜು ಸ್ಪಷ್ಟನೆ

ಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ: ಹೆಚ್. ಕಾಂತರಾಜು ಸ್ಪಷ್ಟನೆ

- Advertisement -
- Advertisement -

ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವೈಜ್ಞಾನಿಕವಾಗಿದೆ. ಅದನ್ನುಅವೈಜ್ಞಾನಿಕ ಎನ್ನುವುದು ಸರಿಯಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜು ಹೇಳಿದ್ದಾರೆ.

ಜಾತಿ ಗಣತಿ ಅವೈಜ್ಞಾನಿಕವಾಗಿ ಮಾಡಲಾಗಿದೆ, ಮೂಲ ಪ್ರತಿ ನಾಪತ್ತೆಯಾಗಿದೆ ಇತ್ಯಾದಿ ವಿಷಯಗಳು ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಕಾಂತರಾಜು, ವರದಿಯನ್ನು ನೋಡದೆ ಹೇಳಿಕೆ ನೀಡುವುದು ಸರಿಯಲ್ಲ. ವರದಿ ಬಿಡುಗಡೆಗೂ ಮೊದಲೇ ನಿರ್ಣಯ ಮಾಡುವುದು ಆಗಬಾರದು ಎಂದಿದ್ದಾರೆ.

2015ರಲ್ಲಿ ಹೆಚ್.ಕಾಂತರಾಜು ಅವರು ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಗೆ ಚಾಲನೆ ನೀಡಿತ್ತು. ಈ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವೇ ಇರುವುದರಿಂದ ವರದಿಯನ್ನು ಸ್ವೀಕರಿಸಲು ಸರ್ಕಾರ ಮುಂದಾಗಿದೆ.

ಪ್ರಸ್ತುತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಜಯ ಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಜಾತಿ ಗಣತಿಯ ವರದಿ ಸಿದ್ದಪಡಿಸಲಾಗ್ತಿದೆ ಎಂಬ ಮಾಹಿತಿ ದೊರೆತಿದೆ. ಈ ನಡುವೆ ಗಣತಿಯ ಮೂಲ ಪ್ರತಿ ನಾಪತ್ತೆಯಾಗಿ ಎಂಬ ವಿಚಾರ ಇತ್ತೀಚೆಗೆ ಮುನ್ನಲೆಗೆ ಬಂದಿತ್ತು.

ಇವೆಲ್ಲದರ ನಡುವೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಮುಖಂಡರು ವರದಿಯನ್ನು ಅವೈಜ್ಞಾನಿಕ ಮತ್ತು ಅಪೂರ್ಣ ಎಂದು ಆರೋಪಿಸಿದ್ದು, ಈ ವರದಿ ಒಪ್ಪಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...