Homeಮುಖಪುಟಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

ಜಾತಿ ಗಣತಿ ವೆಬ್‌ಸೈಟ್ ಎರಡು ತಿಂಗಳಿನಿಂದ ಸ್ಥಗಿತ: ವರದಿ

- Advertisement -
- Advertisement -

ಭಾರತದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ವೆಬ್‌ಸೈಟ್ ಕಳೆದ ಎರಡು ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಬಗ್ಗೆ ಫೋರ್ಟಲ್‌ನ ಜವಾಬ್ಧಾರಿಯನ್ನು ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ ಸಚಿವಾಲಯವು ತಾಂತ್ರಿಕ ಕಾರಣಗಳನ್ನು ಹೇಳಿದ್ದು, ವೆಬ್‌ಸೈಟ್‌ ಮತ್ತೆ ಲೈವ್‌ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದೆ. ಆದರೆ ಕಳೆದ ಎರಡು ತಿಂಗಳಿನಿಂದ ಸಚಿವಾಲಯಕ್ಕೆ ಈ ಕುರಿತ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಎನ್ನುವುದು ವಿಪರ್ಯಾಸವಾಗಿದೆ.

2011ರಲ್ಲಿ ಭಾರತವು ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸಿದೆ, 1931ರಿಂದ ಇದು ಮೊದಲ ಜಾತಿ ಆಧಾರಿತ ಜನಗಣತಿ. 640 ಜಿಲ್ಲೆಗಳಲ್ಲಿ ಸರ್ಕಾರವು ಎಲೆಕ್ಟ್ರಾನಿಕ್ ಸಾಧನಗಳ ಮೇಲೆ ನಡೆಸಿದ ಮೊದಲ  ಕಾಗದ ರಹಿತ ಜನಗಣತಿ ಇದಾಗಿದೆ. ಇದರಲ್ಲಿ ಗ್ರಾಮಗಳಲ್ಲಿ ವಾಸಿಸುವ ಮೂರು ಕುಟುಂಬಗಳಲ್ಲಿ ಒಂದು ಕುಟುಂಬ ಭೂರಹಿತರಾಗಿದ್ದಾರೆ ಮತ್ತು ಅವರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯನ್ನು ಅವಲಂಬಿಸಿದ್ದಾರೆ ಎಂದು ಹೇಳಿದೆ. ಇದು ಗ್ರಾಮೀಣ ಭಾರತದಲ್ಲಿ ಶಿಕ್ಷಣದ ಕಳಪೆ ಸ್ಥಿತಿಯನ್ನು ಬಹಿರಂಗಪಡಿಸಿತ್ತು.

ಸರ್ಕಾರವು ವಿವಿಧ ಸಮಾಜ ಕಲ್ಯಾಣ ಯೋಜನೆಗಳಲ್ಲಿ ಸುಧಾರಣೆ ತರುವುದು ಜನಗಣತಿಯ ಉದ್ದೇಶವಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಯೋಜನೆ, ಜನ ಆರೋಗ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಸುಧಾರಿಸುವುದು ಜನಗಣತಿಯ ಗುರಿಯಾಗಿದೆ. ಜಾತಿಗಣತಿಯ ವರದಿಯ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳ ಜನರನ್ನು ಒಳಗೊಂಡಂತೆ ಹಿಂದುಳಿದ ಸಮುದಾಯಗಳು ಅಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಆದರೆ ಈ ನಿರ್ಣಾಯಕ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಈಗ ಲಭ್ಯವಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಮಾರ್ಚ್ 22ರ ವರದಿಯಲ್ಲಿ ತಿಳಿಸಿದೆ. ವರದಿಯ ಪ್ರಕಾರ, ಪೋರ್ಟಲ್ ಕನಿಷ್ಠ ಅಂದರೆ ಜನವರಿ 6, 2024ರಿಂದ ಸ್ಥಗಿತಗೊಂಡಿದೆ. ದಿ ವೈರ್‌ ಮಾರ್ಚ್ 23ರಂದು ಪ್ರಕಟಿಸಿದ ವರದಿಯಲ್ಲೂ ಈ ಬಗ್ಗೆ ಉಲ್ಲೇಖಿಸಿತ್ತು.

