Homeಮುಖಪುಟ'ಜಾತಿಗಣತಿ ಮಾಡಬೇಕು, ಯಾಕೆಂದರೆ...': ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

‘ಜಾತಿಗಣತಿ ಮಾಡಬೇಕು, ಯಾಕೆಂದರೆ…’: ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು

- Advertisement -
- Advertisement -

ಕೇಂದ್ರದ ಎನ್‌ಡಿಎ ಸರ್ಕಾರದ ಮೈತ್ರಿ ಪಕ್ಷವಾದ ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು “ಜನರ ಭಾವನೆಗಳನ್ನು ಗೌರವಿಸಲು” ಜಾತಿ ಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ. ಆದಾಗ್ಯೂ, ತಮ್ಮ ದೃಷ್ಟಿಕೋನದಲ್ಲಿ ಬಡತನವು “ದೊಡ್ಡ ಸಮಸ್ಯೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಬೇಕು ಎಂಬುವುದು ಪ್ರತಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.ಜಾತಿಗಣತಿ ಮಾಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಾತಿ ಗಣತಿ, ಹೌದು, ಅದನ್ನು ಮಾಡಬೇಕಾಗಿದೆ. ಅಂತದ್ದೊಂದು ಭಾವನೆ ಇದೆ, ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ. ನೀವು ಜಾತಿ ಗಣತಿ ಮಾಡಿ, ನೀವು ಆರ್ಥಿಕ ವಿಶ್ಲೇಷಣೆ ಮಾಡಿ ಅಥವಾ ನೀವು ಕೌಶಲ್ಯ ಗಣತಿ ಮಾಡಿ. ಈ ಎಲ್ಲಾ ವಿಷಯಗಳನ್ನು ಹೇಗೆ ಮಾಡುವುದು ಮತ್ತು ಆರ್ಥಿಕ ಅಸಮಾನತೆಗಳನ್ನು ಕಡಿಮೆ ಮಾಡುವುದು ಹೇಗೆ ಎಂಬುವುದರ ಬಗ್ಗೆ ಕೆಲಸ ಮಾಡಬೇಕು” ಎಂದು ಚಂದ್ರಬಾಬು ನಾಯ್ಡು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಜಾತಿಗಣತಿ ಮಾಡಬೇಕು

ಇದನ್ನೂಓದಿ: ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

“ಜಾತಿ ಗಣತಿಗಾಗಿ ಸಾರ್ವಜನಿಕ ಬೇಡಿಕೆಯಿದ್ದು, ಅದನ್ನು ನೀವು ಗೌರವಿಸಬೇಕು. ಅದರಲ್ಲಿ ಎರಡನೆ ಮಾತಿಲ್ಲ. ಅದೇ ವೇಳೆ ಬಡತನ ದೊಡ್ಡ ಸಮಸ್ಯೆಯಾಗಿದೆ. ನೀವು ದುರ್ಬಲ ವರ್ಗದವರಾಗಿದ್ದರೂ, ನಿಮ್ಮಲ್ಲಿ ಹಣವಿದ್ದರೆ ಸಮಾಜವು ನಿಮ್ಮನ್ನು ಗೌರವಿಸುತ್ತದೆ. ನೀವು ಮೇಲ್ಜಾತಿಯವರಾಗಿದ್ದರೆ ಮತ್ತು ಹಣವಿಲ್ಲದಿದ್ದರೆ ಯಾರೂ ನಿಮ್ಮನ್ನು ಗೌರವಿಸುವುದಿಲ್ಲ. ಸಂಪತ್ತು ದೊಡ್ಡ ವಿಚಾರವಾಗಿದ್ದು, ಅಲ್ಲಿ ನೀವು ಸಮತೋಲನವನ್ನು ಕಂಡುಹಿಡಿಯಬಹುದು” ಎಂದು ಅವರು ಹೇಳಿದ್ದಾರೆ.

