Homeಮುಖಪುಟಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ವಿಫಲಗೊಳಿಸಲೆಂದು ಅವರನ್ನು ಸಿಬಿಐ ಬಂಧಿಸಿತ್ತು ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾಗಿ ವರದಿಯಾಗಿದೆ.

ಸಿಬಿಐ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ನೀಡುವ ವೇಳೆ ನ್ಯಾಯಮೂರ್ತಿ ಭುಯಾನ್ ಅವರು ಈ ವಿಚಾರ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಸಿಬಿಐ ಬಂಧನ ಉತ್ತರಕ್ಕಿಂತ ಹೆಚ್ಚು ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ. ಮಾರ್ಚ್‌ 2023ರಲ್ಲಿಯೇ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತಾದರೂ, ಅವರನ್ನು ಸಿಬಿಐ ಬಂಧಿಸಿರಲಿಲ್ಲ. ಬದಲಿಗೆ ಇಡಿ ಪ್ರಕರಣದಲ್ಲಿ ಅವರಿಗೆ ಜಾಮೀನು ದೊರೆತ ಬಳಿಕ ಸಿಬಿಐ ಕ್ರಿಯಾಶೀಲವಾಯಿತು. 22 ತಿಂಗಳಿಗೂ ಹೆಚ್ಚು ಕಾಲ ಸುಮ್ಮನಿದ್ದ ಸಿಬಿಐ, ಆನಂತರ ಕಾರ್ಯಪ್ರವೃತ್ತವಾಗಿ ಕೇಜ್ರಿವಾಲ್‌ ಅವರನ್ನು ವಶಕ್ಕೆ ನೀಡುವಂತೆ ಕೋರಿತು. ಸಿಬಿಐನ ಇಂತಹ ಕ್ರಮ ಬಂಧನದ ಸಂದರ್ಭದ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟು ಹಾಕುತ್ತದೆ. ಸಿಬಿಐ ಬಂಧನದ ಉದ್ದೇಶ ಇಡಿ ಪ್ರಕರಣದಲ್ಲಿ ನೀಡಲಾದ ಜಾಮೀನನ್ನು ವಿಫಲಗೊಳಿಸುವುದಾಗಿತ್ತು” ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.

ವಿಚಾರಣೆ ವೇಳೆ ಸಿಬಿಐ ಬಂಧನ ಕಾನೂನು ಬದ್ಧವಾಗಿದೆ ಎಂದು ನ್ಯಾ. ಸೂರ್ಯಕಾಂತ್‌ ಹೇಳಿದರೆ, ನ್ಯಾ. ಭುಯಾನ್‌ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

“ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ದೊರೆತಿರುವಾಗ, ಅವರು ಮೊದಲು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿ ಜಾಮೀನು ಪಡೆಯಬೇಕಿತ್ತು ಎಂಬ ಸಾಲಿಸಿಟರ್‌ ಜನರಲ್‌ ಎಸ್‌. ವಿ ರಾಜು ಅವರ ವಾದವನ್ನು ಪುರಸ್ಕರಿಸಲಾಗದು. ಈ ಪ್ರಕರಣದಲ್ಲಿ ಮತ್ತೊಮ್ಮೆ ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದು ಸಂಪೂರ್ಣ ಅಸಮರ್ಥನೀಯ ಎಂದ ನ್ಯಾ.ಭುಯಾನ್ ಅವರು, ಜಾಮೀನಿಗೆ ಆದ್ಯತೆ ನೀಡುವುದು ವಿಕಸಿತ ನ್ಯಾಯಶಾಸ್ತ್ರ ವ್ಯವಸ್ಥೆಯ ಒಂದು ಮುಖ. ಜಾಮೀನಿಗೇ ಆದ್ಯತೆ, ಅನಿವಾರ್ಯವಾದರೆ ಮಾತ್ರ ಜೈಲು ಎನ್ನುವುದನ್ನು ಮನಗಾಣಬೇಕು. ವಿಚಾರಣಾ ಪ್ರಕ್ರಿಯೆ ಅಥವಾ ಬಂಧನಕ್ಕೆ ಕಾರಣವಾಗುವ ಹಂತಗಳು ಕಿರುಕುಳವಾಗಿ ಮಾರ್ಪಡಾಗಬಾರದು. ಹೀಗಾಗಿ ಸಿಬಿಐ ಬಂಧನವು ನ್ಯಾಯಸಮ್ಮತವಲ್ಲ. ಮೇಲ್ಮನವಿದಾರರನ್ನು (ಕೇಜ್ರಿವಾಲ್) ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ಆದೇಶಿಸಿದ್ದಾರೆ.

ತನಿಖೆಗೆ ಸಹಕರಿಸುವುದು ಎಂದರೆ ಆರೋಪಿಯು ಪ್ರಾಸಿಕ್ಯೂಷನ್ ಬಯಸಿದ ರೀತಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದಲ್ಲ ಎಂಬುವುದಾಗಿ ನ್ಯಾಯಮೂರ್ತಿಗಳು ಸಿಬಿಐಯ ಕಿವಿ ಹಿಂಡಿದ್ದಾರೆ ಎಂದು ಬಾರ್ & ಬೆಂಚ್ ವರದಿ ಹೇಳಿದೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು | ತೀರ್ಪಿನ ಪ್ರಮುಖ ಅಂಶಗಳು; ಕೋರ್ಟ್‌ ವಿಧಿಸಿದ ಷರತ್ತುಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...