Homeಮುಖಪುಟ‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

‘ಅಶಾಂತಿ ಉಂಟಾಗಬಹುದು’: ಲಕ್ಷದ್ವೀಪ ಪ್ರವೇಶಿಸದಂತೆ ಎಡ ಹಾಗೂ ಕಾಂಗ್ರೆಸ್‌ ಸಂಸದರಿಗೆ ತಡೆ!

- Advertisement -
- Advertisement -

ಲಕ್ಷದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿರುವ ಕೇರಳದ ಹಲವಾರು ಸಂಸದರನ್ನು ಮತ್ತೊಮ್ಮೆ ತಡೆಯಲಾಗಿದೆ. ಕೇರಳದ ಆಡಳಿತ ಪಕ್ಷದ ಎಡಪಂಥೀಯ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ನ ಸಂಸದರಿಗೆ ಆಶ್ಚರ್ಯಕರ ಕಾರಣಗಳಿಗಾಗಿ ಪ್ರವೇಶವನ್ನು ತಿರಸ್ಕರಿಸಲಾಗಿದೆ.

ಎಡಪಂಥೀಯ ಸಂಸದರಿಗೆ ‘ಉತ್ತಮ ನಡವಳಿಕೆಯ ಘೋಷಣೆ’ಗಳನ್ನು ಸಲ್ಲಿಸಲು ದ್ವೀಪದ ಆಡಳಿತವು ಕೇಳಿದ್ದು, ಕಾಂಗ್ರೆಸ್ ಸಂಸದರ ಭೇಟಿಯಿಂದ ಶಾಂತಿಯುತ ದ್ವೀಪದಲ್ಲಿ ಅಶಾಂತಿ ಉಂಟಾಗುತ್ತದೆ ಎಂದು ತಿಳಿಸಿ ಪ್ರವೇಶಕ್ಕೆ ನಿರಾಕರಿಸಲಾಗಿದೆ.

ಲಕ್ಷದ್ವೀಪಕ್ಕೆ ದ್ವೀಪವಾಸಿಯಲ್ಲದವರು ತೆರಳಬೇಕೆಂದರೆ ಅಲ್ಲಿನ ದ್ವೀಪವಾಸಿಯೊಬ್ಬರು ‘ಪ್ರಾಯೋಜಕ’ ಆಗಿ ಇರಬೇಕಾಗುತ್ತದೆ. ಆದರೆ ‘ಉತ್ತಮ ನಡವಳಿಕೆಯ ಘೋಷಣೆ’ಯು ದ್ವೀಪಗಳಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ವಲಸೆ ಕಾರ್ಮಿಕರಿಗೆ ಬಳಸುವ ವ್ಯವಸ್ಥೆಯಾಗಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಎಡಪಕ್ಷಗಳ ಏಳು ಸಂಸದರ ಪ್ರಾಯೋಜಕರನ್ನು ನೋಟರಿ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಸಹಿ ಮಾಡಿದ ‘ಉತ್ತಮ ನಡವಳಿಕೆ ಘೋಷಣೆ’ಗಳನ್ನು ಸಲ್ಲಿಸಲು ಲಕ್ಷದ್ವೀಪ ಆಡಳಿತ ಕೇಳಿದೆ.

ದ್ವೀಪಗಳಿಗೆ ಭೇಟಿ ನೀಡುವ ಬಗ್ಗೆಗಿನ ಈ ಗೊಂದಲದ ಪರಿಸ್ಥಿತಿಯ ಬಗ್ಗೆ ಸಂಸದರು ಆಕ್ರೋಶಗೊಂಡಿದ್ದು, ‘‘ಇದು ಜನ ಪ್ರತಿನಿಧಿಗಳ ಶಾಸನಬದ್ದ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ಆಲಪ್ಪುಳ ಕ್ಷೇತ್ರದ ಸಂಸದ ಎ.ಎಂ.ಆರಿಫ್ ಹೇಳಿದ್ದಾರೆ. ಈ ಬಗ್ಗೆ ಸಂಸದರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿರುದ್ಧ ಆಕ್ರೋಶ, ಆರೋಪಗಳ ಸರಮಾಲೆ ಕೇಳಿಬಂದಾಗಿನಿಂದ ಎಡ ಪಕ್ಷಗಳ ಏಳು ಸಂಸದ ಅದರ ‘ಸತ್ಯ ಶೋಧನೆ’ಗಾಗಿ ದ್ವೀಪಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೊರೊನಾ ನಿರ್ಬಂಧಗಳನ್ನು ಉಲ್ಲೇಖಿಸಿ ಅವರಿಗೆ ಈ ಮೊದಲು ಪ್ರವೇಶ ನಿರಾಕರಿಸಲಾಗಿತ್ತು.

ಈ ಬಗ್ಗೆ ಸಂಸದರು ಸ್ಪೀಕರ್‌ ಮೂಲಕ ಪ್ರಫುಲ್‌ ಪಟೇಲ್ ಅವರಿಂದ ವಿವರಣೆ ಕೇಳಿದ್ದರು. ನಂತರ ಅವರು ದ್ವೀಪಗಳಿಗೆ ಪ್ರವೇಶಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಈ ವೇಳೆ, ಕಾಂಗ್ರೆಸ್ ಸಂಸದರಾದ ಹಿಬಿ ಈಡನ್ ಮತ್ತು ಟಿ.ಎನ್.ಪ್ರತಾಪನ್ ಅವರು ದ್ವೀಪಗಳಿಗೆ ಭೇಟಿ ನೀಡುವ ಅರ್ಜಿಗಳನ್ನು ಲಕ್ಷದ್ವೀಪ ಆಡಳಿತ ನಿರಾಕರಿಸಿದೆ. ಅವರ ರಾಜಕೀಯ ಚಟುವಟಿಕೆಯ ಭೇಟಿಯಿಂದಾಗಿ ದ್ವೀಪದ ಶಾಂತಿಯುತ ಪರಿಸರಕ್ಕೆ ಭಂಗ ಉಂಟಾಗುತ್ತದೆ ಎಂದು ಹೇಳಿ ಅವರ ಪ್ರವೇಶವನ್ನು ತಿರಸ್ಕರಿಸಲಾಗಿದೆ.

“ದ್ವೀಪದ ಹೊರಗಿನ ರಾಜಕೀಯ ಪಕ್ಷಗಳು ಮತ್ತು ನಾಯಕರು ದ್ವೀಪದ ಜನರು, ರಾಜಕೀಯ ಪಕ್ಷಗಳು, ಕಾರ್ಯಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿರುವುದರಿಂದ ಸಂಸದರ ಭೇಟಿಯು ದ್ವೀಪಗಳಲ್ಲಿ ಅಶಾಂತಿಗೆ ಕಾರಣವಾಗಬಹುದು” ಎಂದು ಲಕ್ಷದ್ವೀಪದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಸ್.ಅಸ್ಕರ್ ಅಲಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...