Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ : ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ

ದೆಹಲಿ ಅಬಕಾರಿ ನೀತಿ ಪ್ರಕರಣ : ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ (ಜೂನ್ 26) ಅಧಿಕೃತವಾಗಿ ಬಂಧಿಸಿದೆ.

ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಅನುಮತಿ ನೀಡಿದ ಹಿನ್ನೆಲೆ, ಕೇಜ್ರಿವಾಲ್ ಅವರನ್ನು ಸಿಬಿಐ ಔಪಚಾರಿಕವಾಗಿ ಬಂಧಿಸಿತು.

ಕೇಜ್ರಿವಾಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ ಸಲ್ಲಿಸಿದ ಮನವಿ ಮತ್ತು ಜೂನ್ 24 ರಂದು ತಿಹಾರ್‌ ಜೈಲಿನಲ್ಲಿ ತನಿಖೆಗೊಳಪಡಿಸಲು ತಾನು ಸಿಬಿಐಗೆ ನೀಡಿದ ಆದೇಶದ ಪ್ರತಿಗಳನ್ನು ಕೇಜ್ರಿವಾಲ್‌ ಅವರಿಗೆ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ .ಕೆ ಸಕ್ಸೇನಾ ಅವರು ಜುಲೈ 20, 2022 ರಂದು ನೀಡಿದ್ದ ದೂರಿನ ಮೇರೆಗೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.

ಜೂನ್ 25ರಂದು ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಜೈಲಿನಿಂದ ಪಡೆದಿದ್ದ ಸಿಬಿಐ, ಇಂದು ವಿಚಾರಣಾ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲು ಅನುಮತಿ ಕೋರಿತ್ತು.

ನ್ಯಾಯಾಲಯಕ್ಕೆ ಸಿಬಿಐ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ಅವರನ್ನು ಪ್ರಶ್ನಿಸಲು ಆದೇಶ ಪಡೆಯುವ ಬಗ್ಗೆ ತನಗೆ ಮಾಹಿತಿ ನೀಡಿಲ್ಲ. ಈ ವಿಚಾರ ಮಾಧ್ಯಮಗಳಿಂದ ಗೊತ್ತಾಗಿದೆ ಎಂದು ಕೇಜ್ರಿವಾಲ್ ಪರ ವಕೀಲ ವಿವೇಕ್ ಜೈನ್ ಹೇಳಿದ್ದಾರೆ.

“ಸಿಬಿಐ ಕ್ರಮ ಕಳವಳಕಾರಿಯಾಗಿದ್ದು ಈ ಕುರಿತ ದಾಖಲೆಗಳನ್ನು ಅಧ್ಯಯನ ಮಾಡಲು ನ್ಯಾಯಾಲಯ ಅವಕಾಶ ಮಾಡಿಕೊಡಬೇಕು. ವಿಚಾರಣೆಯನ್ನು ನಾಳೆಗೆ ಮುಂದೂಡಿ” ಎಂದು ಕೇಜ್ರಿವಾಲ್ ಪರ ಹಾಜರಾದ ಮತ್ತೊಬ್ಬ ಹಿರಿಯ ವಕೀಲ ವಿಕ್ರಮ್ ಚೌಧರಿ ಆಗ್ರಹಿಸಿದ್ದಾರೆ.

ಆದರೆ, ತನಿಖೆ ನಡೆಸುವುದು ತನ್ನ ಪರಮಾಧಿಕಾರವಾಗಿದ್ದು, ಆರೋಪಿಗಳಿಗೆ ಮಾಹಿತಿ ನೀಡಬೇಕೆಂಬ ಕಾನೂನು ಇಲ್ಲ ಎಂದು ಸಿಬಿಐ ಸಮರ್ಥಿಸಿಕೊಂಡಿದೆ.

ಸಿಬಿಐ ಪರ ವಕೀಲರು ಬಂಧನ ಕುರಿತಂತೆ ತಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು. ನಂತರ ಕೇಜ್ರಿವಾಲ್‌ ಪರ ವಕೀಲರ ವಾದ ಆಲಿಸುವುದಾಗಿ ಸ್ಪಷ್ಟಪಡಿಸಿದ ನ್ಯಾಯಾಲಯ, ದಾಖಲೆಗಳನ್ನು ಒದಗಿಸುವುದರ ಜೊತೆಗೆ ಆದೇಶ ನೀಡುವುದಾಗಿ ತಿಳಿಸಿದೆ.

ಇದನ್ನೂ ಓದಿ : ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...