ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

“ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಭೋಪಾಲ್‌ನಲ್ಲಿ ಲಾಲ್ ಪರೇಡ್ ಮೈದಾನದಲ್ಲಿ ಭಾನುವಾರ ಆರ್‌ಎಸ್‌ಎಸ್ ಸ್ವಯಂಸೇವಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಭಾರತದ ಬೆಳವಣಿಗೆಯು ಇತರ ರಾಷ್ಟ್ರಗಳ ಮೇಲೆ ಪ್ರಾಬಲ್ಯ ಸಾಧಿಸುವ ಗುರಿಯನ್ನು ಹೊಂದುವ ಬದಲು ಮಾನವೀಯತೆಗೆ ಪ್ರಯೋಜನವನ್ನು ನೀಡಬೇಕು. ಪ್ರಧಾನಿ ನರೇಂದ್ರ ಮೋದಿ … Continue reading ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