ಆಧಾರ್ ಡೇಟಾವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಜನಗಣತಿ ನಡೆಸುವಂತೆ ನಾಯ್ಡು ಸಲಹೆ ನೀಡಿದ್ದಾರೆ. “ಹೆಚ್ಚು ಹಿಂದುಳಿದ ಜಾತಿಗಳ ಮೇಲೆ ವಿಶೇಷ ಗಮನಹರಿಸಲು, ಆಧಾರ್ ಚೌಕಟ್ಟಿನ ಅಡಿಯಲ್ಲಿ ಕುಟುಂಬದ ಜಾತಿ, ಸಾಮಾಜಿಕ-ಆರ್ಥಿಕ ಹಿನ್ನೆಲೆ ಮತ್ತು ಅವರ ಕೌಶಲ್ಯದ ಮಟ್ಟವನ್ನು ಸೇರಿಸಲು” ಅವರು ಪ್ರಸ್ತಾಪಿಸಿದ್ದಾರೆ.

ಬಡತನ ನಿರ್ಮೂಲನೆಗೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಸಮುದಾಯಗಳ ಆರ್ಥಿಕ ಸ್ಥಿತಿಯ ಬಗ್ಗೆ ಡೇಟಾವನ್ನು ಹೊಂದಿರುವುದು ಅಗತ್ಯವೆಂದು ನಾಯ್ಡು ಅವರು ಜಾತಿ ಗಣತಿಯನ್ನು ಆಗಸ್ಟ್ 2023 ರಲ್ಲಿ ಬೆಂಬಲಿಸಿದ್ದರು. 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಭರವಸೆ ನೀಡಿತ್ತು.

ಇದನ್ನೂಓದಿ: ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

2021 ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನಗಣತಿಯಿಂದ “ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ಹೊರಗಿಡುವುದು” ಪ್ರಜ್ಞಾಪೂರ್ವಕ ನೀತಿ ನಿರ್ಧಾರವಾಗಿದೆ ಎಂದು ಹೇಳಿತ್ತು. ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯ ಮಾಹಿತಿ ಸಂಗ್ರಹಿಸುವುದು ಆಡಳಿತಾತ್ಮಕವಾಗಿ ಕಷ್ಟಕರವಾಗಿದ್ದು, ನಿಖರತೆಯ ಕೊರತೆಯಿದೆ ಎಂದು ಅದು ಹೇಳಿತ್ತು.

ಅದಾಗ್ಯೂ, ರಾಷ್ಟ್ರವ್ಯಾಪಿ ಜಾತಿ ಗಣತಿಯ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆ, ಬಿಜೆಪಿ ಯೂಟರ್ನ್‌ ತೆಗೆದುಕೊಂಡಿತ್ತು. ನವೆಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯನ್ನು ಬಿಜೆಪಿ ವಿರೋಧಿಸಿಲ್ಲ, ವ್ಯಾಪಕ ಸಮಾಲೋಚನೆಯ ನಂತರ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಏಪ್ರಿಲ್ 12 ರಂದು ತಮ್ಮ ಪಕ್ಷ ಜಾತಿ ಗಣತಿಗೆ ವಿರುದ್ಧವಾಗಿಲ್ಲ ಎಂದು ಹೇಳಿದ್ದರು.

ಬಿಜೆಪಿಯ ಮಿತ್ರಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜನತಾ ದಳ (ಯುನೈಟೆಡ್) ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಕೂಡಾ ಜಾತಿ ಗಣತಿಗಾಗಿ ಪ್ರತಿಪಾದಿಸುತ್ತಿವೆ. ಸೆಪ್ಟೆಂಬರ್‌ನಲ್ಲಿ, ಬಿಜೆಪಿಯ ಮಾತೃಸಂಸ್ಥೆಯಾದ ಆರೆಸ್ಸೆಸ್‌ ಕೂಡಾ ಜಾತಿಗಣತಿಗೆ ತನ್ನ ಬೆಂಬಲವನ್ನು ಸೂಚಿಸಿತ್ತು.

ವಿಡಿಯೊ ನೋಡಿ: ಶೃಂಗೇರಿಯ ಜನ ನಾವು, ನೀವಂದುಕೊಂಡಂತೆ ಸಿರಿವಂತರಲ್ಲ.. ನಮಗಿನ್ನೂ ಸಿಕ್ಕಿಲ್ಲ ಹಕ್ಕುಪತ್ರ – ವಿನೀತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...