Homeಕರ್ನಾಟಕತಮಿಳುನಾಡಿಗೆ ಕಾವೇರಿ ನೀರು ಹರಿಬಿಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ

ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ

- Advertisement -
- Advertisement -

ಕಾವೇರಿ ನದಿ ನೀರಿಗಾಗಿ ಕರ್ನಾಟಕ-ತಮಿಳುನಾಡಿನ ಕಿತ್ತಾಟ ಮುಂದುವರೆದಿದ್ದು, ಅಂತಿಮವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದಷ್ಟೆ ನೀರು ಬಿಡಬೇಕು ಎಂದು ಇಂದು (ಆಗಸ್ಟ್ 29) ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಪಟ್ಟು ಹಿಡಿದರು. ಅತ್ತ ತಮಿಳುನಾಡು ಸಹ ಯಾವ ಆಧಾರದ ಮೇಲೆ ನೀರು ಬಿಡಲು ಸಾಧ್ಯವಿಲ್ಲ ಎನ್ನುತ್ತೀರಿ? ಮೆಥಡಾಲೋಜಿಯನ್ನು ಸಭೆಯ ಮುಂದಿಡಿ ಎಂದು ತಮಿಳುನಾಡು ಅಧಿಕಾರಿಗಳ ಪಟ್ಟು ಹಿಡಿದರು.

ಅಂತಿಮವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದಷ್ಟೆ ನೀರು ಬಿಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ.

ನಿನ್ನೆ(ಆಗಸ್ಟ್ 28) ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಮುಂದಿನ 15 ದಿನ ನಿತ್ಯ 5000 ಕ್ಯೂಸೆಕ್ ನೀರು ಹರಿಸಬೇಕು ಎಂದು ಸೂಚಿಸಿತ್ತು. ಇದಕ್ಕೆ ಕರ್ನಾಟಕವು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇಂದು ನಡೆದ ಸಭೆಯಲ್ಲೂ ಸಹ ಯಾವುದೇ ಕಾರಣಕ್ಕೂ ನೀರು ಹರಿಸಲು ಆಗುವುದಿಲ್ಲ ಎಂದು ಕರ್ನಾಟಕ ಅಧಿಕಾರಿಗಳು ಹೇಳಿದರು.

”ಕರ್ನಾಟಕದ ಪರಿಸ್ಥಿತಿ ಬಹಳ ಕಠಿಣವಾಗಿದೆ. ಹೀಗಾಗಿ ತಮಿಳುನಾಡಿಗೆ ಡ್ಯಾಮ್​ನಿಂದ ನೀರು ಬಿಡಲು ಸಾಧ್ಯವಿಲ್ಲ” ಎಂದು ಕರ್ನಾಟಕದ ಅಧಿಕಾರಿಗಳು ಪ್ರಸ್ತಾಪಿಸಿದರು. ಇದರಿಂದ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕದ ವಾಸ್ತವ ಸ್ಥಿತಿ ಬಗ್ಗೆ ತಮಿಳುನಾಡು ಪರ ಅಧಿಕಾರಿಗಳಿಗೆ ಮನರಿಕೆ ಮಾಡಿಕೊಡಲು ಕಸರತ್ತು ನಡೆಸಿತು. ಆದರೆ, ಇದಕ್ಕೆ ಒಪ್ಪದ ತಮಿಳುನಾಡು ಅಧಿಕಾರಿಗಳು, ಯಾವ ಆಧಾರದ ಮೇಲೆ ನೀರು ಬಿಡಲು ಸಾಧ್ಯವಿಲ್ಲ? ಮೆಥಡಾಲೋಜಿಯನ್ನು ಸಭೆಯ ಮುಂದಿಡಿ ಎಂದು ಪಟ್ಟು ಹಿಡಿದರು. ಅಂತಿಮವಾಗಿ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದಷ್ಟೆ ನೀರು ಬಿಡಬೇಕೆಂಬ ತೀರ್ಮಾನ ಕೈಗೊಳ್ಳಲಾಯಿತು.

ಕರ್ನಾಟಕ ತಮಿಳುನಾಡಿಗೆ 1900 ಕ್ಯೂಸೆಕ್‌ ನೀರು ಹರಿಸುತ್ತಿದೆ. ಆದರೆ ನಿನ್ನೆ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು ಹೆಚ್ಚುವರಿಯಾಗಿ 3,100 ಕ್ಯೂಸೆಕ್ಸ್​ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಸೂಚಿಸಿತ್ತು.

ಇದನ್ನೂ ಓದಿ: ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಆದೇಶ ನೀಡಲು ನಿರಾಕರಿಸಿದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...