Homeಕರ್ನಾಟಕದನ ಕಳ್ಳತನ ಪ್ರಕರಣ: ಬಜರಂಗ ದಳದ ಮಾಜಿ ನಾಯಕನ ಬಂಧನ

ದನ ಕಳ್ಳತನ ಪ್ರಕರಣ: ಬಜರಂಗ ದಳದ ಮಾಜಿ ನಾಯಕನ ಬಂಧನ

ಕಾರ್ಕಾಳದ ತೆಳ್ಳಾರು ನಿವಾಸಿಯಾಗಿರುವ ಅನಿಲ್ ಪ್ರಭು(45) ಎಂಬಾತನೆ ಬಂಧಿತ ವ್ಯಕ್ತಿಯಾಗಿದ್ದಾನೆ.

- Advertisement -
- Advertisement -

ಬಜರಂಗ ದಳದ ಮಾಜಿ ಮುಖಂಡನೊಬ್ಬನನ್ನು ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾರ್ಕಾಳದ ತೆಳ್ಳಾರು ನಿವಾಸಿ ಅನಿಲ್ ಪ್ರಭು(45) ಎಂದು ಗುರುತಿಸಲಾಗಿದ್ದು, ಈತ ಬಜರಂಗ ದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ ಆಗಿದ್ದ ಎಂದು ಪೊಲೀಸ್‌ ಹೇಳಿಕೆಯನ್ನು ಉಲ್ಲೇಖಿಸಿ ವಾರ್ತಾಭಾರತಿ ವರದಿ ಮಾಡಿದೆ.

ದನಗಳನ್ನು ಕಳ್ಳತನ ಮಾಡುವರಿಗೆ ಅಭಯ ನೀಡುತ್ತಿದ್ದ ಎಂಬ ಆರೋಪದಲ್ಲಿ ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ಕೆಲ ದಿನಗಳ ಹಿಂದೆ ಕಾರ್ಕಳದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ವಾಹನ ನಿಲ್ಲಿಸುವಂತೆ ಸೂಚಿಸಿದ್ದರು. ಆದರೆ ವಾಹನ ಸವಾರನು ವಾಹನವನ್ನು ತೊರೆದು ಪರಾರಿಯಾಗಿದ್ದನು.

ಈ ವೇಳೆ ಪೊಲೀಸರು ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ದನದ ಮಾಂಸ ಪತ್ತೆಯಾಗಿತ್ತೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾರ್ಕಾಳದ ಹುಡ್ಕೋ ಕಾಲನಿ ನಿವಾಸಿ ಮುಹಮ್ಮದ್ ಯಾಸೀನ್ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪೊಲೀಸ್ ವಿಚಾರಣೆಯ ವೇಳೆ ಯಾಸೀನ್, ದನಗಳನ್ನು ಕಳವುಗೈದು ಮಾಂಸ ಮಾಡಿ ಮಾರಾಟ ಮಾಡಲು ಪೊಲೀಸರಿಂದ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಅನಿಲ್ ಪ್ರಭು ಆಶ್ವಾಸನೆ ನೀಡುತ್ತಿದ್ದ. ಅದಕ್ಕಾಗಿ ಹಣ ಪಡೆಯುತ್ತಿದ್ದ ಎಂದು ಒಪ್ಪಿಕೊಂಡಿದ್ದ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅನಿಲ್ ಪ್ರಭುವನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...