Homeಮುಖಪುಟತೀರ್ಪಿನ ಶೀರ್ಷಿಕೆಗಳಲ್ಲಿ ಜಾತಿ, ಧರ್ಮ ನಮೂದಿಸಬಾರದು: ಸುಪ್ರೀಂ

ತೀರ್ಪಿನ ಶೀರ್ಷಿಕೆಗಳಲ್ಲಿ ಜಾತಿ, ಧರ್ಮ ನಮೂದಿಸಬಾರದು: ಸುಪ್ರೀಂ

- Advertisement -
- Advertisement -

ನ್ಯಾಯಾಲಯಗಳು ಹೊರಡಿಸುವ ತೀರ್ಪಿನ ಶೀರ್ಷಿಕೆಗಳಲ್ಲಿ ಎಂದಿಗೂ ಜಾತಿ ಅಥವಾ ಧರ್ಮವನ್ನು ನಮೂದಿಸಬಾರದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ ಗೌತಮ್ ಎಂಬ ವ್ಯಕ್ತಿಯ ಶಿಕ್ಷೆಯನ್ನು ಕಡಿತಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜಸ್ಥಾನ ಸರ್ಕಾರ ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ರಾಜಸ್ಥಾನ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪಿನ ಶೀರ್ಷಿಕೆಗಳಲ್ಲಿ ಅಪರಾಧಿಯ ಜಾತಿಯನ್ನು ಏಕೆ ಉಲ್ಲೇಖಿಸಲಾಗಿದೆ? ಎಂದು ಪೀಠವು ಪ್ರಶ್ನಿಸಿದೆ.

”ನ್ಯಾಯಾಲಯಗಳು ಪ್ರಕರಣದ ವಿಚಾರಣೆ ನಡೆಸುವಾಗ ಆರೋಪಿಯ ಜಾತಿ ಅಥವಾ ಧರ್ಮದ ಅಗತ್ಯತೆ ಇರುವುದಿಲ್ಲ. ಆದರೆ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪುಗಳ ಶೀರ್ಷಿಕೆಯಲ್ಲಿ ಆರೋಪಿಯ ಜಾತಿಯನ್ನು ಏಕೆ ಉಲ್ಲೇಖಿಸಲಾಗಿದೆ ಎಂಬುದನ್ನು ನಮಗೆ ಅರ್ಥವಾಗುತ್ತಿಲ್ಲ” ಎಂದು ಪೀಠವು ಹೇಳಿದೆ.

ತೀರ್ಪು ಪ್ರಕಟವಾದ ನಂತರ ಶೀರ್ಷಿಕೆಯಿಂದ ಜಾತಿಯನ್ನು ತೆಗೆದುಹಾಕಲು ತಿದ್ದುಪಡಿ ಮಾಡಲಾಗುವುದು ಎಂದು ಪೀಠವು ಹೇಳಿದೆ.

ವಿಚಾರಣಾ ನ್ಯಾಯಾಲಯ ಗೌತಮ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೆ, ಹೈಕೋರ್ಟ್ ಶಿಕ್ಷೆಯನ್ನು 12 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿತ್ತು. ಅವರ ಚಿಕ್ಕ ವಯಸ್ಸು, ಬಡ ಪರಿಶಿಷ್ಟ ಜಾತಿ ಕುಟುಂಬಕ್ಕೆ ಸೇರಿದವರು ಎಂಬ ಅಂಶವನ್ನು ಹೈಕೋರ್ಟ್ ಗಣನೆಗೆ ತೆಗೆದುಕೊಂಡಿತ್ತು. ಮೇ 8, 2014 ರಿಂದ ಅವರು ಜೈಲಿನಲ್ಲಿದ್ದರು ಎಂದು ಹೈಕೋರ್ಟ್ ಗಮನಿಸಿದೆ.

ಇಂತಹ ಪ್ರಕರಣಗಳಲ್ಲಿ ಆರೋಪಿಯ ಜಾತಿಯನ್ನು ನೋಡಿ ಮೃದುತ್ವ ತೋರಲು ಸಾಧ್ಯವಿಲ್ಲ. ಮನುಷ್ಯನು ಅಭ್ಯಾಸದ ಅಪರಾಧಿಯಾಗದಿರುವುದು “ಸಂಪೂರ್ಣವಾಗಿ ಅಪ್ರಸ್ತುತ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆರೋಪಿಯ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿ ನ್ಯಾಯಾಧೀಶರ ಮನಸ್ಸಿನ ಮೇಲೆ ಪರಿಣಾಮ ಬೀರಬಾರದು. ಈ ಪ್ರಕರಣದಲ್ಲಿ, ಸಂಸ್ತಸ್ತೆಯ ಕುಟುಂಬವು ಪ್ರತಿವಾದಿಯಂತೆಯೇ ಅದೇ ಆರ್ಥಿಕ ಸ್ತರದಿಂದ ಬಂದಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

ಆದಾಗ್ಯೂ, ಅಪರಾಧದ ಸಮಯದಲ್ಲಿ ಆ ವ್ಯಕ್ತಿಗೆ ಕೇವಲ 22 ವರ್ಷ ವಯಸ್ಸಾಗಿತ್ತು ಮತ್ತು ಅವನು 2014 ರಿಂದ ಜೈಲಿನಲ್ಲಿದ್ದಾನೆ ಎಂಬ ಅಂಶವನ್ನು ನ್ಯಾಯಾಲಯ ಗಣನೆಗೆ ತೆಗೆದುಕೊಂಡಿತು. ಈ ಕಾರಣಗಳಿಗಾಗಿ, ಅವನಿಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತು.

