Homeಕರ್ನಾಟಕಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

- Advertisement -
- Advertisement -

ಮೂಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ‘ರಾಜ್ಯಪಾಲರು ದಲಿತ ಸಮುದಾಯಕ್ಕೆ ಸೇರಿದವರು’ ಎಂದು ಜಾತಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ವಿಚಾರವಾಗಿ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ “ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು ‘ದಲಿತ ಗುರಾಣಿ’ ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ” ಎಂದು ಹೇಳಿದ್ದಾರೆ.

“ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ” ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟಿದ್ದಾರೆ.

“ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋಟ್ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘ಪಂಜರದ ಗಿಣಿ’ಯನ್ನಾಗಿ ಯಾಕೆ ಮಾಡಿದ್ದೀರಿ? ‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ’ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ?
ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ದದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ” ಎಂದು ಸಿಎಂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘ಸಂಘಿ ಮನಸ್ಸು’’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು” ಎಂದು ಹೇಳಿದ್ದಾರೆ.

“ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ” ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

“ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋಟ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ” ಎಂದು ಸಿಎಂ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ; ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...