Homeರಾಷ್ಟ್ರೀಯ‘ಜಾತಿ ಸೂಚಕ ರಿಸ್ಟ್‌‌ ಬ್ಯಾಂಡ್ ವಿಚಾರ’: 17 ವರ್ಷದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಸಹಪಾಠಿಗಳು

‘ಜಾತಿ ಸೂಚಕ ರಿಸ್ಟ್‌‌ ಬ್ಯಾಂಡ್ ವಿಚಾರ’: 17 ವರ್ಷದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಸಹಪಾಠಿಗಳು

- Advertisement -
- Advertisement -

ಕೈಯ್ಯಲ್ಲಿ ಜಾತಿ ಸೂಚಕ ರಿಸ್ಟ್ ಬ್ಯಾಂಡ್‌ ಧರಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಯನ್ನು ಇತರ ಮೂವರು ವಿದ್ಯಾರ್ಥಿಗಳು ಸೇರಿಕೊಂಡು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿಯ ಶಾಲೆಯೊಂದರಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಘಟನೆಯು ಎಪ್ರಿಲ್ 25 ರಂದು ನಡೆದಿದ್ದು, ನಂತರ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಎಪ್ರಿಲ್ 30 ರಂದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಬಾಲಾಪರಾಧಿಗಳ ವಿಚಾರಣೆ ನಡೆಸಿದ್ದು, ಬಾಲನ್ಯಾಯ ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಿರುನೆಲ್ವೇಲಿ ಸಮೀಪದ ಸರ್ಕಾರಿ ಶಾಲೆಯ 12ನೇ ತರಗತಿಯ 17 ವರ್ಷದ ವಿದ್ಯಾರ್ಥಿಯು 11ನೇ ತರಗತಿಯ ವಿದ್ಯಾರ್ಥಿಗೆ ಜಾತಿ ಸೂಚಕ ರಿಸ್ಟ್ ಬ್ಯಾಂಡ್‌ ಯಾಕೆ ಹಾಕುತ್ತಿದ್ದೀಯ ಎಂದು ಕೇಳಿದ್ದಾನೆ. ಇದು ಅವರಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಇದರ ನಂತರ 11 ನೇ ತರಗತಿಗೆ ಸೇರಿದ ಇತರ ಇಬ್ಬರು ವಿದ್ಯಾರ್ಥಿಗಳು ಅವರ ನಡುವೆ ಗಲಾಟೆಗೆ ಸೇರಿಕೊಂಡಿದ್ದು, ಇದರಿಂದಾಗಿ ಶಾಲೆಯ ಆವರಣದಲ್ಲಿ ಹೊಡೆದಾಟ ನಡೆದಿದೆ.

ಇದನ್ನೂ ಓದಿ: ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರವರಿಗೆ ಮಧ್ಯಂತರ ಜಾಮೀನು

ಬಲಿಯಾದ ವಿದ್ಯಾರ್ಥಿಯೂ ಅತ್ಯಂತ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹನ್ನೊಂದನೇ ತರಗತಿಯ ವಿದ್ಯಾರ್ಥಿಯು ದಲಿತನಾಗಿದ್ದು, ಆತನ ಇಬ್ಬರು ಸಹಪಾಠಿಗಳು ಬೇರೆ ಧರ್ಮದವರಾಗಿದ್ದಾರೆ.

ಈ ಹೊಡೆದಾಟದಲ್ಲಿ ಹನ್ನೆರಡನೆಯ ತರಗತಿಯ 17 ವರ್ಷದ ಬಾಲಕನ ಮೇಲೆ ಇತರ ವಿದ್ಯಾರ್ಥಿಗಳು ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆತನ ಎಡ ಕಿವಿ ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ನಂತರ ಬಾಲಕ ಅಸ್ವಸ್ಥಗೊಂಡಿದ್ದು, ಆತನನ್ನು ತಿರುನೆಳ್‌ವೇಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಡೆದಾಟದಿಂದಾಗಿ ತಲೆಗೆ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಆದಾಗ್ಯೂ ಅವರು ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 30 ರಂದು ಬಲಿಯಾಗಿದ್ದಾರೆ.

ಹನ್ನೆರಡನೇ ತರಗತಿಯ ವಿದ್ಯಾರ್ಥಿಯ ಸಾವಿನಿಂದಾಗಿ ಪ್ರದೇಶದವು ಉದ್ವಿಗ್ನತೆ ಉಂಟಾಗಿದ್ದು, ಮೃತರ ಕುಟುಂಬ ಮತ್ತು ಗ್ರಾಮಸ್ಥರು ನ್ಯಾಯಕ್ಕಾಗಿ ಒತ್ತಾಯಿಸಿ ರಸ್ತೆ ತಡೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ನಿರ್ದಿಷ್ಟ ಜಾತಿ ಗುರುತು ಕಾಣುವ ರಿಸ್ಟ್ ಬ್ಯಾಂಡ್‌ಗಳಿಗೆ ಅನುಮತಿ ನೀಡದಂತೆ ಖಾತ್ರಿಪಡಿಸಿಕೊಳ್ಳಲು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಶಾಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ನಡೆದ ಶಾಲೆಯು ತಿರುನೆಲ್ವೇಲಿಯ ಸುಮಾರು 40 ಕಿಮೀ ದೂರದಲ್ಲಿರುವ ಅಂಬಾಸಮುದ್ರ ಪ್ರದೇಶದಲ್ಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ’: ವಿಡಿಯೋ ಸಂದೇಶದಲ್ಲಿ ಮೋದಿ, ಬಿಜೆಪಿ ವಿರುದ್ಧ ಸೋನಿಯಾ...

0
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗರು ದೇಶದಲ್ಲಿ ಸಂಕಷ್ಟದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ, ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಜ್ವಲ ಭವಿಷ್ಯಕ್ಕಾಗಿ ನಾಗರಿಕರು...