Homeಕರ್ನಾಟಕಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

ಜಾತಿವಾದಿ, ಜನಾಂಗೀಯವಾದಿ ನಿಂದನೆ: ಆರಗ ಜ್ಞಾನೆಂದ್ರ ವಿರುದ್ಧ ಆಕ್ರೋಶ

- Advertisement -
- Advertisement -

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆರಗ ಜ್ಞಾನೇಂದ್ರ ಅವರ ಜಾತಿವಾದಿ, ಜನಾಂಗೀಯವಾದಿ ನಿಂದನೆ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಆರಗ ಜ್ಞಾನೇಂದ್ರ ಹೇಳಿಕೆ

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ನೀತಿ ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗುತ್ತಿತ್ತು. ಈ ವೇಳೆ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

”ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಖಂಡ್ರೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಹರಿಹಾಯ್ದರು.

”ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

ಆರಗ ಹೇಳಿಕೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ

ಆರಗ ಜ್ಞಾನೇಂದ್ರ ಅವರ ಈ ಅವಹೇಳನಕಾರಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದು, ”ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ” ಎಂದಿದೆ.

”ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ. ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ” ಎಂದು ಕಿಡಿಕಾರಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ

”ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ. ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ಪತ್ರಕರ್ತ ಹರ್ಷಕುಮಾರ ಕುಗ್ವೆ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ”ಈ ಆರಗ ಜ್ನಾನೇಂದ್ರ ಅವರಿಗೆ ತಾನು ಏನು ಮಾತಾಡುತ್ತಿದ್ದೇನೆ ಎನ್ನುವ ಪರಿಜ್ಞಾನವೇ ಇಲ್ಲ. ಇವರು ಸ್ವಲ್ಪ ಬಿಳಿ ಇದ್ದ ಮಾತ್ರಕ್ಕೆ ಇಡೀ ಮಲೆನಾಡಿನ ಜನರೆಲ್ಲಾ ಬಿಳಿ ಬಣ್ಣದವರಾ? ಖರ್ಗೆಯವರನ್ನು ಕಪ್ಪು ಬಣ್ಣದ ಕಾರಣಕ್ಕೆ ಹೀಗಳೆವ ಆರಗ ಜ್ನಾನೇದ್ರಗೆ ತಮ್ಮ ಭಾಗದ ದಲಿತರ ಮತ್ತು ತಳ ಸಮುದಾಯದ ಜನರ ಬಗ್ಗೆ ಯಾವ ಅಭಿಪ್ರಾಯ ಇರಲು ಸಾದ್ಯ? ಮಲೆನಾಡಿನ‌ ರೈತರು ಕೂಲಿ ಕಾರ್ಮಿಕರು ಬೇಸಗೆಯಲ್ಲಿ ಬೇಯುವುದಿಲ್ಲವೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಒಬ್ಬ ಸಚಿವರಾಗಿ ಕೆಲಸ ಮಾಡಿ ಕನಿಷ್ಟ ವಿವೇಕ ಇಟ್ಟುಕೊಳ್ಳದ ಇಂತವರು ಅಂತಿಮವಾಗಿ ಒಂದು ರೋಗಿಷ್ಟ ಸಮಾಜವನ್ನೇ ಹುಟ್ಟಿಸುತ್ತಾರೆ. ಹಾಗೆ ವೈಯಕ್ತಿಕವಾಗಿ ಟೀಕೆ ಮಾಡುತ್ತಾ ಹೋದರೆ ಸ್ವತಃ ವೈಯಕ್ತಿಕ ಬದುಕಿನಲ್ಲಿ ನಾನಾ ಪಡಿಪಾಟಲು ಎದುರಿಸುತ್ತಿರುವ ಜ್ನಾನೇಂದ್ರ ಅವರು ತಾವು ಸಹ ಗಾಜಿನ ಮನೆಯಲ್ಲಿ ಇರುವವರು ಎಂಬ ಅರಿವು ಇಟ್ಟುಕೊಳ್ಳಲಿ” ಎಂದಿದ್ದಾರೆ.

