Homeಮುಖಪುಟಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

ಕಾಲೇಜುಗಳಲ್ಲಿ ಜಾತಿ ತಾರತಮ್ಯ : ಯುಜಿಸಿಯಿಂದ ಮಾಹಿತಿ ಕೋರಿದ ಸುಪ್ರೀಂ ಕೋರ್ಟ್, ಕ್ರಮದ ಭರವಸೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದ ವಿರುದ್ದ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಮಾಹಿತಿ ಒದಗಿಸುವಂತೆ ವಿಶ್ವವಿದ್ಯಾನಿಲಯಗಳ ಧನ ಸಹಾಯ ಆಯೋಗ (ಯುಜಿಸಿ)ಕ್ಕೆ ಶುಕ್ರವಾರ (ಜ.3) ಸೂಚಿಸಿದೆ.

ಯುಜಿಸಿಯ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ) ನಿಯಮಗಳು-2012ರ ಅಡಿ ಎಷ್ಟು (ಕೇಂದ್ರ, ರಾಜ್ಯ, ಖಾಸಗಿ, ಡೀಮ್ಡ್) ವಿಶ್ವವಿದ್ಯಾನಿಲಯಗಳಲ್ಲಿ ಸಮಾನ ಅವಕಾಶದ ಘಟಕ ಸ್ಥಾಪನೆಯಾಗಿವೆ ಮತ್ತು ಅದರಡಿ ತಾರತಮ್ಯಕ್ಕೆ ಸಂಬಂಧಿಸಿದ ಎಷ್ಟು ದೂರುಗಳನ್ನು ಸ್ವೀರಿಸಲಾಗಿದೆ ಎಂಬ ದತ್ತಾಂಶ ನೀಡುವಂತೆ ಯುಜಿಸಿಗೆ ಕೋರ್ಟ್ ಆದೇಶಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದ ವಿರುದ್ದ ಕ್ರಮಕೈಗೊಳ್ಳುವಂತೆ ಜಾತಿ ದೌರ್ಜನ್ಯಕ್ಕೆ ಬಲಿಯಾದ ವಿದ್ಯಾರ್ಥಿಗಳಾದ ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿಯ ತಾಯಂದಿರು ಸುಪ್ರೀಂ ಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಮತ್ತು ವಕೀಲೆ ದಿಶಾ ವಾಡೇಕರ್ ಅವರ ವಾದ ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಯುಜಿಸಿಯಿಂದ ಮಾಹಿತಿ ಕೇಳಿದೆ.

ಯುಜಿಸಿ 2012ರ ತನ್ನ ನಿಯಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ವಾದಿಸಿದ ಅರ್ಜಿದಾರರ ಪರ ವಕೀಲರು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಆತ್ಮಹತ್ಯೆಯ ವರದಿ ಸೇರಿದಂತೆ ಇತರೆ ಮಾಹಿತಿಗಳನ್ನು ನೀಡಲು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತೆ ಮಂಡಳಿಗೆ ನಿರ್ದೇಶಿಸುವಂತೆ ಕೋರಿದ್ದಾರೆ.

ಯುಜಿಸಿ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರು, ಆಯೋಗ ರಚಿಸಿದ್ದ ಸಮಿತಿಯು ತನ್ನ ಶಿಫಾರಸನ್ನು ಸಲ್ಲಿಸಿದ್ದು, ಜಾತಿಯಾಧಾರಿತ ತಾರತಮ್ಯವನ್ನು ನಿಲ್ಲಿಸಲು ಹೊಸ ಕರಡು ನಿಯಮಾವಳಿಯನ್ನು ರಚಿಸಲಾಗಿದೆ. ಒಂದು ತಿಂಗಳೊಳಗೆ ಸಾರ್ವಜನಿಕರಿಂದ ಆಕ್ಷೇಪಗಳು ಮತ್ತು ಸಲಹೆಗಳನ್ನು ಆಹ್ವಾನಿಸಲು ಅದನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕಿದೆ. ಆ ಬಳಿಕ ಅದನ್ನು ಅಧಿಸೂಚಿಸಲಾಗುವುದು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಕರಡು ನಿಯಮಾವಳಿಗಳ ಸಂಬಂಧ ಅಧಿಸೂಚನೆ ಹೊರಡಿಸುವಂತೆ ನಿರ್ದೇಶನ ನೀಡಿದರು.

ನ್ಯಾಯಾಲಯ ಯುಜಿಸಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ, “ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಹಿತಿಯನ್ನು ಜಾತಿವಾರು ನೀಡಲು ಯುಜಿಸಿಗೆ ಸೂಚಿಸುವಂತೆ ವಕೀಲೆ ಇಂದಿರಾ ಜೈಸಿಂಗ್ ನ್ಯಾಯಾಧೀಶರನ್ನು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಒಂದೇ ಬಾರಿಗೆ ಎಲ್ಲಾ ಮಾಹಿತಿ ಕೇಳುವುದು ಬೇಡ, ಹಂತ ಹಂತವಾಗಿ ಆದೇಶಗಳನ್ನು ನೀಡುವುದಾಗಿ ತಿಳಿಸಿದರು.

2004-24ರ ನಡುವೆ ಐಐಟಿಗಳಲ್ಲಿಯೇ 115 ಆತ್ಮಹತ್ಯೆಗಳು ನಡೆದಿವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು, “ನ್ಯಾಯಾಲಯ ಈ ವಿಷಯದ ಸೂಕ್ಷ್ಮತೆಯನ್ನು ಅರಿತುಕೊಂಡಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲ್ಲಿದೆ. 2012ರ ನಿಯಮಾವಳಿಗಳನ್ನು ವಾಸ್ತವಿಕವಾಗಿ ಪಾಲಿಸಲಾಗುತ್ತಿದೆಯೇ ಎನ್ನುವುದನ್ನು ನೋಡಲು ಕೆಲವು ಪರಿಣಾಮಕಾರಿ ಕಾರ್ಯವಿಧಾನಗಳನ್ನು ನಾವು ಕಂಡುಕೊಳ್ಳಬೇಕಿದೆ” ಎಂದು ಹೇಳಿದರು.

ಇದನ್ನೂ ಓದಿ : ದೆಹಲಿ ವಿಧಾನಸಭೆ ಚುನಾವಣೆ : ಸಿಎಂ ಅತಿಶಿ ವಿರುದ್ಧ ಅಲ್ಕಾ ಲಂಬಾರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...