Homeಕರೋನಾ ತಲ್ಲಣಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು.

- Advertisement -
- Advertisement -

ಭಾರತ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸುತ್ತಿದೆ. ಈ ನಡುವೆಯೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತೊಂದು ಆತಂಕ ಸೃಷ್ಟಿಸುವ ಮಾಹಿತಿ ನೀಡಿದೆ. ಕೊರೊನಾ ಜೊತೆಗೇ ನಾವು ಚೀನಾದ ಮತ್ತೊಂದು ವೈರಸ್ ವಿರುದ್ಧ ಹೋರಾಡಬೇಕಿದೆ. ಅದೇ ಕ್ಯಾಟ್ ಕ್ಯೂ ವೈರಸ್ (CQV).

ಈ ವೈರಸ್ ಅನ್ನು ಆರ್ಬೋವೈರಸ್ ಎಂದು ಕರೆಯಲಾಗುತ್ತದೆ. ಚೀನಾ ಮತ್ತು ವಿಯೆಟ್ನಾಂನ ಕೆಲವು ಭಾಗಗಳಲ್ಲಿ ಕೆಲ ಜಾತಿಯ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ (CQV) ಕುರುಹುಗಳು ಕಂಡುಬಂದಿವೆ.

ಪುಣೆಯ ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ವಿವಿಧ ರಾಜ್ಯಗಳಲ್ಲಿ ನಡೆಸಲಾಗಿರುವ 883 ಜನರ ರಕ್ತದ ಮಾದರಿ ಪರೀಕ್ಷೆಯಲ್ಲಿ ಹಲವರಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ದೃಢಪಟ್ಟಿದೆಯಂತೆ. ಈ ವೈರಸ್ ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ಎರಡು ಪ್ರಕರಣಗಳು ಕಂಡುಬಂದಿದ್ದವು.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಕ್ಯಾಟ್ ಕ್ಯೂ ವೈರಸ್ ಎಂದರೇನು..?

ಈ ಕ್ಯಾಟ್ ಕ್ಯೂ ವೈರಸ್ ಪ್ರಾಣಿಗಳಿಗೆ (ಸೊಳ್ಳೆಗಳು, ಹಂದಿಗಳು) ಮತ್ತು ಮನುಷ್ಯರಿಗೆ ಇಬ್ಬರಿಗೂ ಸೋಂಕು ತಗುಲುತ್ತದೆ. ವೈರಸ್‌ ಸೋಂಕಿನಿಂದ ಅಧಿಕ ಜ್ವರ, ಮೆನಿಂಜೈಟಿಸ್, ಮೆದುಳಿನ ಉರಿಯೂತದಂತಹ ಭಯಾನಕ ರೋಗಲಕ್ಷಣಗಳಿಗೆ ಕಾರಣವಾಗಬಹುದು. ವೈರಸ್ ಈಗಾಗಲೇ ಚೀನಾ ಮತ್ತು ವಿಯೆಟ್ನಾಂ ಜಿಲ್ಲೆಗಳ ಹಂದಿಗಳಲ್ಲಿ ವಾಡಿಕೆಯಂತೆ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.

ಈ ವೈರಸ್, ಆರ್ತ್ರೋಪಾಡ್ ವಾಹಕಗಳ ಮೂಲಕ ಹರಡುವ ವೈರಸ್, ಇದನ್ನು ಅರ್ಬೊವೈರಸ್ ಎಂದೂ ಕರೆಯುತ್ತಾರೆ. ತಜ್ಞರ ಪ್ರಕಾರ, 130 ಕ್ಕೂ ಹೆಚ್ಚು ವಿವಿಧ ರೀತಿಯ ಆರ್ಬೊವೈರಸ್‌ಗಳಿದ್ದು ಇವು ಮನುಷ್ಯರಲ್ಲಿ ಸೋಂಕು ಹಬ್ಬಿಸುತ್ತವೆ. ಈ ವೈರಸ್ ಲಕ್ಷಣಗಳು ಲಕ್ಷಣರಹಿತ, ಸಾಮಾನ್ಯ ಜ್ವರದ ಜೊತೆಗೆ ಅತಿಯಾದ ತೀವ್ರತೆಯನ್ನು ಹೊಂದಿರುತ್ತವೆ.

ಕ್ಯಾಟ್ ಕ್ಯೂ ವೈರಸ್ ಹೇಗೆ ಹರಡುತ್ತದೆ…?

ಸೋಂಕು ಸಾಮಾನ್ಯವಾಗಿ ಕೋಳಿ ಮತ್ತು ಸಸ್ತನಿಗಳಲ್ಲಿ ಹರಡಿದರೆ, ಸೊಳ್ಳೆಗಳು ಮತ್ತು ಕೀಟಗಳ ಮೂಲಕ  ಮೂಲಕ ಮನುಷ್ಯರಿಗೂ ಹರಡಬಹುದು. ಮನುಷ್ಯನಿಗೆ ಸೋಂಕಿತ ಸೊಳ್ಳೆ ಅಥವಾ ಕೀಟ ಕಚ್ಚಿದಾಗ ಸೋಂಕು ಹರಡಬಹುದು.

ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ಕಚ್ಚುವಿಕೆಯ ಹೊರತಾಗಿ, ರಕ್ತ ವರ್ಗಾವಣೆ, ಕಸಿ, ಲೈಂಗಿಕ ಸಂಪರ್ಕ, ಗರ್ಭಧಾರಣೆ ಮತ್ತು ಜನ್ಮ ನೀಡುವ ಸಂದರ್ಭಗಳಲ್ಲೂ ಆರ್ಬೊವೈರಸ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರಬಹುದು. ಮನುಷ್ಯರಿಗೆ ಹರಡುವ ಸಾಧ್ಯತೆ ಬಗ್ಗೆ ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

ಐಸಿಎಂಆರ್ ಪ್ರಕಾರ, ಭಾರತದಲ್ಲಿ, ಕೆಲವು ಸೊಳ್ಳೆ ತಳಿಗಳಾದ ಏಜಿಪ್ಟಿ, Cx quinquefasciatus ಮತ್ತು Cx Tritaeniorhynchus ಇವುಗಳಿಂದ ವೈರಸ್ ಹಬ್ಬುವ ಅಪಾಯ ಹೆಚ್ಚಾಗಿದೆ. ಈ ಅಧ್ಯಯನದ ಸಂಶೋಧನೆಗಳನ್ನು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್ (ಐಜೆಎಂಆರ್) ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

ಹಂದಿ, ಕಾಡು ಮೈನಾ ಹಕ್ಕಿ ಮತ್ತು ಸೊಳ್ಳೆಗಳಂತಹ ಜೀವಿಗಳಲ್ಲಿ ಕಂಡುಬರುವ ಸೋಂಕಿನ ಕುರುಹುಗಳು ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಬದಲಾಗಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಂತೆಯೇ ಇದು ಇರಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...