”ಮಲೆನಾಡಿನ ಜನರ, ರೈತರ ಹಕ್ಕುಗಳ ಬಗ್ಗೆ ಧನಿ ಎತ್ತುವುದು ಸ್ವಾಗತಾರ್ಹ. ಆದರೆ ಕೆಲ ತಿಂಗಳ ಹಿಂದೆ ಬಿಜೆಪಿ ಸರ್ಕಾರದ ಅವದಿಯಲ್ಲಿ ತಮ್ಮ ವ್ಯಾಪ್ತಿಯಲ್ಲೇ ಎಷ್ಟು ರೈತರ ಹೊಟ್ಟೆ ಮೇಲೆ ಅರಣ್ಯ ಇಲಾಕೆ ಹೊಡೆದಿತ್ತು, ಎಷ್ಟು ತೋಟಗಳನ್ನು ಕಡಿದು ಹಾಕಿತ್ತು ಎಂಬುದನ್ನು ಅವರು ನೆನಪು ಮಾಡಿಕೊಳ್ಳಬೇಕು. ಇನ್ನಾದರೂ ವೈಯಕ್ತಿಕವಾಗಿ ಜಾತಿ-ವರ್ಣದ ದುರಭಿಮಾನದಿಂದ ತೇಜೋವಧೆ ಮಾಡದೇ ಮಾತಾಡುವುದನ್ನ ಆರಗ ಅವರು ಕಲಿತುಕೊಳ್ಳಲಿ. ಅಗತ್ಯ ಬಿದ್ದರೆ ಕಿಮ್ಮನೆ ರತ್ನಾಕರ ಅವರ ಬಳಿ ಸಜ್ಜನಿಕೆಯಿಂದ ಮಾತಾಡುವುದನ್ನು ತರಬೇತಿ ಪಡೆದುಕೊಳ್ಳಲಿ” ಎಂದು ಬರೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಡಾ. ವಾಸು ಅವರು ಆರಗ ಜ್ಙಾನೇಂದ್ರ ಹೇಳಿಕೆ ಖಂಡಿಸಿ ಪೋಸ್ಟ್ ಮಾಡಿದ್ದು, ”ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೇ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ.”
ಈ ಮಾತನ್ನು ಹೇಳಿದ್ದು ಆರಗ ಜ್ಞಾನೇಂದ್ರ. ಈ ವ್ಯಕ್ತಿ ಗೃಹ ಸಚಿವರಾಗಿದ್ದರು. 5 ಸಾರಿ ಶಾಸಕರಾಗಿದ್ದರು. ಆಶ್ಚರ್ಯ ಏನಿದೆ? ಪತ್ರಿಕೆಯ ಸಂಪಾದಕರೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೇ ಇಂತಹ ಮಾತನ್ನು ಬರೆದಿದ್ದರು ಅದಕ್ಕೇನು ಅಂತೀರಾ? ಇದು ಅಶ್ಚರ್ಯ ಪಟ್ಟುಕೊಳ್ಳುವ ವಿಚಾರ ಅಲ್ಲ, ಇಂತಹವರ ಮನಸ್ಸಿನಲ್ಲಿರುವ ಗಟಾರದ ಕೊಳಕನ್ನು ತೊಳೆಯದೇ ಇದ್ದರೆ, ಇಂಥವು ನಾರ್ಮಲ್ ಆಗಿಬಿಡುತ್ತದೆ.
ಅಂದ ಹಾಗೆ ಯಾಕೆ ಬಿಜೆಪಿಯವರೇ ಇಂತಹ ಮಾತುಗಳನ್ನು ಹೆಚ್ಚಾಗಿ ಆಡುತ್ತಾರೆ?” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಪತ್ರಕರ್ತ ಯತಿರಾಜ್ ಬ್ಯಾಲಹಳ್ಳಿ ಪೋಸ್ಟ್ ಮಾಡಿದ್ದು, ”ಆರಗ ಜ್ಞಾನೇಂದ್ರರನ್ನು ಅಜ್ಞಾನೇಂದ್ರ ಎಂದು ಕರೆಯುವುದಿಲ್ಲ. ಯಾಕೆಂದರೆ ʼಅಜ್ಞಾನಿʼ ಎಂಬ ಜಾತಿಯೊಂದು ಇರುವುದರಿಂದ ಒಂದು ಜಾತಿಗೆ ಅವಮಾನ ಮಾಡಿದಂತಾಗುತ್ತದೆ. ಆರಗ ಜ್ಞಾನೇಂದ್ರ ಫ್ಯಾಸಿಸ್ಟ್‌ ಮತ್ತು ವಿಕೃತ ಮನುಷ್ಯ ಎಂದಷ್ಟೇ ಹೇಳಬಹುದು. ಖರ್ಗೆಯವರ ಮೈ ಬಣ್ಣ ನೋಡಿ ಅಣಕ ಮಾಡಿರುವ ಆರಗ ಜ್ಞಾನೇಂದ್ರ, ಕೇವಲ ಖರ್ಗೆಯವರಿಗೆ ಅಗೌರವ ತೋರಿಲ್ಲ. ಸಮಸ್ತ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ” ಎಂದು ಹೇಳಿದ್ದಾರೆ.

”ಕರ್ನಾಟಕ ಎಂಬ ಹೆಸರೇ ʼಕಪ್ಪುʼ ಎಂಬ ಪದದಿಂದ ಹುಟ್ಟಿದೆ. ಪ್ರಾಚೀನ ಕಾಲದಲ್ಲಿ ಕರೆಯಲ್ಪಡುತ್ತಿದ್ದ ಕರ್ನಾಟಕದ ಹೆಸರುಗಳು- ಕರ್‌ನಾಡು, ಕಮ್ಮಿತ್ತುನಾಡು(ಕಪ್ಪು ಮಣ್ಣಿನ ನಾಡು), ಕರುನಾಡರು, ಕನ್ನಾಡು, ಕರ್ನಾಡು, ಕರುನುಡುಗರಂ, ಕರುನಾಟಕ, ಕಣ್‌ನೀರ್‌, ಕನ್ನಡ, ಕನ್ನಡನಾಡು, ಕನ್ನಾಟ, ಕುಂತಳನಾಡು, ಮಹಿಷ ಮಂಡಲ- ಹೀಗೆ… ಕಪ್ಪುಮಣ್ಣಿನ ನಾಡು ಈ ಕರುನಾಡು, ಕಪ್ಪುಜನರ ನಾಡು ಈ ಕರುನಾಡು… ನಮ್ಮ ನಾಡಿನ ಮೂಲದ ಕುರಿತು, ಇಲ್ಲಿನ ಜನರ ಮೈಬಣ್ಣದ ಕುರಿತು ಅಣಕ ಮಾಡಿರುವ ಅರಗ ಜ್ಞಾನೇಂದ್ರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ರಾಜ್ಯದ ಜನತೆಗೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೇ ಅಣಕಿಸಿದ ಸಂಘಿಗಳ ಗುಂಪಿನ ಆರಗ ಜ್ಞಾನೇಂದ್ರರಿಗೆ ಪಾಠ ಕಲಿಸುವ ಸಮಯ ಬಂದಿದೆ” ಎಂದು ಬರೆದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...