Homeಕರ್ನಾಟಕಕಾವೇರಿ ಪ್ರಾಧಿಕಾರ ಕರ್ನಾಟಕದ ಮೇಲೆ ದ್ವೇಷ ಸಾಧಿಸುತ್ತಿದೆ: ಸಚಿವ ಕೆ.ವೆಂಕಟೇಶ್

ಕಾವೇರಿ ಪ್ರಾಧಿಕಾರ ಕರ್ನಾಟಕದ ಮೇಲೆ ದ್ವೇಷ ಸಾಧಿಸುತ್ತಿದೆ: ಸಚಿವ ಕೆ.ವೆಂಕಟೇಶ್

- Advertisement -
- Advertisement -

”ಕಾವೇರಿ ನದಿ ನೀರು ಪ್ರಾಧಿಕಾರವು ಕರ್ನಾಟಕದ ಮೇಲೆ ದ್ವೇಷ ಸಾಧಿಸುವ ಆದೇಶವನ್ನು ಹೊರಡಿಸುತ್ತಿರುವಂತೆ ಅನಿಸುತ್ತಿದೆ” ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಉಸ್ತವಾರಿಯಾಗಿರುವ ವೆಂಕಟೇಶ್ ಅವರು, ಗುರುವಾರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗುಡ್ಡಗಾಡಿನ ಜನರ ಸಂಕಷ್ಟದ ಬಗ್ಗೆ ಮಾಹಿತಿ ಪಡೆದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮ ರಾಜ್ಯದಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ, ಜಲಾಶಯದಲ್ಲಿ ನೀರು ಸಂಗ್ರಹ ಮಟ್ಟ ಕುಸಿದಿದೆ, ರಾಜ್ಯದ ರೈತರು ಮತ್ತು ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗದ ಸ್ಥಿತಿಗೆ ಬಂದಿರುವಾಗ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಆದೇಶ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸುವ ಮೂಲಕ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಹೊರಡಿಸಿದ ಆದೇಶದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.

ಮಲೆ ಮಹದೇಶ್ವರ ಬೆಟ್ಟದ ಆಸು ಪಾಸಿನಲ್ಲಿರುವ ಚಂಗಡಿ ಗ್ರಾಮವನ್ನು ಸ್ಥಳಾಂತರ ಮಾಡುವ ಬಗ್ಗೆ ಸರ್ಕಾರದಿಂದ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದಲ್ಲಿ ದಲಿತ ಹಾಗೂ ಪರಿಶಿಷ್ಟ ವರ್ಗದವರಿಗೆ ಸಿ.ಎಂ. ಪಟ್ಟ ನೀಡಬೇಕೆಂಬ ಕೂಗಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾರಿಗೆ, ಯಾವ ವರ್ಗಕ್ಕೆ ಯಾವಾಗ ಅವಕಾಶ ಸಿಗುತ್ತೋ ಆಗ ಆಗುತ್ತೆ ಎನ್ನುವ ಮೂಲಕ ಚರ್ಚೆಗೆ ತೆರೆ ಎಳೆದರು.

ಈ ವೇಳೆ ಜಿಲ್ಲಾಧಿಕಾರಿ ಶಿಲ್ಪನಾಗ್, ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಮಂಜುಳ ಹಾಜರಿದ್ದರು.

ಇದನ್ನೂ ಓದಿ: ನಿಧಿ ದುರ್ಬಳಕೆ ಪ್ರಕರಣ: ತನಿಖೆಗೆ ಸಹಕರಿಸುವಂತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂಕೋರ್ಟ್ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...