Homeಮುಖಪುಟಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ; ಸಾವಿನ ಸಂಖ್ಯೆ 248ಕ್ಕೆ ಏರಿಕೆ

- Advertisement -
- Advertisement -

ಸೆನ್ಯಾರ್ ಚಂಡಮಾರುತದ ಪರಿಣಾಮ ಇಂಡೋನೇಷ್ಯಾದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ- ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 248ಕ್ಕೆ ಏರಿಕೆಯಾಗಿದೆ. ರಕ್ಷಣಾ ತಂಡಗಳು ದುರಂತ ಸ್ಥಳಗಳನ್ನು ತಲುಪಲು ಹರಸಾಹಸಪಡುತ್ತಿವೆ. ಇನ್ನೂ ಮಳೆ ಮುಂದುವರಿದರೆ ಮತ್ತು ಅವಶೇಷಗಳಡಿ ಸಿಲುಕಿರುವ ಶವಗಳು ಪತ್ತೆಯಾದರೆ ಮೃತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್‌ಪಿಬಿ) ಶನಿವಾರ, ಈ ವಾರದ ಭೀಕರ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 248 ತಲುಪಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ತಿಳಿಸಿದೆ. ಪಶ್ಚಿಮ ಸುಮಾತ್ರದ ಆಗಮ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಕರ್ತರು ಹೆಚ್ಚಿನ ಶವಗಳನ್ನು ಪತ್ತೆ ಹಚ್ಚಿದ ನಂತರ ಈ ಮಾಹಿತಿ ಲಭ್ಯವಾಗಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಬಿಎನ್‌ಪಿಬಿ ತಿಳಿಸಿದೆ.

“ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಏಕೆಂದರೆ, ಇನ್ನೂ ಅನೇಕ ಶವಗಳು ಪತ್ತೆಯಾಗಿಲ್ಲ ಮತ್ತು ಅನೇಕ ಪ್ರದೇಶಗಳಿಗೆ ರಕ್ಷಣಾ ತಂಡಗಳು ತಲುಪಲು ಸಾಧ್ಯವಾಗಿಲ್ಲ ಎಂದು ಬಿಎನ್‌ಬಿಪಿ ಮುಖ್ಯಸ್ಥ ಸುಹಾರ್ಯಾಂತೊ ಹೇಳಿದ್ದಾರೆ.

ಸುಮಾತ್ರಾ ಪ್ರಾಂತ್ಯದ ಒಟ್ಟು ಸಾವಿನ ಸಂಖ್ಯೆಯ ಮೊದಲ ಅಂದಾಜು 23 ಆಗಿತ್ತು. ಆದರೆ, ಶುಕ್ರವಾರ ರಾತ್ರಿ ಪಶ್ಚಿಮ ಸುಮಾತ್ರಾ ಪ್ರಾದೇಶಿಕ ವಿಪತ್ತು ನಿರ್ವಹಣೆ ಸಂಸ್ಥೆ (ರೀಜನಲ್ ಡಿಸಾಸ್ಟರ್ ಮಿಟಿಗೇಷನ್ ಏಜೆನ್ಸಿ) ವಕ್ತಾರ ಇಲ್ಹಾಮ್ ವಹಾಬ್ ಹೇಳಿದರಂತೆ, ಈಗ 61 ಜನರು ಸತ್ತಿದ್ದಾರೆ ಮತ್ತು 90 ಜನರು ಇನ್ನೂ ಕಾಣೆಯಾಗಿದ್ದಾರೆ.

ಒಟ್ಟು 75,219 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪಶ್ಚಿಮ ಸುಮಾತ್ರದಾದ್ಯಂತ ಒಟ್ಟು 106,806 ಜನರ ಮೇಲೆ ಪ್ರಕೃತಿ ವಿಕೋಪದ ಪರಿಣಾಮ ಬೀರಿದೆ ಎಂದು ಇಲ್ಹಾಮ್ ತಿಳಿಸಿದ್ದಾರೆ.