ಪೋರ್ಟಲ್‌ನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸಿದಾಗ, ತಾಂತ್ರಿಕ ಕಾರಣಗಳಿಂದ ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತಗೊಂಡಿದೆ ಎಂದು ಹೇಳಿದೆ. ಸಚಿವಾಲಯವು ವೆಬ್-ಸೈಟ್‌ನ್ನು ಮತ್ತೆ ಸಕ್ರಿಯಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದೆ.

ಈ ವರ್ಷದ ಜನವರಿಯಿಂದ ಕನಿಷ್ಠ ಎರಡು ಬಾರಿ ಸಚಿವಾಲಯದ ಆಂತರಿಕ ಸಭೆಗಳಲ್ಲಿ ಈ ಸಮಸ್ಯೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಹೆಸರಿಸದ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಾತಿ ಗಣತಿಯು ಅನೇಕ ರಾಜ್ಯಗಳಲ್ಲಿ ನಿರ್ಣಾಯಕ ಚುನಾವಣಾ ವಿಷಯವಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಬಿಹಾರ ತನ್ನ ಮೊದಲ ರಾಜ್ಯ ಆಧಾರಿತ ಜಾತಿ ಗಣತಿಯನ್ನು ನಡೆಸಿದೆ. ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7% ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು 15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ.

ಬಿಹಾರ ರಾಜ್ಯದ ಜನಸಂಖ್ಯೆಯಲ್ಲಿ ಪ್ರಬಲ ಜಾತಿಗಳು ಕೇವಲ 15.5% ರಷ್ಟಿದ್ದರೆ, ಅದರ ಹಿಂದುಳಿದ ಜಾತಿಗಳ ಜನ 84% ರಷ್ಟಿದ್ದಾರೆ ಎಂದು ಜನಗಣತಿಯು ಕಂಡುಹಿಡಿದಿದೆ. ಬಿಹಾರದ ಒಟ್ಟು 2.76 ಕೋಟಿ ಕುಟುಂಬಗಳಲ್ಲಿ ಸುಮಾರು 94 ಲಕ್ಷ ಕುಟುಂಬಗಳು ಅಂದರೆ 34.13% ಕುಟುಂಬಗಳು ಆರ್ಥಿಕವಾಗಿ ಬಡವರಾಗಿದ್ದಾರೆ ಮತ್ತು ತಿಂಗಳಿಗೆ ರೂ 6,000 ಕ್ಕಿಂತ ಕಡಿಮೆ ಆದಾಯವನ್ನು ಹೊಂದಿದ್ದಾರೆ. ಈ ಮಾಹಿತಿಯನ್ನು ಆಧರಿಸಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಡವರು ಮತ್ತು ಅಂಚಿನಲ್ಲಿರುವವರನ್ನು ಗುರಿಯಾಗಿಸಿಕೊಂಡು ಕಾರ್ಯಕ್ರಮಗಳನ್ನು ಘೋಷಿಸಿದ್ದರು. ನವೆಂಬರ್ 2023ರಲ್ಲಿ ಅವರು 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಘೋಷಿಸಿದ್ದರು ಮತ್ತು SC ಗಳು, STಗಳು ಮತ್ತು OBC ಗಳಿಗೆ 65% ಮೀಸಲಾತಿಯನ್ನು ಹೆಚ್ಚಿಸುವ ಯೋಜನೆಗಳನ್ನು ಘೋಷಿಸಿದ್ದರು.

ಬಿಹಾರದ ಬಳಿಕ ಆಂಧ್ರ ಪ್ರದೇಶವು ಜಾತಿ ಸಮೀಕ್ಷೆಯ ಘೋಷಿಸಿದ ಎರಡನೇ ರಾಜ್ಯವಾಗಿದೆ. ಅದರ ಸಮೀಕ್ಷೆಯು ಈ ವರ್ಷದ ಜನವರಿ 19ರಂದು ಪ್ರಾರಂಭವಾಗಿದೆ. ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು 2024ರ ಲೋಕಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿ ಗಣತಿ ನಡೆಸುವುದಾಗಿ ಘೋಷಿಸಿವೆ.

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...