Homeಕರ್ನಾಟಕತಮಿಳುನಾಡಿಗೆ ನ.1ರಿಂದ ಪ್ರತಿದಿನ 2,600 ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶ

ತಮಿಳುನಾಡಿಗೆ ನ.1ರಿಂದ ಪ್ರತಿದಿನ 2,600 ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶ

- Advertisement -
- Advertisement -

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನ.1ರಿಂದ 15ರವರೆಗೆ ಪ್ರತಿದಿನ 2,600 ಕ್ಯೂಸೆಕ್‌ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.

ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ಆದೇಶವನ್ನು ನೀಡಲಾಗಿದೆ.  ಸಮಿತಿಯ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್‌ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡುತ್ತಿದೆ. ಈ ಹಿಂದೆ ಅಕ್ಟೋಬರ್‌ 15ರಿಂದ 31ರ ವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ಆದೇಶ ಹೊರಡಿಸಿತ್ತು.

ಅದಕ್ಕೂ ಮೊದಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 15 ದಿನ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಲಾಗಿತ್ತು. ಸುಪ್ರೀಂಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.

ಇದಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ದೆಹಲಿಯಲ್ಲಿ ಕರ್ನಾಟಕದ ಸಂಸದರು ಮತ್ತು ಸಚಿವರ ಜೊತೆ ಸಭೆ ನಡೆಸಿದ್ದರು. ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದರು.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಸರ್ವಪಕ್ಷಗಳ ಸಭೆಯಲ್ಲಿ ಮಹತ್ವದ ನಿರ್ಣಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...