Homeಕರ್ನಾಟಕಕಾವೇರಿ ವಿವಾದ: ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನಿ ಕಚೇರಿಯಿಂದ ಪ್ರತಿಕ್ರಿಯೆ ಬರುತ್ತಿಲ್ಲ; ಡಿಕೆ ಶಿವಕುಮಾರ್‌

ಕಾವೇರಿ ವಿವಾದ: ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನಿ ಕಚೇರಿಯಿಂದ ಪ್ರತಿಕ್ರಿಯೆ ಬರುತ್ತಿಲ್ಲ; ಡಿಕೆ ಶಿವಕುಮಾರ್‌

- Advertisement -
- Advertisement -

ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ನಿರಂತರವಾಗಿ ಪತ್ರ ಬರೆಯುತ್ತಲೇ ಇದ್ದೇವೆ, ಆದರೆ ಈವರೆಗೆ ಪ್ರಧಾನಿ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್‌ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ. ಈ ಬಗ್ಗೆ  ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ. ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ. ಮುಂದಿನ ವಾರ ಅವಕಾಶ ಸಿಗಬಹುದೆಂದು ಭಾವಿಸುತ್ತೇವೆ ಎಂದು  ಹೇಳಿದ್ದಾರೆ.

ಬಿಜೆಪಿಯವರಿಗೆ ಅಧಿಕಾರ ಕೈ ಬಿಟ್ಟು ಹೋಗಿರುವುದು ಸಹಿಸಿಕೊಳ್ಳಲು ಆಗುತ್ತಿಲ್ಲ. ಬಿಜೆಪಿ ಮತ್ತು ಜೆಡಿಎಸ್  ಅನಾವಶ್ಯಕ ರಾಜಕಾರಣ ಮಾಡುತ್ತಿದ್ದಾರೆ. ನಾವು ಇವರ ಮಾತಿಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ರಾಜ್ಯದ ಹಿತ ಹಾಗೂ ಅಭಿವೃದ್ಧಿ ಮುಖ್ಯ ಎಂದು ಹೇಳಿದ್ದಾರೆ.

ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ನೀರು ಹರಿಸುವುದನ್ನು ನಿಲ್ಲಿಸಲು ರಾಜ್ಯ ಸರ್ಕಾರ ಮನವಿ ಮಾಡಲಿದೆ. ಸೆಪ್ಟೆಂಬರ್ 12ರ ಬಳಿಕ ತಮಿಳುನಾಡಿಗೆ ನೀರು ನಿಲ್ಲಿಸಲು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಸುಪ್ರೀಂ ಕೋರ್ಟ್‌ಗೆ ಈ ಬಗ್ಗೆ ರಾಜ್ಯ ಸರ್ಕಾರ ಪ್ರಮಾಣ ಪ್ರತ್ರವನ್ನು ಸಲ್ಲಿಸಿದೆ.

ಇದನ್ನು ಓದಿ: ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣ: ಸ್ವಯಂಘೋಷಿತ ಗೋರಕ್ಷಕ ಮೋನು ಮಾನೇಸರ್‌ ಅರೆಸ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಶನ್‌ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಅವರನ್ನು ಆ ಬಳಿಕ ಕುಸ್ತಿ...