ಅಧಿಕಾರಿಗಳು ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಉತ್ತರ ಸುಮಾತ್ರದಲ್ಲಿ 116 ಜನರು ಸಾವನ್ನಪ್ಪಿದ್ದಾರೆ. ಅಚೆ ಪ್ರಾಂತ್ಯದಲ್ಲಿ ಸಾವಿನ ಸಂಖ್ಯೆ ಕನಿಷ್ಠ 35 ಆಗಿದೆ.

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್ ದೇಶಗಳ ಹಲವು ಭಾಗಗಳು ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಲಾವೃತಗೊಂಡಿವೆ. ಮಲಯ ಪರ್ಯಾಯ ದ್ವೀಪಕಲ್ಪ ಮತ್ತು ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ನಡುವಿನ ಮಲಕ್ಕಾ ಸಮುದ್ರದಲ್ಲಿಅಪರೂಪವಾಗಿ ರೂಪುಗೊಂಡ ಒಂದು ಉಷ್ಣವಲಯದ ಚಂಡಮಾರುತದಿಂದಾಗಿ, ಮೂರು ದೇಶಗಳಲ್ಲಿ ಒಟ್ಟಾರೆಯಾಗಿ ಸುಮಾರು 400 ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿಯ ವೇಳೆಗೆ ಥೈಲ್ಯಾಂಡ್‌ನ ಎಂಟು ದಕ್ಷಿಣ ಪ್ರಾಂತ್ಯಗಳಲ್ಲಿ ಕನಿಷ್ಠ 145 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಇದೇ ವೇಳೆ 3.5 ದಶಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆಯ ಮಲೇಷ್ಯಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ನಿಂತರೂ, ಇಂಡೋನೇಷ್ಯಾದಲ್ಲಿ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಸಾವಿರಾರು ಕುಟುಂಬಗಳು ಸ್ಥಳಾಂತರಗೊಂಡಿದ್ದಾರೆ.

ಇಂಡೋನೇಷ್ಯಾದ ಉತ್ತರ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿದಿವೆ. ಪ್ರವಾಹದ ರಭಸಕ್ಕೆ ಪರ್ವತದ ತಪ್ಪಲಿನ ಗ್ರಾಮಗಳು ಕೊಚ್ಚಿ ಹೋಗಿವೆ. ಸಾವಿರಾರು ಮನೆಗಳು ಮತ್ತು ಕಟ್ಟಡಗಳು ಸಂಪೂರ್ಣ ಜಲಾವೃತಗೊಂಡಿವೆ.

ಹೆಚ್ಚು ಹಾನಿಗೊಳಗಾದ ಪ್ರದೇಶಗಳು ಹಾಳಾದ ರಸ್ತೆಗಳು ಮತ್ತು ಕಡಿತಗೊಂಡ ಸಂಪರ್ಕ ವ್ಯವಸ್ಥೆಗಳಿಂದಾಗಿ ರಕ್ಷಣಾ ತಂಡಗಳಿಂದ ಬಹುತೇಕ ಸಂಪೂರ್ಣವಾಗಿ ಬೇರ್ಪಟ್ಟಿವೆ. ಪರಿಹಾರ ಕಾರ್ಯಗಳು ಕುಸಿದುಬಿದ್ದ ಸೇತುವೆಗಳು, ಜಲಾವೃತಗೊಂಡ ರಸ್ತೆಗಳು ಮತ್ತು ಭಾರೀ ಯಂತ್ರೋಪಕರಣಗಳ ಕೊರತೆಯಿಂದಾಗಿ ವಿಳಂಬಗೊಂಡಿವೆ.

ಉತ್ತರ ಸುಮಾತ್ರಾ ಪ್ರಾಂತ್ಯದ ಸೆಂಟ್ರಲ್ ತಪನುಲಿಯ ತೀವ್ರ ಹಾನಿಗೊಳಗಾದ ಜಿಲ್ಲೆ ಮತ್ತು ಆ ಪ್ರದೇಶದ ಇತರ ಪ್ರದೇಶಗಳಿಗೆ ನೆರವು ಮತ್ತು ಸರಬರಾಜುಗಳನ್ನು ತಲುಪಿಸಲು ಪರಿಹಾರ ವಿಮಾನಗಳು ಕೆಲಸ ಮಾಡುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...