Homeಕರ್ನಾಟಕಜಾತಿ ಸಮೀಕ್ಷೆ: ಒಕ್ಕಲಿಗ ಶಾಸಕರ ಸಭೆ ಕರೆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಜಾತಿ ಸಮೀಕ್ಷೆ: ಒಕ್ಕಲಿಗ ಶಾಸಕರ ಸಭೆ ಕರೆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

- Advertisement -
- Advertisement -

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ)ಯ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಕಾಂಗ್ರೆಸ್‌ನ ಒಕ್ಕಲಿಗ ಶಾಸಕರ ಸಭೆಯನ್ನು ಕರೆದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ತಮ್ಮ ಸಮುದಾಯವಾದ ಒಕ್ಕಲಿಗರಿಂದ ವ್ಯಕ್ತವಾಗುತ್ತಿರುವ ಕಳವಳಗಳ ನಡುವೆ ಶಿವಕುಮಾರ್ ಈ ಸಭೆಯನ್ನು ಕರೆದಿದ್ದಾರೆ.

ಸಮೀಕ್ಷೆಯ ಪ್ರಕಾರ, 48 ಉಪಜಾತಿಗಳಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆ 61.58 ಲಕ್ಷ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್ ಪಕ್ಷವು ಶಿವಕುಮಾರ್ ಸೇರಿದಂತೆ 21 ಒಕ್ಕಲಿಗ ಶಾಸಕರನ್ನು ಹೊಂದಿದೆ. ಮಂಗಳವಾರದ ಸಭೆ ಶಿವಕುಮಾರ್ ಅವರ ಅಧಿಕೃತ ನಿವಾಸದಲ್ಲಿ ನಡೆಯಲಿದೆ ಎಂದು ಪತ್ರಿಕೆ ಹೇಳಿದೆ.

“ನಾನು ಇನ್ನೂ ವರದಿಯನ್ನು ಅಧ್ಯಯನ ಮಾಡುತ್ತಿದ್ದೇನೆ. ನಮ್ಮ ಶಾಸಕರ ಸಭೆಯನ್ನು ಕರೆದಿದ್ದು, ನಾವು ವರದಿಯ ಬಗ್ಗೆ ಚರ್ಚಿಸುತ್ತೇವೆ. ಎಲ್ಲರ ಗೌರವವನ್ನು ಎತ್ತಿಹಿಡಿಯುವ ಮತ್ತು ಯಾರ ಭಾವನೆಗಳಿಗೂ ನೋವಾಗದಂತೆ ನಮ್ಮ ಸಲಹೆಗಳು ಇರುತ್ತವೆ” ಎಂದು ಶಿವಕುಮಾರ್ ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ.

2015ರ ಈ ಜಾತಿ ಸಮೀಕ್ಷೆ ವರದಿಯನ್ನು ರದ್ದುಗೊಳಿಸುವಂತೆ 2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ಅರ್ಜಿಯೊಂದು ಸಲ್ಲಿಸಲಾಗಿತ್ತು. ಅದರಲ್ಲಿ ಶಿವಕುಮಾರ್ ಕೂಡಾ ಸಹಿ ಮಾಡಿದ್ದರು.

ಈ ಮಧ್ಯೆ, ಜಾತಿ ಸಮೀಕ್ಷೆ ವರದಿಯ ವಿರೋಧದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಪಾಲಿಸಿದ್ದಾರೆ. “ಈ ವಿಷಯದ ಬಗ್ಗೆ ಚರ್ಚಿಸಲು ನಾವು ಏಪ್ರಿಲ್ 17 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದೇವೆ. ಚರ್ಚೆಯ ನಂತರ, ನಾನು (ಈ ವಿಷಯದ ಬಗ್ಗೆ) ಮಾತನಾಡುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ವರದಿಯನ್ನು ಅಧ್ಯಯನ ಮಾಡಲು ಸಮಿತಿಯನ್ನು ರಚಿಸಿ’

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಈ ವರದಿಗಳನ್ನು ವಿಶ್ಲೇಷಿಸಲು ತಜ್ಞರನ್ನು ಒಳಗೊಂಡ ಸಮಿತಿ ಅಥವಾ ಸಂಪುಟ ಉಪಸಮಿತಿಯನ್ನು ರಚಿಸುವ ಬಗ್ಗೆ ಪರಿಗಣಿಸುವಂತೆ ಕಾಂಗ್ರೆಸ್ ಎಂಎಲ್‌ಸಿ ದಿನೇಶ್ ಗೂಳಿಗೌಡ ಸೋಮವಾರ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಕೇಳಿಕೊಂಡಿದ್ದಾರೆ.

“ಇದು ಹಲವಾರು ಸಮುದಾಯಗಳಲ್ಲಿ ದಿಗ್ಭ್ರಮೆಯನ್ನುಂಟು ಮಾಡಿದೆ. ಸರ್ಕಾರ ಮತ್ತು ಕಾಂಗ್ರೆಸ್ ಉದ್ದೇಶದ ಬಗ್ಗೆ ತಪ್ಪು ಗ್ರಹಿಕೆಗಳನ್ನು ಬೆಳೆಯಲು ನಾವು ಅನುಮತಿ ನೀಡಬಾರದು. ಅಲ್ಲದೆ, ಸಾರ್ವಜನಿಕರಲ್ಲಿ ಗೊಂದಲವನ್ನು ಪರಿಹರಿಸಲು, ತಜ್ಞರ ಸಮಿತಿ ಅಥವಾ ಸಂಪುಟ ಉಪಸಮಿತಿಯನ್ನು ರಚಿಸಬೇಕು” ಎಂದು ಗೂಳಿಗೌಡ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ಬರೆದ ಪತ್ರಗಳಲ್ಲಿ ತಿಳಿಸಿದ್ದಾರೆ.

ಮರು ಸಮೀಕ್ಷೆ?

2015 ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿವಾರು ಜನಸಂಖ್ಯಾ ಅಂದಾಜಿನ ಕುರಿತು ವಿವಾದಗಳು ಉದ್ಭವಿಸುತ್ತಿರುವುದರಿಂದ, ಸಂಪುಟ ಸಚಿವರ ಒಂದು ಬಣವು ಸಮುದಾಯಗಳ ಮರು ಸಮೀಕ್ಷೆಗೆ ನಡೆಸುವಂತೆ ಪ್ರತಿಪಾದಿಸುತ್ತಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಹೇಗಿದ್ದರೂ ನಾವು (ಆಂತರಿಕ ಮೀಸಲಾತಿ ಉದ್ದೇಶಕ್ಕಾಗಿ) ಪರಿಶಿಷ್ಟ ಜಾತಿಗಳ ಸಮೀಕ್ಷೆಯನ್ನು ನಡೆಸುತ್ತಿದ್ದೇವೆ. ಇದರ ಜೊತೆಗೆಯೆ ಇತರ ಸಮುದಾಯಗಳ ಸಮೀಕ್ಷೆಯನ್ನು ಏಕೆ ಮಾಡಬಾರದು?” ಎಂದು ಸರ್ಕಾರದ ಸಚಿವರೊಬ್ಬರು ವಾದಿಸಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...