Homeಕರ್ನಾಟಕಜಾತಿ ಸಮೀಕ್ಷೆ ವರದಿ ಬಗ್ಗೆ ಏನೂ ತೀರ್ಮಾನವಾಗದೆ ಕೊನೆಗೊಂಡ ವಿಶೇಷ ಸಚಿವ ಸಂಪುಟ ಸಭೆ!

ಜಾತಿ ಸಮೀಕ್ಷೆ ವರದಿ ಬಗ್ಗೆ ಏನೂ ತೀರ್ಮಾನವಾಗದೆ ಕೊನೆಗೊಂಡ ವಿಶೇಷ ಸಚಿವ ಸಂಪುಟ ಸಭೆ!

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಆಧಾರಿತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-2015 ವರದಿ (ಜಾತಿ ಸಮೀಕ್ಷೆ ವರದಿ) ಬಗ್ಗೆ ಚರ್ಚಿಸಲು ಏಪ್ರಿಲ್ ೧೭ರ ಗುರುವಾರ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಯಾವುದೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ವರದಿಯಾಗಿದೆ. ಜಾತಿ ಸಮೀಕ್ಷೆ ವರದಿ

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ದಿನದಿಂದಲೇ ‘‘ವರದಿ ಸ್ವೀಕರಿಸುವ ನನ್ನ ನಿರ್ಧಾರ ಅಚಲ’’ ಎಂದು ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿಕೊಂಡೇ ಬಂದಿದ್ದರು. ಲೋಕಸಭೆ ಚುನಾವಣೆ ವೇಳೆ ವರದಿಯನ್ನು ಸಹ ಸ್ವೀಕರಿಸಿ, ಕಳೆದ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಓಪನ್‌ ಮಾಡಿದ್ದರು. ಅದಾಗ್ಯೂ, ಈ ಬಗ್ಗೆ ವಿಶೇಷ ಸಂಪುಟ ಸಭೆ ಕರೆದಿದ್ದರೂ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ.

ವರದಿ ಬಗ್ಗೆ ಚರ್ಚಿಸಲೆಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದರು. ಒಂದೆಡೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ತುರ್ತು ಸಭೆಗಳನ್ನು ನಡೆಸಿ, ಜಾತಿ ಗಣತಿ ವರದಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಮತ್ತೊಂದೆಡೆ ಕಾಂಗ್ರೆಸ್‌ನ ಅಹಿಂದ ನಾಯಕರು ವರದಿ ಸಾರ್ವಜನಿಕವಾಗಿ ಬಹಿಂಗವಾಗಬೇಕು ಎಂದು ಆಗ್ರಹಿಸಿದ್ದರು.

ಈ ಎಲ್ಲ ಹಿನ್ನೆಲೆಯಲ್ಲಿ ಮಹತ್ವ ಪಡೆದಿದ್ದ ಗುರುವಾರದ ಸಚಿವ ಸಂಪುಟದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಗ್ಗೆ ಚರ್ಚೆ ಅಷ್ಟೇ ನಡೆದಿದ್ದು, ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ವರದಿ ಜಾರಿಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎಂದು ಈದಿನ.ಕಾಂ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಮುಂದಿನವಾರ ಸಭೆ ಸೇರಲು ನಿರ್ಧರಿಸಲಾಗಿದ್ದು, ಅಷ್ಟರೊಳಗೆ ಅಗತ್ಯವಿರುವ ಸಮಾಲೋಚನೆ ಸಭೆಗಳನ್ನು ಮುಗಿಸಿ, ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿ ಎಲ್ಲಾ ಸಚಿವರಿಂದ ವೈಯಕ್ತಿಕವಾಗಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರದಲ್ಲಿ ಎನ್‌ಇಪಿ ಜಾರಿ | 1-5ನೇ ತರಗತಿಗಳಿಗೆ ಹಿಂದಿ ಭಾಷೆ ಕಡ್ಡಾಯ ಮಾಡದ ಬಿಜೆಪಿ ಸರ್ಕಾರ!

https://naanugauri.com/maharashtra-nep-implementation-class-1-5-hindi-language-compulsory/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...