ಇದನ್ನೂ ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ಜಾತಿ ತಾರತಮ್ಯಕ್ಕೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕನ ಬಂಧನ; ಸಹಪಾಠಿಗಳ ವಿರುದ್ಧ ಕೇಸ್‌ ದಾಖಲು

ಕೊಯಮತ್ತೂರಿನ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, ಸಹಪಾಠಿಗಳಿಂದ ಜಾತಿ ಆಧಾರಿತ ಕಿರುಕುಳಕ್ಕೆ ಒಳಗಾದ ನಂತರ, ಅಕ್ಟೋಬರ್ 21, ಬುಧವಾರದಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಒಂಬತ್ತು ರಾಜಕೀಯ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಉತ್ತರ ಪ್ರದೇಶ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸುತ್ತಿದ್ದ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; ಆರು ಜನರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ದಲಿತ ಸಮುದಾಯದ ಪುರುಷರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ನಾಲ್ವರು...

‘ಮತ್ತೊಂದು ಗಾಲ್ವಾನ್ ಸಂಭವಿಸುತ್ತಿದೆಯೇ?’: ಅರುಣಾಚಲದಲ್ಲಿ ಚೀನಾ ಸೇನೆ ಜೊತೆಗಿನ ಮುಖಾಮುಖಿ ವರದಿ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಮುಖಾಮುಖಿ ಮುಂದುವರಿದಿರುವ ವರದಿಗಳ ಕುರಿತು ಕೇಂದ್ರ ಸರ್ಕಾರ ಮೌನ ವಹಿಸಿದೆ ಎಂದು ಶುಕ್ರವಾರ (ಅ.23) ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಗಡಿ ಭದ್ರತೆ ಮತ್ತು...

ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಬೆಂಗಳೂರಿನಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಗ್ಗಟ್ಟಿನ ಹೋರಾಟ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ...

ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ಚುನಾವಣಾ ಆಯೋಗದತ್ತ ಮೆರವಣಿಗೆ, ಹಲವರನ್ನು ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಆರೋಪಿಸಿ, ದೆಹಲಿಯಲ್ಲಿ ಶುಕ್ರವಾರ ನಡೆದ ‘ಪೀಪಲ್ ಅಗೇನ್ಸ್ಟ್ ಎಸ್‌ಐಆರ್’ ಪ್ರತಿಭಟನಾ...

“ಭಿನ್ನಾಭಿಪ್ರಾಯ ಅಪರಾಧವಲ್ಲ”: ಬಾಬರಿ ಮಸೀದಿ ತೀರ್ಪಿನ ವಿರುದ್ಧ ಪೋಸ್ಟರ್ ಹಾಕಿದ್ದ 13 ಜನರ ಮೇಲಿನ ದೇಶದ್ರೋಹ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಮಂಗಳೂರು: ಸುಪ್ರೀಂ ಕೋರ್ಟ್‌ನ ಬಾಬರಿ ಮಸೀದಿ ತೀರ್ಪಿನ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಆರೋಪದ ಮೇಲೆ 13 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರದ ಅಥವಾ ನ್ಯಾಯಾಲಯದ...

ಯುಪಿ ಎಂಎಲ್‌ಸಿ ಚುನಾವಣೆ: ‘ಕಳ್ಳಮತದಾನ’ ಹಾಗೂ ‘ಬೂತ್ ಕ್ಯಾಪ್ಚರಿಂಗ್’ ರಂಪಾಟ; ಬಿಜೆಪಿ ನಾಯಕರು ಹಾಗೂ ಅಧಿಕಾರಿಗಳ ವಿರುದ್ಧ ಎಸ್‌ಪಿ ಗಂಭೀರ ಆರೋಪ!

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಎಂಎಲ್‌ಸಿ (ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ) ಚುನಾವಣೆಯ ಮತದಾನದ ವೇಳೆ ಆಡಳಿತಾರೂಢ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳು ಸಾಲು ಸಾಲು ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ...

ತಮಿಳುನಾಡು| ದಲಿತ ವಿದ್ಯಾರ್ಥಿ ಸಾವು; ಶಾಲೆಯಲ್ಲಿ ಜಾತಿ ತಾರತಮ್ಯ ಎಂದು ಆರೋಪಿಸಿದ ಪೋಷಕರು

ತಮಿಳುನಾಡಿನ ಕೊಯಮತ್ತೂರಿನಲ್ಲಿ 11ನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ಶಾಲೆಯ ಪೂಜಾ ರಜೆ ಮುಗಿಸಿ ಮರಳಿ ಶಾಲೆಗೆ ತೆರಳಿದ ದಿನವೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶಾಲೆಯಲ್ಲಿ ತನ್ನ ಮಗ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದ...

ಅರುಣಾಚಲ ಪ್ರದೇಶದಲ್ಲಿ ಚೀನಾ ಜೊತೆ ಮುಂದುವರಿದ ಮುಖಾಮುಖಿ: ಮೋದಿ ಸರ್ಕಾರದ ‘ಕಿವುಡಗೊಳಿಸುವ ಮೌನ’ವನ್ನು ಟೀಕಿಸಿದ ಕಾಂಗ್ರೆಸ್

ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದ ಸೈನಿಕರೊಂದಿಗೆ ಹಲವು ಸ್ಥಳಗಳಲ್ಲಿ ಮುಖಾಮುಖಿ ಮುಂದುವರಿದಿದೆ ಎಂಬ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರ ಹೇಳಿಕೆಯ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ...