Homeಮುಖಪುಟಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

- Advertisement -
- Advertisement -

ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. 100 ಅಧಿಕಾರಿಗಳನ್ನೊಳಗೊಂಡ ತಂಡವು ಗುರುವಾರ ಬೆಳಗ್ಗೆ ವಿವಿಧ ನಗರಗಳಲ್ಲಿನ 30 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

2019ರಲ್ಲಿ ಖಾಸಗಿ ಕಂಪನಿಯೊಂದಕ್ಕೆ ಕಿರು ಜಲವಿದ್ಯುತ್ ಯೋಜನೆ (ಎಚ್‌ಇಪಿ)ಗಾಗಿ ಸುಮಾರು 2,200 ಕೋಟಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು ನೀಡುವಲ್ಲಿ ಅವ್ಯವಹಾರದ ಆರೋಪಗಳಿಗೆ ಈ ತನಿಖೆ ಸಂಬಂಧಿಸಿದೆ. ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಕಿರು ಜಲವಿದ್ಯುತ್ ಯೋಜನೆಯ ಸಿವಿಲ್ ಕಾಮಗಾರಿಗೆ ಪ್ಯಾಕೇಜ್‌ನ್ನು ಇ-ಟೆಂಡರ್ ಮಾಡುವ ಮಾರ್ಗಸೂಚಿಗಳನ್ನು ಅನುಸರಿಸದೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಿವಿಪಿಪಿಪಿಎಲ್ (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ಮಂಡಳಿಯ ಸಭೆಯಲ್ಲಿ ಮತ್ತೆ ಹರಾಜಿನ ಮೂಲಕ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ಅಂತಿಮವಾಗಿ ಟೆಂಡರ್‌ನ್ನು ಖಾಸಗಿ ಕಂಪನಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಮೋದಿ, ಬಿಜೆಪಿ ಸರಕಾರವನ್ನು ಹಲವು ಬಾರಿ ತರಾಟೆಗೆ ತೆಗೆದುಕೊಂಡಿದ್ದ ಸತ್ಯಪಾಲ್ ಮಲಿಕ್

2024 ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೇಳಿಕೆಯನ್ನು ನೀಡಿದ್ದರು. ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು ಎಂದು ಹೇಳಿದ್ದರು.

ಇದಲ್ಲದೆ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕೇಂದ್ರ ಸರಕಾರವನ್ನು ತರಾಟೆಗೆ ತಗೆದುಕೊಂಡಿದ್ದರು. ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ಮೋದಿ ಅವರಿಗೆ ಸಲಹೆ ನೀಡಿದಾಗ, ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಮೋದಿ ಹೇಳಿದ್ದರು ಎಂದು ಮಲಿಕ್ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಣಿಪುರ ಹಿಂಚಾರದ ಬಗ್ಗೆಯೂ ಕೇಂದ್ರ ಸರಕಾರವನ್ನು ಟೀಕಿಸಿ ಹೇಳಿಕೆ ನೀಡಿದ್ದರು.

ಇದನ್ನು ಓದಿ: ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...